ಪುಸ್ತಕ ಪರಿಚಯ

ಲೇಖಕರು: narendra
April 27, 2008
ಕೃತಿ: ‘ತಲೆಮಾರು’  ಬಂಜಗೆರೆಯವರು ಅನುವಾದಿಸಿದ ಅಕ್ಸರ್ ಹೇಲಿಯ ವಿಶ್ವವಿಖ್ಯಾತ ಕಾದಂಬರಿ ರೂಟ್ಸ್. ತಲೆಮಾರು ಎನ್ನುವ ಹೆಸರಿನಲ್ಲಿ ಈ ಸಂಗ್ರಹಾನುವಾದ ಪ್ರಕಟವಾದದ್ದು 2003ರಲ್ಲಿ. ರೂಟ್ಸ್ ಹೇಲಿಯ ಕುಟುಂಬ ಚರಿತ್ರೆಯ ದಾಖಲೆ. 1976ರಲ್ಲಿ ಪ್ರಕಟವಾದದ್ದು. ಇದು ಮುವ್ವತ್ತೇಳು ಭಾಷೆಗಳಿಗೆ ಅನುವಾದಗೊಂಡಿದೆಯಂತೆ. ಇದಕ್ಕೆ ಮಿಲಿಯಗಟ್ಟಲೆ ಪ್ರತಿಗಳ ಮಾರಾಟದ ದಾಖಲೆಯಿದೆ. ಕಿರು ಧಾರಾವಾಹಿಯಾಗಿ ಟಿವಿಯಲ್ಲಿ ಪ್ರಸಾರವಾದಾಗ ಸುಮಾರು ನೂರ ಮೂವತ್ತು ಮಿಲಿಯನ್ ಜನ ವೀಕ್ಷಿಸಿದರೆಂದು ಅಂದಾಜು.…
388
ಲೇಖಕರು: narendra
April 13, 2008
ನಮ್ಮ ಅತ್ಯುತ್ತಮ ಕಥೆಗಾರರಲ್ಲಿ ಒಬ್ಬರೆಂದು ಈಗಾಗಲೇ ಗುರುತಿಸಿಕೊಂಡಿರುವ ಗೋಪಾಲಕೃಷ್ಣ ಪೈಯವರು ನಿಜಕ್ಕೂ ಕೆಲವು ಒಳ್ಳೊಳ್ಳೆಯ ಚೀನೀ ಕಥೆಗಳನ್ನು ಆಯ್ದು ಅನುವಾದಿಸಿಕೊಟ್ಟಿದ್ದಾರೆ. ಈ ಸಂಕಲನದಲ್ಲಿರುವ ಒಟ್ಟು ಹದಿನಾರು ಕಥೆಗಳಲ್ಲಿ ಒಂದೆರಡನ್ನು ಬಿಟ್ಟರೆ ಉಳಿದ ಎಲ್ಲಾ ಕಥೆಗಳೂ ತಮ್ಮದೇ ಆದ ಒಂದು ಗುಂಗು ಆವರಿಸುವಂತೆ ಮಾಡುವಲ್ಲಿ, ನಮ್ಮ ಒಳಗನ್ನು ತಟ್ಟುವಲ್ಲಿ, ಮತ್ತೆ ನೆನೆದಾಗ ವಾಹ್ ಅನಿಸುವಂತೆ ಮಾಡುವಲ್ಲಿ ಸಫಲವಾಗಿವೆ. ಈ ಎಲ್ಲ ಅಂಶಗಳಿಗಾಗಿ ನಾವು ಮೊದಲು ಅಭಿನಂದಿಸಬೇಕಾದ್ದು…
436
ಲೇಖಕರು: narendra
March 30, 2008
ಇದೊಂದು ಪುಟ್ಟ ಪುಸ್ತಕ. ಐವತ್ತು ಅರವತ್ತು ಪುಟಗಳಲ್ಲಿ ಒಂದೆರಡನ್ನು ಬಿಟ್ಟರೆ ಉಳಿದವೆಲ್ಲ ಪುಟ್ಟ ಪುಟ್ಟ ಕಥೆಗಳೇ. ಈ ಪುಸ್ತಕ ಕೂಡ ಸಾಹಿತ್ಯದ ವಲಯದಲ್ಲಿ ಪ್ರಚಲಿತವಿರುವ ಸದ್ದುಗದ್ದಲ ಎಬ್ಬಿಸಿದಂತಿಲ್ಲ. ಅದೇ ರೀತಿ ತಣ್ಣಗೇ ಮನಸ್ಸನ್ನು ಆವರಿಸುವ ಇಲ್ಲಿನ ಏಳು ಕಥೆಗಳು ನಮ್ಮನ್ನು ನಿಜಕ್ಕೂ ಚಕಿತಗೊಳಿಸುತ್ತವೆ. ಇಲ್ಲಿನ ಕತೆಗಳ ಹಂದರ, ಆಪ್ತ ನಿರೂಪಣೆ, ಜಾಣತನವನ್ನು ಮರೆಮಾಚದ ತಾಂತ್ರಿಕ ಕಲೆಗಾರಿಕೆ, ಸಹಜವಾಗಿ ಒಂದು ವಾತಾವರಣವನ್ನು ತನ್ನ ಕತೆಯ ಸುತ್ತ ನಿರ್ಮಿಸಿಕೊಳ್ಳುವ ಸರಳ ಶೈಲಿ,…
