ಮೂಢ ಉವಾಚ -30

ಮೂಢ ಉವಾಚ -30

         ಮೂಢ ಉವಾಚ -30


ಕೀಳರಿಮೆಯದು ತಾ ಸಿಟ್ಟಿಗದು ಹೇತುವು|
ಅಭಿಮಾನಕಾಘಾತ ಕಿಚ್ಚಿಗದು ಕಾರಣವು||
ಬಲಶಾಲಿಗಳೊಡನಾಡಿ ಧೀಶಕ್ತಿ ನೀಗಳಿಸು|
ಛಲದಿಂದ ಬಲಗಳಿಸಿ ಮೇಲೇರು ಮೂಢ||

ರಾಷ್ಟ್ರ ರಾಷ್ಟ್ರದ ನಡುವೆ ರಾಜ್ಯ ರಾಜ್ಯದ ನಡುವೆ|
ಗ್ರಾಮ ಗ್ರಾಮದ ನಡುವೆ ಜಾತಿ ಜಾತಿಯ ನಡುವೆ||
ಮನುಜ ಮನುಜರನಡುವೆ ಧಗಧಗಿಸುವ ದ್ವೇಷದ|
ಮೂಲ ಕ್ರೋಧಾಗ್ನಿಯಲ್ಲದೆ ಮತ್ತೇನು ಮೂಢ||


*********************


-ಕವಿನಾಗರಾಜ್.

Rating
No votes yet

Comments