ಪುಸ್ತಕ ಪರಿಚಯ
ಲೇಖಕರು: rupamanjunath
April 25, 2009
ನಾನು ಈ ಮುಂಚೆ ಭೈರಪ್ಪನವರ ಕಾದಂಬರಿಗಳನ್ನು ಯಾಕೋ ಹೆಚ್ಚು ಓದಿಯೇ ಇಲ್ಲ. ಅದರಿಂದ ನಾನು ಎಂತಹ ತಪ್ಪು ಮಾಡಿದ್ದೆನೆಂದು ನನಗೆ ಇತ್ತೀಚೆಗೆ ತಿಳಿಯಹತ್ತಿತ್ತು. ಅವರ ಆವರಣ,ದಾಟು,ಗೃಹಭಂಗ ಕಾದಂಬರಿಗಳನ್ನು ಅವು ದೊರೆತಾಗಿನಿಂದ ಒಂದೇ ಉಸಿರಿಗೆ ಓದಿ ಮುಗಿಸಿದ್ದೆ. ಆದರೆ ಭೈರಪ್ಪನವರ 'ಪರ್ವ' ಕಾದಂಬರಿ ಮನೆಯಲ್ಲೆ ಇದ್ದರೂ ಆಮೇಲೆ ಓದಿದರಾಯ್ತೆಂಬ ಉದಾಸೀನ. ಅವರ ಕಾದಂಬರಿಗಳ ಮೇಲೆ ಒಲವು ಬೆಳೆದಿದ್ದರೂ,ಇದು ಮಹಾಭಾರತದ ಕಥೆಯಲ್ಲವೇ ಓದೋಣ ಎಂಬ ಮುಂದೂಡುವಿಕೆಯ ನಂತರ ಕಳೆದ ವಾರ ಅದನ್ನು ಕೈಗೆ…
ಲೇಖಕರು: aniljoshi
February 28, 2009
ಪೌಲೋ ಕೊಯ್ಲೋನ ಅಲ್ಕೆಮಿಸ್ಟ್ ಕಥೆ ಓದಿದೆ. ಸರಳವಾದ ಕಥೆ ಓದುತ್ತಿದ್ದಂತೆ ನಮ್ಮದೇ ನೆಲದ ಹಲವು ಕಥೆಗಳನ್ನು ನೆನಪಿಸಿತು. ಡೆಸ್ಟಿನಿ ಅಥವಾ ನಿಜವಾದ ನೆಲೆಯನ್ನು ಹುಡುಕುವವರು ದಾರಿಯಲ್ಲಿ ಬರುವ ಎಡರುಗಳಿಗೆ ಹೆದರುವದಿಲ್ಲ, ಅವರ ಆತ್ಮ ಸ್ಥೈರ್ಯ ದೊಡ್ಡದು, ಎಂತಹ ಪರೀಕ್ಷೆಯ ಗಳಿಗೆಯಲ್ಲೂ ಅವರು ಕಂಗೆಡುವದಿಲ್ಲ. ಹುಡುಕಾಟದ ಹಾದಿಯ ಶಕುನಗಳನ್ನು ಗ್ರಹಿಸುತ್ತಾರೆ. ತಮ್ಮ ಎದೆಯಾಳದ ಧ್ವನಿಯನ್ನು ಯಾವಾಗಲೂ ಕೇಳುತ್ತಾರೆ, ಅದರಂತೆ ನಡೆಯುತ್ತಾರೆ. ತಮ್ಮ ಹತ್ತಿರ ಭವಿಷ್ಯದೊಳಗೆ ಇಣುಕುವ ಯಂತ್ರವಿದ್ದರೂ…
ಲೇಖಕರು: Raghavendra B Rao
February 07, 2009
ಮನುಷ್ಯನ ಬದುಕೇ ಒಂದು ಪಯಣ. ಇದು ನಿರಂತರವೂ ಹೌದು. ಅವನು ತನ್ನ ಪಯಣದಲ್ಲಿ ಎದುರಿಸ ಬೇಕಾದ ಮತ್ತು ಎದುರಾಗಬಹುದಾದ ಸಂಗತಿಗಳನ್ನು ತಿಳಿದುಕೊಂಡು ತನ್ನ ಪಯಣದ ದಾರಿಯನ್ನು ಸುಗಮಗೊಳಿಸಲು ಪ್ರಯತ್ನಿಸುತ್ತಾನೆ. ಆದರೆ ಈ ಪಯಣ ಅವನ ಅನುಭವದ ಮೂಟೆಯಾಗಬಹುದು ಅಥವಾ ಮುಂದಿನ ಪೀಳಿಗೆಯ ಊಹನೆಯೂ ಆಗಿರಬಹುದು. ಇಂತಹ ಅದೆಷ್ಟೋ ಕಥನಕಗಳು ನಮಗೆ ದೊರೆಯುತ್ತವೆ. ಅದರಲ್ಲೂ ಪಾಶ್ಚಾತ್ಯರು ಸಾಹಸಿಗಳು ಮತ್ತು ಧೈರ್ಯಶಾಲಿಗಳು. ಅವರ ಒಂದೊಂದು ಸಾಹಸಗಳೂ ಹೊಸ ಹೊಸ ಆವಿಷ್ಕಾರಗಳಿಗೆ ನಾಂದಿಯೂ ಹೌದು. ಅಂತಹ…
