ಕೇಶವ ಮಳಗಿಯವರ ನೇರಳೆ ಮರ ಒಂದು ವಿಶಿಷ್ಟ ಕಥಾನಕ! ಒಬ್ಬ ಬರಹಗಾರನ ತಳಮಳಗಳನ್ನು ವಯಸ್ಸಿನ ಹಲವು ಹಂತಗಳಲ್ಲಿ, ಬದುಕಿನ ಹಲವು ತಿರುವುಗಳಲ್ಲಿ ಮತ್ತು ಮನಸ್ಸಿನ ಹಲವು ಪಾತಳಿಗಳಲ್ಲಿ ಅವು ದಾಖಲಾಗುವ ವಿಸ್ಮಯವನ್ನು, ದಾಖಲಾಗುತ್ತ ಅವು ಮಾಡುವ ಚಮತ್ಕಾರವನ್ನು ಮಳಗಿಯವರು ಅಕ್ಷರಗಳಲ್ಲಿ ಹಿಡಿದುಕೊಡಲು ಇಲ್ಲಿ ಪ್ರಯತ್ನಿಸಿದ್ದಾರೆ. ಅನುಭವವೊಂದು ಬರಹಗಾರನನ್ನು ಕಾಡುತ್ತ, ತಟ್ಟುತ್ತ, ತಡವುತ್ತ, ತದುಕುತ್ತ, ಸಂತೈಸುತ್ತ, ಪೊರೆಯುತ್ತ, ತೊರೆಯುತ್ತ, ತಲ್ಲಣಗಳಿಗೆ ನೂಕುತ್ತ ಮತ್ತು ಕೈಹಿಡಿದೆತ್ತುತ್ತ ಕಥೆಗಾರನನ್ನು ಬೆಳೆಸುವ ಬಗೆಯೇ ವಿಲಕ್ಷಣವಾದದ್ದು. ಬರಹಗಾರನ ಸೂಕ್ಷ್ಮಪ್ರಜ್ಞ್ಮೆ ಅದನ್ನು ಗಮನಿಸುವ ಬಗೆ, ಅದಕ್ಕೆ ಸ್ಪಂದಿಸುವ ಬಗೆ ಮತ್ತು ಅದೆಲ್ಲ ತನ್ನ ಮೇಲೆ ಉಂಟು ಮಾಡುತ್ತಿರುವುದನ್ನು ಅರ್ಥೈಸಿಕೊಳ್ಳುತ್ತ, ಮುಂದೆ ತಾನು ಅವನ್ನು…