ಹೆಸರಿನ ಹುಚ್ಚು ....
ನಾನು ಮತ್ತು ಮಂಜ ಸೇರಿ ಹೋಟೆಲ್ ಹೋಗಿದ್ದೆವು. ಇನ್ನೂ ಕುಳಿತು ಕೊಂಡಿರಲಿಲ್ಲ ಅಷ್ಟರಲ್ಲೇ "ಏ ಗೋಪಾಲ್ ಆಯಿತ" ಎಂಬ ಕೂಗು. ನಂಗೆ ಆಶ್ಚರ್ಯ ಏನು ಎಂದು. ತಿರುಗಿ ನೋಡಿದೆ ಒಬ್ಬ ಹುಡುಗ ಕಾಫೀ ತೆಗೆದುಕೊಂಡು ಬಂದು ಹೋಟೆಲ್ ಓನರ್ ಗೆ ಕೊಡುತ್ತಿದ್ದ. ಮತ್ತೆ ಕೆಲ ಸಮಯದ ನಂತರ "ಗೋಪಾಲ್ ಟೇಬಲ್ ಕ್ಲೀನ್ ಮಾಡು" ಎಂಬ ಕೂಗು. ಆ ಹುಡುಗ ಬಂದು ಕ್ಲೀನ್ ಮಾಡಿ ಹೋದ. ಮಂಜ ನನ್ನ ಮುಖ ನೋಡಿ ಮುಸಿ ಮುಸಿ ನಗುತ್ತಿದ್ದ. ಅದೇಕೋ ಗೊತ್ತಿಲ್ಲ ನನ್ನ ಹೆಸರಿನಲ್ಲಿರುವ ಜನರು ಬರೀ ಇಂತಹ ಕೆಲಸದಲ್ಲೇ ಇರುವುದೇಕೆ ಎಂದು ಯೋಚಿಸತೊಡಗಿದೆ. ಇನ್ನೂ ತುಂಬಾ ಸಿನೆಮಾಗಳಲ್ಲಿ ನನ್ನ ಹೆಸರಿನ ವಿಲನ್ ಇರುವುದನ್ನು. ಕಡೆಗೆ ನಾನೇ ತಪ್ಪಾಗಿ ಸಾಫ್ಟ್ವೇರ್ ಫೀಲ್ಡ್ ಗೆ ಬಂದೆನೇನೋ ಎಂದು ಕೂಡ ಅನ್ನಿಸಿದ್ದು ಉಂಟು. ಹೀಗೆ ಘಾಡವಾಗಿ ಯೋಚನೆಗೆ ಮುಣುಗಿದ ನನ್ನನ್ನು ಮಂಜ ಏನು ಯೋಚನೆ ಮಾಡುತ್ತಾ ಇದ್ದೀಯಾ? ಎಂದು ಕೇಳಿದ. ಅವನಿಗೆ ನನ್ನ ಹೆಸರಿಗೆ ಆಗುತ್ತಿರುವ ಶೋಷಣೆಯ ಬಗ್ಗೆ ಹೇಳಿದೆ.
ಲೇ ಹೆಸರಿಗೆ ಅನ್ವರ್ಥಕವಾಗಿ ನಿನಗೆ ಕೆಲಸ ಅಂತ ಬೇಕಾಗಿದ್ದರೆ ನೀನು ದನ ಕಾಯಲು ಹೋಗಬೇಕಿತ್ತು ಅಥವಾ ದನದ ಡಾಕ್ಟರ್ ಆಗಬೇಕಿತ್ತು ಎಂದು ಗಹ ಗಹಿಸಿ ನಕ್ಕ. ನಿನಗೆ ಹೇಗಿದ್ದರು ಒಂದು ಕೊಂಬು(ಗೋಪಾ"ಲ್") ಬೇರೆ ಇದೆ ಎಂದ. ನಾನು ಒಮ್ಮೆ "ಓಂ" ಸಿನಿಮಾ ನೋಡಿ ಬಂದು ಸಕ್ಕತ್ತಾಗಿದೆ ಎಂದು ಹೇಳಿದೆ. ಅದನ್ನು ಕೇಳಿಸಿಕೊಂಡು ಪಾಪ ಪಕ್ಕದ ಮನೆ ಅಜ್ಜಿ ಒಬ್ಬರು ಅದನ್ನು ದೇವರ ಸಿನಿಮಾ ಎಂದುಕೊಂಡು ಹೋಗಿ ನೋಡಿ ಬಂದಿದ್ದರು. ಹೆಸರಿಗೆ ಅನ್ವರ್ಥಕವಾಗಿ ಎಲ್ಲರೂ ಇರುವುದಿಲ್ಲ ಎಂದ.
