ಪತ್ರಕರ್ತ ಪ್ರತಾಪ್ ಸಿಂಹ ವಿಜಯ ಕರ್ನಾಟಕ ಹಾಗೂ ಕನ್ನಡ ಪ್ರಭ ಪತ್ರಿಕೆಗಳಲ್ಲಿ ಬರೆಯುತ್ತಿದ್ದ ಅಂಕಣ ಬರಹಗಳ ಸಂಗ್ರಹವೇ ಬೆತ್ತಲೆ ಜಗತ್ತು. ಈಗ ಇಲ್ಲಿರುವುದು ಅದರ ಹದಿನೈದನೇ ಭಾಗ. ಪ್ರತಿ ಶನಿವಾರ ಪ್ರತಾಪ್ ಸಿಂಹ ಅವರ ಅಂಕಣವನ್ನು ಕಾಯುತ್ತಿದ್ದ ದೊಡ್ಡದಾದ ಓದುಗ ಸಮೂಹ ಇತ್ತೆಂದರೆ ಸುಳ್ಳಲ್ಲ. ತೀಕ್ಷ್ಣವಾಗಿ ಚಾಟಿ ಬೀಸುವಂತಹ ರಾಜಕೀಯ ಲೇಖನಗಳಿಂದ ಹಿಡಿದು. ಕ್ರೀಡೆ, ಸಾಹಿತ್ಯ, ಸಿನೆಮಾ ಮುಂತಾದ ಎಲ್ಲಾ ವಿಚಾರಗಳನ್ನು ಅಧ್ಯಯನ ಮಾಡಿ ಬರೆಯುತ್ತಿದ್ದರು. ಪ್ರತಿಯೊಂದು ಲೇಖನಗಳಿಗೆ ಸೂಕ್ತ ಆಧಾರ ಒದಗಿಸುತ್ತಿದ್ದುದು ಇವರ ಹೆಗ್ಗಳಿಕೆ.
ಈ ಪುಸ್ತಕದಲ್ಲಿ ೨೬ ಅಧ್ಯಾಯಗಳಿವೆ. ಎಸ್. ಎಲ್.ಭೈರಪ್ಪ, ನರೇಂದ್ರ ಮೋದಿ, ಅಟಲ್ ಬಿಹಾರಿ ವಾಜಪೇಯಿ, ನರಸಿಂಹ ರಾವ್, ವಿಶ್ವೇಶ್ವರಯ್ಯ…