352
ಲೇಖಕರು: narendra
March 23, 2008
ಜರ್ಮನ್ ಕಾದಂಬರಿಕಾರ ಹರ್ಮನ್ ಹೆಸ್ ಬರೆದ ನಾರ್ಸಿಸಸ್ ಮತ್ತು ಗೋಲ್ಡಮಂಡ್ (ಇಂಗ್ಲೀಷಿಗೆ ಉರ್ಸುಲ್ ಮೊಲಿನಾರೊ, ಕನ್ನಡಕ್ಕೆ ಡಿ. ಆರ್. ಮಿರ್ಜಿ) ಒಂದು ಉತ್ತಮ ಪುಸ್ತಕ. ಕಾದಂಬರಿಯ ನಡುನಡುವೆ ನಡುನಡುವೆ ನಮ್ಮ ಕಂಬಾರರ (ಚಕೋರಿ, ಶಿಖರಸೂರ್ಯ) ಮಾತೃಪರಂಪರೆ, ಪಿತೃಪರಂಪರೆಯ ನೆನಪಾದರೆ ಅಚ್ಚರಿಯಿಲ್ಲ! ಅನುವಾದ ಸಿಬಿಲ್ ಕಾದಂಬರಿಯಷ್ಟು ಕಲಾತ್ಮಕವಾಗಿದೆ ಅನಿಸುವುದಿಲ್ಲ ನಿಜ. ಆದರೆ ಡಿ.ಆರ್.ಮಿರ್ಜಿಯವರು ಕೃತಿಯ ಸೊಗಡನ್ನು ಉಳಿಸಿಕೊಡಲು ವಹಿಸಿದ ಶ್ರಮ ಎದ್ದು ಕಾಣುತ್ತದೆ. 1946ರ ನೊಬೆಲ್…
351
ಲೇಖಕರು: narendra
March 09, 2008
ಸಿ.ಎನ್ ರಾಮಚಂದ್ರರ ಮೊತ್ತ ಮತ್ತು ಇತರ ಕಥೆಗಳು ಸಂಕಲನದಲ್ಲಿ ಒಟ್ಟು ಹತ್ತು ಕಥೆಗಳಿವೆ. ತೀರ ಆಪ್ತವಾದ ಧಾಟಿಯಲ್ಲಿ, ಸ್ವಗತದ ವಿನಯವಂತಿಕೆಯನ್ನು ಪಡೆದಿರುವ ಈ ಕಥೆಗಳು ಅದೇ ಕಾರಣಕ್ಕೆ ಓದಿಗೆ ಒಂದು ಬಗೆಯ ಆಹ್ವಾನವನ್ನು ನೀಡುವಂತಿವೆ. ಕೃತಿ: ಮೊತ್ತ ಮತ್ತು ಇತರ ಕಥೆಗಳು(ಕಥಾ ಸಂಕಲನ) ಪುಟ ಸಂಖ್ಯೆ: 120  (ಶ್ರೀ ಮಹಾಬಲಮೂರ್ತಿ ಕೂಡ್ಲೆಕೆರೆಯವರ "ಒಂದಲ್ಲಾ ಒಂದೂರಿನಲ್ಲಿ" ಹೆಸರಿನ ಕಥೆಗಳಿಗಾಗಿಯೇ ಇರುವ ಹೊಸ ಪತ್ರಿಕೆಯಲ್ಲಿ ಪ್ರಕಟಿತ ಲೇಖನದ ಆಯ್ದ ಭಾಗ.)
360
ಲೇಖಕರು: narendra
March 01, 2008
ಪ್ರಹ್ಲಾದ ಅಗಸನಕಟ್ಟೆಯವರ `ಮನದ ಮುಂದಣ ಮಾಯೆ' ಸಂಕಲನಕ್ಕೆ ಸಾಹಿತ್ಯ ಅಕೆಡಮಿಯ ಪುರಸ್ಕಾರ ಸಂದಿದೆ. ಈ ಸಂಕಲನದಲ್ಲಿ ಒಟ್ಟು ಹನ್ನೆರಡು ಕಥೆಗಳಿವೆ. ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಕನ್ನಡ ಸಂಘ ಹೊರತಂದಿದೆ. ಅಗಸನಕಟ್ಟೆಯವರ ಕಥೆಗಳ ಓದು ಒಂದು ಚೇತೋಹಾರಿ ಅನುಭವವನ್ನು ನೀಡುವ ಕಸು ಹೊಂದಿವೆ. ಇನ್ನಷ್ಟು ಮತ್ತಷ್ಟು ಇಂಥ ಕಥೆಗಳನ್ನು ಓದುವ ಆಸೆಯನ್ನು ಇವು ಹುಟ್ಟಿಸುತ್ತವೆ. ಇಲ್ಲಿನ ಪ್ರತಿಯೊಂದು ಕಥೆಯೂ ನಮಗೆ ಯಾವುದೋ ಹೊಸ ಒಳನೋಟ, ಜೀವನ ದರ್ಶನ, ಬದುಕಿಗೆ ಒಂದು ಕಾಣ್ಕೆ ನೀಡುತ್ತವೆ…
545