ಮೈಸೂರಿನ ಪ್ರಸಿದ್ಧ ಕೌನ್ಸಿಲರ್ ಡಾ. ಮೀನಗುಂಡಿ ಸುಬ್ರಹ್ಮಣ್ಯಂ ಹತ್ತು ಸಮಸ್ಯಾವರ್ತನೆಗಳನ್ನು ಈ ಪುಸ್ತಕದಲ್ಲಿ ಪ್ರಸ್ತುತ ಪಡಿಸಿದ್ದಾರೆ. 1996ರಲ್ಲಿ ನಾನು ಓದಿದ್ದ ಈ ಪುಸ್ತಕವನ್ನು ಓದಬೇಕೆಂದು ಕಳೆದ ಸುಮಾರು ಮೂರು ದಶಕಗಳಲ್ಲಿ ಸಾವಿರಾರು ಜನರಿಗೆ ನಾನು ಶಿಫಾರಸ್ ಮಾಡಿದ್ದೇನೆ. ಯಾಕೆಂದರೆ, ಪುಸ್ತಕದ ಶೀರ್ಷಿಕೆ, “ಈ ವರ್ತನೆಗಳು ನಿಮ್ಮಲ್ಲಿ ಇವೆಯೇ?” ಎಂದು ಕೇಳುತ್ತಿಲ್ಲ, ಬದಲಾಗಿ “... ಎಷ್ಟಿವೆ?” ಎಂದು ಕೇಳುತ್ತಿದೆ.
“ಅದು ಯಾಕೆ?" ಎಂಬುದನ್ನು ಲೇಖಕರು ಮುನ್ನುಡಿಯಲ್ಲಿ ವಿವರಿಸಿದ್ದಾರೆ: “ಇಲ್ಲಿ ಎರಡು ಬಗೆಯ ಸಮಸ್ಯಾವರ್ತನೆಯ ಚಿತ್ರಣಗಳಿವೆ - ವೈಯುಕ್ತಿಕ ಅನಿಸಿಕೆಗಳಿಂದಾಗಿ ಜೀವನ ಸುಖದ ಮಟ್ಟ ಕೆಳಗಿಳಿಸಿಕೊಂಡು “ನನಗೆ ಮಾನಸಿಕ ಸಮಸ್ಯೆ" ಎಂದು ತಾನೇ ಚೀಟಿ ಅಂಟಿಸಿಕೊಂಡು ಕುಳಿತುಕೊಳ್ಳುವುದು (ಇಂಟ್ರಾ ಪರ್ಸನಲ್…