ಶುಂಠಿ ಇಟ್ಟುಕೊಂಡವನೇ “ಶಾಣ”
ಅರ್ಥಶಾಸ್ತ್ರದಲ್ಲಿ ಈ ವರುಷದ ನೊಬೆಲ್ ಪ್ರಶಸ್ತಿ ಮೂರು ಜನರಿಗೆ. Massachusetts Institute of Technology ಯ ಪೀಟರ್ ಡಯಮಂಡ್, Northwestern University ಯ ಡೇಲ್ ಮಾರ್ಟನ್ಸನ್, ಮತ್ತು London School of Economics ನ ಕ್ರಿಸ್ಟಾಫರ್ ಪಿಸ್ಸಾರಿಡ್ಸ್, ಪ್ರಶಸ್ತಿ ಯನ್ನು ಮೂರು ಪಾಲು ಮಾಡಿಕೊಂಡ ಅರ್ಥಶಾಸ್ತ್ರಜ್ಞರು. ಏಕೆ ಸಿಕ್ಕಿತು ಈ ತ್ರಿಮೂರ್ತಿಗಳಿಗೆ ನೊಬೆಲ್? ಪೂರೈಕೆ ಮತ್ತು ಬೇಡಿಕೆ - supply and demand - ಮೇಲಿನ ಅಧ್ಯಯನಕ್ಕೆ ಲಭಿಸಿತು ಇವರುಗಳಿಗೆ ವಿಶ್ವದ ಅತ್ಯುನ್ನತ ಪ್ರಶಸ್ತಿ ನೊಬೆಲ್.
೧೯೭೦ ರ ದಶಕದಲ್ಲಿ ಮುಂದುವರಿದ ರಾಷ್ಟ್ರಗಳಿಗೆ “ತೈಲ ಸಂಕಷ್ಟ” ದ ನಂತರ ಎದುರಾದ ಮತ್ತೊಂದು ಸಮಸ್ಯೆ ನಿರುದ್ಯೋಗ. ನಿರುದ್ಯೋಗ, ಉದ್ಯೋಗದ ಲಭಿಕೆ ಮತ್ತು ವೇತನ, ಈ ಮೂರು ಅಂಶಗಳು ಒಂದಕ್ಕೊಂದು ತಳುಕು ಹಾಕಿಕೊಂಡು ವಿಶ್ವದ ಸರಕಾರಗಳಿಗೆ ಒಂದು ಸವಾಲಾಗಿತ್ತು. ಈ ಸಮಸ್ಯೆ ಹೇಗೆಂದರೆ ಕೆಲಸ ಕೊಡುವ ಧಣಿಗೆ ಕೆಲಸಗಾರರು ಸಿಗುವುದಿಲ್ಲ, ಕೆಲಸಗಾರಿಗೆ ಕೆಲಸ ಕೊಡುವ ಧಣಿ ಸಿಗುವುದಿಲ್ಲ. ಒಂದು ರೀತಿಯ catch 22 ಪರಿಸ್ಥಿತಿ. ಈ ಪರಿಸ್ಥಿತಿಯಿಂದ ಹೇಗೆ ಹೊರಬರಬಹುದು ಎಂದು ತೋರಿಸಿ ಕೊಟ್ಟರು ಈ ತ್ರಿಮೂರ್ತಿ ವಿಧ್ವಾಂಸರುಗಳು. “ಉದ್ಯೋಗಗಳಿದ್ದೂ ನಿರುದ್ಯೋಗ” ಸಮಸ್ಯೆಗೆ ಪರಿಹಾರ ಕಾಣುವ ನಿಟ್ಟಿನಲ್ಲಿ ನಡೆಸಿದ ಇವರುಗಳ ಅಧ್ಯಯನ ಮತ್ತು ಅವರುಗಳು ಸೂಚಿಸಿದ ಪರಿಹಾರ ವಿಶ್ವ ಸರಕಾರಗಳಿಗೆ ನೆರವಾಗುತ್ತದಂತೆ.
“ಸಪ್ಲೈ ಮತ್ತು ಡಿಮಾಂಡ್” ಎಂದರೇನು? ಬಹುತೇಕ ಜನರಿಗೆ ತಿಳಿದದ್ದೇ ಇದು, ಆದರೂ ದಿನ ನಿತ್ಯ ನಮಗೆ ಕಾಣ ಸಿಗುವ ಉದಾಹರಣೆಗಳ ಮೂಲಕ ನಾವು ಅರ್ಥೈಸಿ ಕೊಳ್ಳೋಣ ಈ phenomenon ಅನ್ನು. ಮೇಲೆ ಹೇಳಿದ “ಉದ್ಯೋಗಗಳಿದ್ದೂ ನಿರುದ್ಯೋಗ” ಗೆ ಸಂಬಂಧಿಸಿದ ಅನುಭವವಲ್ಲ ಕೆಳಗಿನದು.
