ಮೂಢ ಉವಾಚ - 58

ಮೂಢ ಉವಾಚ - 58

              ಮೂಢ ಉವಾಚ - 58


ಹೊರಗಣ್ಣು ತೆರೆದಿರಲು ಬೀಳುವ ಭಯವಿಲ್ಲ
ಒಳಗಣ್ಣು ತೆರೆದಿರಲು ಪತನದ ಭಯವಿಲ್ಲ|
ತಪ್ಪೊಪ್ಪಿ ನಡೆವವರು ಹಿರಿಯರೆಂದೆನಿಸುವರು
ತಪ್ಪೆ ಸರಿಯೆಂದವರು ಜಾರುವರು ಮೂಢ||


 


ಬರುವಾಗ ತರಲಾರೆ ಹೋಗುವಾಗ ಒಯ್ಯೆ
ಇಹುದು ಬಹುದೆಲ್ಲ ಸಂಚಿತಾರ್ಜಿತ ಫಲವು|
ಸಿರಿ ಸಂಪದದೊಡೆಯ ನೀನಲ್ಲ ನಿಜದಿ ದೇವ
ಅಟ್ಟಡುಗೆಯುಣ್ಣದೆ ಫಲವಿಲ್ಲ ಮೂಢ||


**********


-ಕ.ವೆಂ.ನಾಗರಾಜ್.

Rating
No votes yet

Comments