ಪುಸ್ತಕ ಪರಿಚಯ

ಲೇಖಕರು: Shreekant Mishrikoti
May 07, 2008
( ಇಲ್ಲಿ ಬರೆದದ್ದೆಲ್ಲವೂ ನಾನು ಬರೆದಿದ್ದಲ್ಲ ; ನಾನು ಆಯ್ದ ವಾಕ್ಯಗಳೇ ಬಹಳ - ಶ್ರೀಕಾಂತ ಮಿಶ್ರೀಕೋಟಿ) ಪ್ರಸಿದ್ಧ ತತ್ವಶಾಸ್ತ್ರಜ್ಞ , ಚಿಂತಕ, ಕಾದಂಬರಿಕಾರನ ಪ್ರಸಿದ್ಧ ಕೃತಿ ’ಲೆಮೊ’ ದ ಅನುವಾದವೇ ’ಪದಚರಿತ’ . ಇದು ಅವನ ಬಾಲ್ಯದ ’ಆತ್ಮಚರಿತ್ರೆ’ ; ಅವನನ್ನು ಕಾಡಿದ ಬರೆದಿಟ್ಟ ಶಬ್ದಗಳ ಜತೆ ನಡೆಸಿದ ಒಂದು ಸುದೀರ್ಘ ಪ್ರಣಯ ಪ್ರಸಂಗ. ಈ ಪುಸ್ತಕ ಜೀವನಾನುಭವದ ಸಂದರ್ಭದಲ್ಲಿ ಪುಸ್ತಕಗಳ ಮತ್ತು ಭಾಷೆಯ ಉಪಯುಕ್ತತೆ ಮತ್ತು ಉಪಯೋಗದ ಬಗ್ಗೆ ನಡೆಸಿರುವ ವಿಶಿಷ್ಟ ಸಂಶೋಧನೆ ಮತ್ತು…
ಲೇಖಕರು: narendra
May 01, 2008
Unaccustomed Earth ಹೆಸರಿನ ನೀಳ್ಗಥೆಗಳ ಸಂಕಲನ ಹೊರಬಿದ್ದಿದೆ. ಮನುಷ್ಯ ಸಂಬಂಧಗಳು, ಅವನ ಭಾವನೆಗಳು ಕ್ರಮೇಣ ಅರ್ಥಕಳೆದುಕೊಳ್ಳುವುದನ್ನು, ಸಡಿಲಗೊಳ್ಳುವುದನ್ನು ಮೌನವಾದ ತಲ್ಲಣಗಳಲ್ಲಿ ಗುರುತಿಸುತ್ತಲೇ ಅವುಗಳಿಂದ ಆತ ಬಿಡುಗಡೆ ಪಡೆಯುವ ಹಂತದಲ್ಲಿ ಅಥವಾ ಬಿಡುಗಡೆ ಪಡೆದ ನಂತರ ಉಳಿಯುವ ಶಿಲ್ಕು ಏನಿದೆ ಅದರಲ್ಲಿ ಆ ಸಂಬಂಧಗಳ, ಭಾವನೆಗಳ ಪ್ರಾಮಾಣಿಕತೆಯನ್ನು ಅರಸುವ ಕತೆಗಳು, ಬೇರೆ ಹೊಸ ಸಂಬಂಧದ ಹುರುಪಿನ ಆಳದಲ್ಲಿ ಹಳೆಯ ಸಂಬಂಧದ ನೆರಳುಗಳನ್ನು ಕಾಣುವ ಕಥೆಗಳು, ನಡುವಯಸ್ಸಿನಲ್ಲಿ…
ಲೇಖಕರು: narendra
April 27, 2008
ಕೃತಿ: ‘ತಲೆಮಾರು’  ಬಂಜಗೆರೆಯವರು ಅನುವಾದಿಸಿದ ಅಕ್ಸರ್ ಹೇಲಿಯ ವಿಶ್ವವಿಖ್ಯಾತ ಕಾದಂಬರಿ ರೂಟ್ಸ್. ತಲೆಮಾರು ಎನ್ನುವ ಹೆಸರಿನಲ್ಲಿ ಈ ಸಂಗ್ರಹಾನುವಾದ ಪ್ರಕಟವಾದದ್ದು 2003ರಲ್ಲಿ. ರೂಟ್ಸ್ ಹೇಲಿಯ ಕುಟುಂಬ ಚರಿತ್ರೆಯ ದಾಖಲೆ. 1976ರಲ್ಲಿ ಪ್ರಕಟವಾದದ್ದು. ಇದು ಮುವ್ವತ್ತೇಳು ಭಾಷೆಗಳಿಗೆ ಅನುವಾದಗೊಂಡಿದೆಯಂತೆ. ಇದಕ್ಕೆ ಮಿಲಿಯಗಟ್ಟಲೆ ಪ್ರತಿಗಳ ಮಾರಾಟದ ದಾಖಲೆಯಿದೆ. ಕಿರು ಧಾರಾವಾಹಿಯಾಗಿ ಟಿವಿಯಲ್ಲಿ ಪ್ರಸಾರವಾದಾಗ ಸುಮಾರು ನೂರ ಮೂವತ್ತು ಮಿಲಿಯನ್ ಜನ ವೀಕ್ಷಿಸಿದರೆಂದು ಅಂದಾಜು.…