ಇದು ೧೯೮೪ ರ ಮಾತು. ಒಮ್ಮೆ ತರಕಾರಿಗೆಂದು ಭದ್ರಾವತಿಯ ಪುರಸಭೆ ಒಡೆತನದ (ನಿಜವಾದ ಒಡೆಯ ರೈಲ್ವೆ ಅಂತೆ, ಈಗ ಅದನ್ನು ನೆಲಸಮಗೊಳಿಸಿದ್ದಾರೆ ರಸ್ತೆ ಅಗಲೀಕರಣದ ಕಾರಣ ಒಡ್ಡಿ ) ಮಾರುಕಟ್ಟೆಗೆ ಹೋಗಿದ್ದೆ. ಪರಿಚಯದ ಕೇರಳ ಮೂಲದ ಅಂಗಡಿಯವ ಹೇಳಿದ ಹೇ, ಶುಂಠಿ ತಗೊಂಡು ಹೋಗು, ಈ ಶುಂಠಿ ಮಾರಿಯೇ ನಿನ್ನ ಮಾವನಿಗೆ ವರದಕ್ಷಿಣೆ ಕೊಟ್ಟಿದ್ದು ಹೆಣ್ಣಿನ ಕಡೆಯವರು ಎಂದು. ನನಗೆ ಅರ್ಥವಾಗಲಿಲ್ಲ, ಆತ ಬಿಡಿಸಿ ಹೇಳಿದ. ಆ ಸಮಯದಲ್ಲಿ ರಾಜ್ಯದಲ್ಲಿ ಶುಂಠಿಗೆ ಬಂತು ಬರ, ಶುಂಟಿ ಬೆಳೆದು ಗುಡ್ಡ ಹಾಕಿದವನೇ ಶ್ರೀಮಂತ. ಲಾಟರಿ ಹೊಡೆದಂತೆ. ನನ್ನ ಅತ್ತೆಯ ಮನೆಯವರು ಜಮೀನ್ದಾರರು. ಅವರ ಲಕ್ ಖುಲಾಯಿಸಿದ್ದರಿಂದ ಎಲ್ಲಾ ಬಿಟ್ಟು ಅಂಕು ಡೊಂಕಾಗಿ ತರಕಾರಿಯಲ್ಲಿ ಶುದ್ಧ ಕುರೂಪಿಯಾದ ಶುಂಠಿಯನ್ನು ಬೆಳೆದರು ತಮ್ಮ ಹೊಲದ ತುಂಬಾ. ಬಂತು ಒಳ್ಳೆ ಬೆಲೆ, ಮಾರಿದ್ದೇ ಮಾರಿದ್ದು. ಶುಂಠಿ ಇಲ್ಲದ ಮಾರುಕಟ್ಟೆಯಲ್ಲಿ ಶುಂಠಿ ಇಟ್ಟುಕೊಂಡವನೇ “ಶಾಣ”. ಶುಂಠಿ ಬೆಳೆದವ ವಿಜಯದ ನಗೆ ಬೀರಿದ. ಜೇಬು ತುಂಬಿಸಿಕೊಂಡ. ಈಗಲೂ ನೋಡಿ, ಆ ಪಕ್ಷದಿಂದ ಈ ಪಕ್ಷ ಎಂದು ನೆಗೆಯುವ ನಾಚಿಕೆಗೆಟ್ಟ ಶಾಸಕ, ರಾಜಕಾರಣಿಯಂತೆ ನಮ್ಮ ರೈತರೂ ಒಲಾಡುತ್ತಾರೆ, ಒಮ್ಮೆ ಕಬ್ಬು ಎಂದರೆ, ಮತ್ತೊಮ್ಮೆ ಅಡಿಕೆ, ಮಗುದೊಮ್ಮೆ ರೇಶಿಮೆ, ಬಾಳೆ ಹೀಗೇ. ಯಾವುದಕ್ಕೆ ಮಾರುಕಟ್ಟೆಯಲ್ಲಿ ಕ್ಷಾಮವಿರುತ್ತದೋ ಅದನ್ನು ಪೂರೈಸಿದಾಗ ಸಿಗುವ ಲಾಭದ ಮೇಲೆ ಕಣ್ಣಿಟ್ಟು ಬೆಳೆಯುತ್ತಾರೆ ಉತ್ಪನ್ನಗಳನ್ನು. ಇದು ನಾನು ಅರ್ಥೈಸಿ ಕೊಂಡ supply demand story.
Comments
ಉ: ಶುಂಠಿ ಇಟ್ಟುಕೊಂಡವನೇ “ಶಾಣ”
In reply to ಉ: ಶುಂಠಿ ಇಟ್ಟುಕೊಂಡವನೇ “ಶಾಣ” by asuhegde
ಉ: ಶುಂಠಿ ಇಟ್ಟುಕೊಂಡವನೇ “ಶಾಣ”