ಹೀಗೊಂದು ರೀತಿಯ ಹೊಸ ವರುಷದ ಶುಭಾಶಯಗಳು
ನಮ್ಮ ಕಂಪನಿಯಲ್ಲಿ 15 ದಿನಗಳ ಕಾಲ ರಜೆ ಇದ್ದರಿಂದ ನನ್ನೂರಿಗೆ ಹೋಗಿದ್ದ ಕಾರಣ ನಿಮಗೆ ಹೊಸ ವರುಷದ ಶುಭಾಶಯ ತಿಳಿಸಲು ಆಗಿರಲಿಲ್ಲ. ನಿಮ್ಮೆಲ್ಲರಿಗೂ ಹೊಸ ವರುಷದ ಶುಭಾಶಯ ತಿಳಿಸುವ ಸಲುವಾಗಿ ಒಂದೆರಡು ಕವನ ಬರೆದಿರುವೆನು. ಒಮ್ಮೆ ಓದಿರಿ.
ಹೊಸ ವರುಷಕ್ಕೆರಡು ಕವನಗಳು, ಕವನ ೧
ಈ ಹೊಸದಾದ ವರುಷ│ ಪ್ರತಿ ಕ್ಷಣ ಪ್ರತಿ ನಿಮಿಷ│
ಎಲ್ಲರ ಬಾಳಲಿ ತರಲಿ ತುಂಬು ಹರುಷ│
ಈ ದಿನದಿಂದ│ ಈ ಕ್ಷಣದಿಂದ│
ಮುಖದಲಿ ಸದಾ ಬೀರುತಾ ಸಂತಸ│
ಬದುಕಲಿ ಸದಾ ತೋರುತಾ ಸೊಗಸ│
ಇರುವೆಡೆಯೆಲ್ಲ ನಾವ್ ಹಂಚುತಾ ಉಲ್ಲಾಸ│
ಧರೆಯ ಆಗಿಸೋಣ ನವಿರು ಕಳೆಯ ನಿವಾಸ│
ಅದ ನೋಡಿ ಬೆಕ್ಕಸ ಬೆರಗು ಆಗಲಿ ಆ ಕೈಲಾಸ!
ಹೀಗೆ ಮೂಡಿಬಂದ ಮುಗುಳ್ನಗೆ│
ನಾಂದಿಯಾಗಲಿ ಹೊಸ ಬಗೆಯ ಗೆಲುವಿಗೆ│
ಔಷದವಾಗಲಿ ಒಳಮನದ ನೋವಿಗೆ│
ಅರಳಿಸಲಿ ಹೊಸಬಯಕೆಗಳ ಮಲ್ಲಿಗೆ│
-ನಿಮ್ಮ ಸುನಿಲ್ ಮಲ್ಲೇನಹಳ್ಳಿ
(ಚಿತ್ರಕೃಪೆ http://www.shubhashaya.com)
*********************************
ಕವನ 2
ಬನ್ನಿ ಗೆಳೆಯರೇ ಬನ್ನಿ
ಎಲ್ಲರೂ ಒಂದುಗೂಡಿ ಬನ್ನಿ│
ನಾವು ನೀವೆಲ್ಲರೂ ಸೇರಿ
ನಮ್ಮೊಳಗಿನ ಚೈತನ್ಯ ಚಿಲುಮೆ ಹರಿಸಿ│
ಆಚರಿಸುವ ಹೊಸ ವರುಷವ│
ಸಂಭ್ರಮಿಸಿ ಸವಿಯುವ ನವ ಹರುಷವ│
ಹಿಂದಣದ ಕಹಿಯನು
ಮರೆವಿನ ಹಾದಿಯಲ್ಲೇ ಮರೆತು│
ಮುಂದಣದ ಏಳಿಗೆಯ ಹಾದಿಯನು
ಮರೆಯದ ಮನದಿಂದ ನೆನೆದು│
ಒಬ್ಬರನೊಬ್ಬರು ಅಂತರಾಳದಿಂದ ಅರಿತು│
ಸಂತಸದ ಸವಿ ಸೊದೆಯಲಿ ಬೆರೆತು│
ನಮ್ಮೆಲ್ಲರ ಭವಿಷ್ಯದ ಹಾಡಿಗೆ ಬೆಳಕಾಗುವ ರಸ ಕವಿತೆಯೊಂದು
ರಚಿಸುತಾ ಕಣಿದು ಕುಣಿದು ಹಾಡುವ ಬನ್ನಿ!
- ನಿಮ್ಮ ಸುನಿಲ್ ಮಲ್ಲೇನಹಳ್ಳಿ
Comments
ಉ: ಹೀಗೊಂದು ರೀತಿಯ ಹೊಸ ವರುಷದ ಶುಭಾಶಯಗಳು