ಲೇಖಕರು: narendra
April 13, 2008
ನಮ್ಮ ಅತ್ಯುತ್ತಮ ಕಥೆಗಾರರಲ್ಲಿ ಒಬ್ಬರೆಂದು ಈಗಾಗಲೇ ಗುರುತಿಸಿಕೊಂಡಿರುವ ಗೋಪಾಲಕೃಷ್ಣ ಪೈಯವರು ನಿಜಕ್ಕೂ ಕೆಲವು ಒಳ್ಳೊಳ್ಳೆಯ ಚೀನೀ ಕಥೆಗಳನ್ನು ಆಯ್ದು ಅನುವಾದಿಸಿಕೊಟ್ಟಿದ್ದಾರೆ. ಈ ಸಂಕಲನದಲ್ಲಿರುವ ಒಟ್ಟು ಹದಿನಾರು ಕಥೆಗಳಲ್ಲಿ ಒಂದೆರಡನ್ನು ಬಿಟ್ಟರೆ ಉಳಿದ ಎಲ್ಲಾ ಕಥೆಗಳೂ ತಮ್ಮದೇ ಆದ ಒಂದು ಗುಂಗು ಆವರಿಸುವಂತೆ ಮಾಡುವಲ್ಲಿ, ನಮ್ಮ ಒಳಗನ್ನು ತಟ್ಟುವಲ್ಲಿ, ಮತ್ತೆ ನೆನೆದಾಗ ವಾಹ್ ಅನಿಸುವಂತೆ ಮಾಡುವಲ್ಲಿ ಸಫಲವಾಗಿವೆ. ಈ ಎಲ್ಲ ಅಂಶಗಳಿಗಾಗಿ ನಾವು ಮೊದಲು ಅಭಿನಂದಿಸಬೇಕಾದ್ದು…
ಲೇಖಕರು: narendra
March 30, 2008
ಇದೊಂದು ಪುಟ್ಟ ಪುಸ್ತಕ. ಐವತ್ತು ಅರವತ್ತು ಪುಟಗಳಲ್ಲಿ ಒಂದೆರಡನ್ನು ಬಿಟ್ಟರೆ ಉಳಿದವೆಲ್ಲ ಪುಟ್ಟ ಪುಟ್ಟ ಕಥೆಗಳೇ. ಈ ಪುಸ್ತಕ ಕೂಡ ಸಾಹಿತ್ಯದ ವಲಯದಲ್ಲಿ ಪ್ರಚಲಿತವಿರುವ ಸದ್ದುಗದ್ದಲ ಎಬ್ಬಿಸಿದಂತಿಲ್ಲ. ಅದೇ ರೀತಿ ತಣ್ಣಗೇ ಮನಸ್ಸನ್ನು ಆವರಿಸುವ ಇಲ್ಲಿನ ಏಳು ಕಥೆಗಳು ನಮ್ಮನ್ನು ನಿಜಕ್ಕೂ ಚಕಿತಗೊಳಿಸುತ್ತವೆ. ಇಲ್ಲಿನ ಕತೆಗಳ ಹಂದರ, ಆಪ್ತ ನಿರೂಪಣೆ, ಜಾಣತನವನ್ನು ಮರೆಮಾಚದ ತಾಂತ್ರಿಕ ಕಲೆಗಾರಿಕೆ, ಸಹಜವಾಗಿ ಒಂದು ವಾತಾವರಣವನ್ನು ತನ್ನ ಕತೆಯ ಸುತ್ತ ನಿರ್ಮಿಸಿಕೊಳ್ಳುವ ಸರಳ ಶೈಲಿ,…
ಲೇಖಕರು: narendra
March 23, 2008
ಜರ್ಮನ್ ಕಾದಂಬರಿಕಾರ ಹರ್ಮನ್ ಹೆಸ್ ಬರೆದ ನಾರ್ಸಿಸಸ್ ಮತ್ತು ಗೋಲ್ಡಮಂಡ್ (ಇಂಗ್ಲೀಷಿಗೆ ಉರ್ಸುಲ್ ಮೊಲಿನಾರೊ, ಕನ್ನಡಕ್ಕೆ ಡಿ. ಆರ್. ಮಿರ್ಜಿ) ಒಂದು ಉತ್ತಮ ಪುಸ್ತಕ. ಕಾದಂಬರಿಯ ನಡುನಡುವೆ ನಡುನಡುವೆ ನಮ್ಮ ಕಂಬಾರರ (ಚಕೋರಿ, ಶಿಖರಸೂರ್ಯ) ಮಾತೃಪರಂಪರೆ, ಪಿತೃಪರಂಪರೆಯ ನೆನಪಾದರೆ ಅಚ್ಚರಿಯಿಲ್ಲ! ಅನುವಾದ ಸಿಬಿಲ್ ಕಾದಂಬರಿಯಷ್ಟು ಕಲಾತ್ಮಕವಾಗಿದೆ ಅನಿಸುವುದಿಲ್ಲ ನಿಜ. ಆದರೆ ಡಿ.ಆರ್.ಮಿರ್ಜಿಯವರು ಕೃತಿಯ ಸೊಗಡನ್ನು ಉಳಿಸಿಕೊಡಲು ವಹಿಸಿದ ಶ್ರಮ ಎದ್ದು ಕಾಣುತ್ತದೆ. 1946ರ ನೊಬೆಲ್…