ಲೇಖಕರು: D.S.NAGABHUSHANA
January 24, 2009
’ಹಳ್ಳ ಬಂತು ಹಳ್ಳ’: ಇತಿಹಾಸದ ಹಿಂದಿನ ಕಥನ ಒಂದು ಕಾಲದ ಇತಿಹಾಸವನ್ನು ತಿಳಿಯಲು ಆ ಕಾಲಕ್ಕೆ ಸಂಬಂಧಿಸಿದ ಇತಿಹಾಸ ಪುಸ್ತಕಗಳನ್ನಷ್ಟೇ ಓದಿದರೆ ಸಾಲದು. ಆ ತಿಳುವಳಿಕೆ ಅಪೂರ್ಣ ಮತ್ತು ಸೀಮಿತವಾದುದಾಗಿರುತ್ತದೆ. ಆ ಕಾಲದಲ್ಲಿ ಆಳಿದ್ದವರ ಮತ್ತು ಹೆಚ್ಚೆಂದರೆ, ಅವರ ವಿರುದ್ಧ ಪಾಳೆಯದವರ ದೃಷ್ಟಿಕೋನಗಳ ಮೂಲಕ ಅಥವಾ ಅವೆರಡರ ನಡುವಿನ ಸಂಘರ್ಷದಲ್ಲಿ ಮೂಡುವ ಬದುಕಿನ ಸ್ಥೂಲ ಚಿತ್ರವಷ್ಟೇ ಅಲ್ಲಿ ದೊರಕಬಹುದು. ಈಚಿನ ದಿನಗಳಲ್ಲಿ ಇತಿಹಾಸವೆಂಬುದು ಸಾಹಿತ್ಯ, ಸಂಸ್ಕೃತಿ, ಸಮಾಜಶಾಸ್ತ್ರ…
ಲೇಖಕರು: venkatesh
January 14, 2009
"ಭಕ್ತಾಷ್ಟಕ," ಪುಸ್ತಕದ ಸಂಪಾದಕ ಕರ್ತೃ, ಡಾ. ಶ್ರೀಪಾದ್ ರವರು, ಒಬ್ಬ ಭೌತಶಾಸ್ತ್ರದ ವಿದ್ಯಾರ್ಥಿ. ತಮ್ಮ ಪ್ರಮುಖ ಕೃಷಿ, ವಿಜ್ಞಾನವಾದಾಗ್ಯೂ ಪಾರಮಾರ್ಥದಲ್ಲಿ ವಿಶೇಷವಾದ ಆಸಕ್ತಿ, ಗೌರವ, ಹಾಗೂ ಒಲವುಳ್ಳವರು. ಇದಕ್ಕೆ ಅವರ ಮನೆತನದ ಪರಿಸರವೇ ಪ್ರಮುಖಕಾರಣ. ವಿಚಾರವಂತ ತಂದೆತಾಯಿ, ಅಜ್ಜ ಅಜ್ಜಿ, ಚಿಕ್ಕಪ್ಪ ಇವರುಗಳ ಆಶೀರ್ವಾದ ಹಾಗೂ ಜೀವನಶೈಲಿ, ಲೇಖಕರ ಹೃದಯದಲ್ಲಿ ಎಲ್ಲೋ ಒಂದು ಕಡೆ ಅಚ್ಚಾಗಿರುವ ಕಾರಣದಿಂದಲೇ, ಶ್ರೀಯವರ ಉಪನ್ಯಾಸಗಳನ್ನು ಆಲಿಸುತ್ತಿದ್ದಂತೆಯೇ ಆ ಸಂಸ್ಕಾರ ಅವರಲ್ಲಿ…
ಲೇಖಕರು: Aravind M.S
November 23, 2008
ಲೇಖಕನ ಬಗ್ಗೆ – ಜೋನಾಥನ್ ಸ್ವಿಫ್ಟ್ ಒಬ್ಬ ಹದಿನೇಳನೇ ಶತಮಾನದ ವಿಭಿನ್ನ ವ್ಯಕ್ತಿ. ಈತ ಜನರನ್ನು ಒಂದು ಒಂದು ಪಂಗಡವಾಗ್ ಪ್ರೀತಿಸಿದ, ವ್ಯಕ್ತಿಗತವಾಗಿ ದ್ವೇಷಿಸಿದ. ಮಾನವ ಸ್ವಾತಂತ್ರ್ಯದ ಪ್ರತಿಪಾದಕನಾಗಿದ್ದ ಜೋನಾಥನ್ ಒಬ್ಬ ಸಾಹಸಿ ಹಾಗೂ ವಿಕ್ಶಿಪ್ತ ಮನದ ವ್ಯಕ್ತಿ. ತನ್ನ ಕಷ್ಟ ಜೀವನದ ಮಧ್ಯೆ ಹಲವರಲ್ಲಿ ಕೆಲಸ ಮಾಡಿ ಮಾನವ ಪ್ರವೃತ್ತಿ, ಅಭ್ಯಾಸ, ಅಭಿವ್ಯಕ್ತಿಗಳನ್ನು ತಿಳಿದುಕೊಂಡ. ತನ್ನ ಗಲಿವರ್ ಟ್ರಾವಲ್ಸ್ ನಿಂದ ಲೋಕಪ್ರಸಿದ್ಧನಾದ. ರಾಜಕೀಯ ಚಾತುರ್ಯ ಹೊಂದಿದ್ದ ಅವನು ಸ್ಕಾಟ್ಲಾಂಡ್…