ಯಕ್ಷಗಾನದಲ್ಲಿ ಭಾಗವತಿಕೆ ಪುರುಷರಿಗೆ ಮಾತ್ರ ಸೈ ಅನ್ನುವ ಸಮಯದಲ್ಲಿ ಲೀಲಾವತಿ ಬೈಪಾಡಿತ್ತಾಯ ಅವರು ಭಾಗವತಿಕೆಯನ್ನು ಮಾಡಲು ಪ್ರಾರಂಭಿಸಿದರು. ಪ್ರಾರಂಭದ ವಿರೋಧದ ನಡುವೆಯೇ ಧೃತಿಗೆಡದೇ ತಮ್ಮ ಕಾಯಕವನ್ನು ಮುಂದುವರೆಸಿಕೊಂಡು ಬಂದರು. ಇವರು ಯಕ್ಷಗಾನ ರಂಗದ ಪ್ರಥಮ ಮಹಿಳಾ ಭಾಗವತರು ಎಂಬ ಖ್ಯಾತಿಯನ್ನು ಪಡೆದುಕೊಂಡಿದ್ದಾರೆ. ಇವರ ಆತ್ಮಕಥೆಯನ್ನು ಪತ್ರಕರ್ತೆ ವಿದ್ಯಾರಶ್ಮಿ ಪೆಲತಡ್ಕ ಅವರು ಸೊಗಸಾಗಿ ನಿರೂಪಿಸಿ ಅದನ್ನು ‘ಯಕ್ಷ ಗಾನ ಲೀಲಾವಳಿ' ಎಂಬ ಹೆಸರಿನಲ್ಲಿ ಪುಸ್ತಕ ರೂಪದಲ್ಲಿ ಹೊರತಂದಿದ್ದಾರೆ.
ಈ ಕೃತಿಗೆ ಮುನ್ನುಡಿ ಬರೆದ ಹಿರಿಯ ಲೇಖಕ ಲಕ್ಷ್ಮೀಶ ತೋಳ್ಪಾಡಿ ಇವರ ಪ್ರಕಾರ “ಯಕ್ಷಮೇಳದ ತಿರುಗಾಟದಲ್ಲಿ ಭಾಗವಹಿಸಿದ ಮೊದಲ ಮಹಿಳಾ ಭಾಗವತರೆಂಬ ಇತಿಹಾಸವನ್ನು ಲೀಲಮ್ಮ…