ಪುಸ್ತಕ ಪರಿಚಯ

ಲೇಖಕರು: shreekant.mishrikoti
January 25, 2006
ಇತ್ತೀಚೆಗೆ ಎರಡು ಪುಸ್ತಕ ಓದಿದೆ . ಒಂದು ಇಂಗ್ಲೀಷಿನಿಂದ ಶ್ರೀ ಬೇಳೂರು ಸುದರ್ಶನರವರು ಮಾಡಿರುವ ಅನುವಾದ - ಸ್ಕಲ್ ಮಂತ್ರ ( ನೋಡಿ (ದಟ್ಸ್ ಕನ್ನಡ ಸಂಪರ್ಕ)) ಆದರೆ ಅದರ ಅನುವಾದ ಬಹಳ ಚೆನ್ನಾಗಿದೆ. ( ಒಂದೇ ಒಂದು ತಪ್ಪು ಗಮನಿಸಿದೆ. ಅದೂ ಯಾಕೆ ಎಂದರೆ , ಸರಾಗ ಓದಿಗೆ ಅಡ್ಡಿಯಾದದ್ದಕ್ಕೆ - ಮುದ್ರಣ ದೋಷಗಳನ್ನು ಸಹಜವಾಗಿ ನಾವು ಗಮನಿಸುವದಿಲ್ಲ - ಆದರೆ ತಪ್ಪು ಪದಕ್ಕೆ ಒಂದು ಬೇರೆ ಅರ್ಥವಿದ್ದಾಗ ನಮ್ಮ ಓದು ಎಡವುತ್ತದೆ ) 'ರಸ್ತೆಯನ್ನು ಅಗಲಿಸಿದ್ದಾರೆ' ಎಂಬುದು ಆ ವಾಕ್ಯ.…