ಚಂದ್ರ ಮತ್ತಷ್ಟು ಹತ್ತಿರ, ಆಪ್ತ.
ಚಂದ್ರ ಮತ್ತಷ್ಟು ಹತ್ತಿರ, ಆಪ್ತ. ೧೯ ವರ್ಷಗಳ ನಂತರ ಇಂದು ಚಂದ್ರ ನಮಗೆ ಹತ್ತಿರ ಬಂದಿದ್ದಾನಂತೆ. ಭೂವಾಸಿಗಳಲ್ಲಿ ಅದ್ಯಾವ ಹೆಗ್ಗಳಿಕೆ ನೋಡಿ ಬಂದನೋ ಇನ್ನಷ್ಟು ಸಮೀಪ ನನಗೆ ತಿಳೀದು, ಆದರೆ ಸೂಪರ್ ಮೂನ್, ಮೆಗಾ ಮೂನ್, ಡಬ್ಬಲ್ ಮೂನ್ ಹಾಗೆ ಹೀಗೆ ಎಂದು ಕೆಲದಿನಗಳಿಂದ ಕೇಳುತ್ತಾ ಇದ್ದುದರಿಂದ ಸಂಜೆಯ ದೂರದ ನೆಂಟನಿಗಾಗಿ ಕಾದು ಕೂತೆ. ಮಧ್ಯಾಹ್ನದ ಉರಿ ಸೂರ್ಯ, ಸಂಜೆಯಾಗುತ್ತಾ ಬೆಳ್ಳಿ ಬಣ್ಣ ಪಡೆದುಕೊಂಡು, ಸ್ವಲ್ಪ ನಂತರ ತನ್ನ ಮೈಯ್ಯನ್ನು ಕಿತ್ತಳೆ ಬಣ್ಣಕ್ಕೆ ಬದಲಿಸಿಕೊಂಡು ತನ್ನ ವಧು ಕೆಂಪು ಸಮುದ್ರದ ತೆಕ್ಕೆಗೆ ಜಾರಿದ ಕೆಲ ಹೊತ್ತಿನಲ್ಲೇ ಕಳ್ಳ ನಗೆ ಬೀರುತ್ತಾ ಬಂದ ನಮ್ಮ ಮಾಮ. ಚಂದಾಮಾಮ. ಅರೆ, ಇದೇನಿದು, ೧೯ ವರ್ಷಗಳ ನಂತರ ಹತ್ತಿರ ಬಂದ ಈ ಮಾಮ ಥೇಟ್ ಹಿಂದಿನ ಮಾಮನ ಥರವೇ ಇದ್ದ. ಮುಖದಲ್ಲಿ ಸ್ವಲ್ಪ ಹೆಚ್ಚು ಮಾಂಸ ತುಂಬಿಕೊಂಡು ನಳನಳಿಸುತ್ತಾ ಬರಬಹುದು ಎಂದೆಣಿಸಿದ್ದ ನನಗೆ ಕಾಣಲು ಸಿಕ್ಕಿದ್ದು ಅದೇ age old ಮಾಮ. (ಅಂಕಲ್ ಅಂತ ಅವನನ್ನು ಕರೆಯಲು ನನಗೆ ಇಷ್ಟವಿಲ್ಲ. ಬಸ್ ಸ್ಟಾಂಡ್ ನಲ್ಲಿ ಕೈ ಚಾಚಿ ಬೇಡುವವನೂ, ಬಸ್ಸಿನ ಸೀಟಿಗಾಗಿ ಜಗಳ ಕಾಯುವವರೆಲ್ಲಾ ಅಂಕಲ್ ಗಳೇ ಆದ್ದರಿಂದ ನಮ್ಮ ಚಂದಾ ಮಾಮನಿಗೆ ಆಂಗ್ಲ ಪ್ರಯೋಗ ಬೇಡ.). ನನ್ನ ಬರಿಗಣ್ಣಿಗೆ ಇವನು ಅದೇ ಗಾತ್ರದ ಮಾಮ. ಮುಖದ ತುಂಬಾ freckles ಇದ್ದರೂ ತನ್ನ ಕಾಂತಿಯನ್ನು ತನ್ನನ್ನು ಸುತ್ತುವರೆದ ಮೋಡಗಳಿಗೂ ನೀಡುತ್ತಾ aloof ಆಗಿ ಆಗಸಕ್ಕೆ ಅಂಟಿ ಕೊಂಡ ಮಾಮ. ಬಹುಶಃ ಇವನ ನಿಖರವಾದ ಅಳತೆಗೆ ಸ್ಟೆತಾಸ್ಕೋಪು, ಪೆರಿಸ್ಕೋಪು, ಟೆಲಿಸ್ಕೋಪು ಇವ್ಯಾವುದೂ ನನ್ನಲ್ಲಿಲ್ಲದೆ ಇರೋದ್ರಿಂದ ನನಗೆ ಹಳೇ ಮಾಮನ ದರ್ಶನದ ಭಾಗ್ಯ ಮಾತ್ರಾ.
