ಸಂಪದ ಬಳಗಕ್ಕೆ ನವ ಯುಗದ ಹಾರ್ದಿಕ ಶುಭಾಶಯಗಳು!!!!!!!!!

ಸಂಪದ ಬಳಗಕ್ಕೆ ನವ ಯುಗದ ಹಾರ್ದಿಕ ಶುಭಾಶಯಗಳು!!!!!!!!!

 

ಸಂಪದ ಬಳಗಕ್ಕೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು!!!!!!!!! 

ಯುಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. "ಯುಗಾದಿ" ಪದದ ವ್ಯುತ್ಪತ್ತಿ "ಯುಗ+ಆದಿ" - ಹೊಸ ಯುಗದ ಆರಂಭ, ಎಂದು. ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದ ಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ "ಬೇವು-ಬೆಲ್ಲ." ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ.

ಬೇವು- ಬೆಲ್ಲದ ಮಿಶ್ರಣವನ್ನು ತಿನ್ನುವಾಗ ಹೇಳುವ ಒಂದು ಶ್ಲೋಕ ಹೀಗಿದೆ:

ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ| ಸರ್ವಾರಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ||

 

ಅದರರ್ಥ ಹೀಗಿದೆ - ನೂರು ವರುಷಗಳ ಆಯುಷ್ಯ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ.

ಈ ಯುಗಾದಿಯಲ್ಲಿ  ಸರ್ವರಿಗೂ ಮಂಗಳವಾಗಲಿ!!  

 

Rating
No votes yet

Comments