ಸೂಪರ್ ಮೂನ್ ವಿದ್ಯಮಾನದಲ್ಲಿ ಸೂರ್ಯ , ಭೂಮಿ ಮತ್ತು ಚಂದಿರರು ಒಂದೇ ರೇಖೆಯಲ್ಲಿ ಇದ್ದು ಚಂದ್ರ ಮತ್ತು ಭೂಮಿಗಳು ಸ್ವಲ್ಪ ಸಮೀಪಕ್ಕೆ ಬರುತ್ತವಂತೆ. ಸೂಪರ್ ಮೂನ್ ಕಾರಣ, ಪ್ರವಾಹ, ಭೂಕಂಪ, ಜ್ವಾಲಾ ಮುಖಿ, ಬಿರುಗಾಳಿಗಳೂ ಸಂಭವಿಸಬಹುದಂತೆ. ಬ್ರೇಕಿಂಗ್ ನ್ಯೂಸ್ ನಲ್ಲಿ ಇದುವರೆಗೂ ಯಾವುದೇ ಅಹಿತಕರ ನೈಸರ್ಗಿಕ ಅವಘಡ ಸಂಭವಿಸಿಲ್ಲ.
ಒಂದೇ ಒಂದು ಅವಘಡ ಏನೆಂದರೆ ಕಳೆದ ಹಲವು “ವಿಶ್ವಕಪ್ ಪಂದ್ಯಾವಳಿ” ಯ ೩೫ ಪಂದ್ಯಗಳಲ್ಲಿ ಮೊಟ್ಟ ಮೊದಲ ಬಾರಿಗೆ ಆಸ್ಟ್ರೇಲಿಯಾ ಸೋಲನ್ನು ಕಂಡಿದ್ದು ಅದೂ ದುರ್ಬಲ, ಪಾಕ್ ತಂಡದ ಕೈಯ್ಯಲ್ಲಿ.
ಹೀಗೇ ಸುಮ್ಮನೆ: ಸೂಪರ್ ಮೂನ್ ಎನ್ನುವ ಪದವನ್ನು ಶುರು ಮಾಡಿದ್ದು HOROSCOPE ಪತ್ರಿಕೆಯ ಜ್ಯೋತಿಷ್ಯಕಾರ Richard Nolle.
Rating
Comments
ಉ: ಚಂದ್ರ ಮತ್ತಷ್ಟು ಹತ್ತಿರ, ಆಪ್ತ.
In reply to ಉ: ಚಂದ್ರ ಮತ್ತಷ್ಟು ಹತ್ತಿರ, ಆಪ್ತ. by gopinatha
ಉ: ಚಂದ್ರ ಮತ್ತಷ್ಟು ಹತ್ತಿರ, ಆಪ್ತ.
ಉ: ಚಂದ್ರ ಮತ್ತಷ್ಟು ಹತ್ತಿರ, ಆಪ್ತ.