ನಿನ್ನ ಹೆಸರು ಅಲ್ಲಿ ಬಳಕೆ ಆಗೋದಕ್ಕೆ ಕಾರಣ ಏನೆಂದರೆ, ಮೊದ ಮೊದಲು ಮಕ್ಕಳಿಗೆ ದೇವರ ಹೆಸರನ್ನು ಇಡುತ್ತಿದ್ದರು. ಹೀಗಾಗಿ ನನ್ನ ಹೆಸರು ಕೂಡ ತುಂಬಾ ಫೇಮಸ್. ನಿನ್ನ ಹೆಸರಿನ ಹಾಗೆ ನನ್ನ ಹೆಸರು ಕೂಡ ಬಳಕೆ ಆಗುತ್ತೆ ಎಂದ. ಗಲ್ಲಿ ಗಲ್ಲಿಗಳಲ್ಲಿ ಮಂಜುನಾಥ ಎಂಬ ಹೆಸರಿನ ಜನರಿದ್ದಾರೆ ಸುಮ್ಮನೇ ಯೋಚಿಸಬೇಡ ಎಂದ. ನಿನಗೆ ಗೊತ್ತಾ ಮಂಡ್ಯದಲ್ಲಿ ನನ್ನ ಗೆಳೆಯ ಮಾಧವನಿಗೆ ಮಹಾದೇವ ಎಂದು ಅನ್ನುತ್ತಿದ್ದರು ಎಂದ.
ಆದರೆ ನನ್ನ ಹೆಸರಿನಿಂದ ತುಂಬಾ ಜನ ವ್ಯಂಗ್ಯ ಕೂಡ ಮಾಡುತ್ತಾರೆ ಎಂದೆ. ಏನು ಅಂತ ಅಂದ. ಕೆಲ ಗೆಳೆಯರು "ಗೋಪಿ ಆಯಿತ ಕಾಫೀ" ಎಂದು ಹೇಳುತ್ತಿದ್ದ. ಅದರಲ್ಲಿ ಒಬ್ಬ ತುಂಬಾ ಅತಿರೇಕವಾಗಿ "ಗೋಪಿ ಉದುತ್ತಾನೆ ಪೀಪೀ" ಎಂದು ಹೇಳುತ್ತಿದ್ದ ಎಂದು ಬೇಜಾರಿನಲ್ಲಿ ಹೇಳಿದೆ. ಕೆಲ ಬಾರಿ ಗೋಪಾಲ್ ಜರ್ದ್, ಗೋಪಾಲ್ ಟೂತ್ ಪೌಡರ್ ಎಂದೆ.
ನೀನು ಸಿನಿಮಾ ಆಕ್ಟರ್ ಗಳು ಹೆಸರು ಬದಲಾಹಿಸಿದ ಹಾಗೆ ಬದಲಾಯಿಸಿಬಿಡು ಎಂದ. ನಾನು ಅದು ಹೇಗೆ ಸಾಧ್ಯ ಎಂದೆ. ಈಗ ಎಲ್ಲವೂ ಸಾಧ್ಯ ಒಂದು ಕೋರ್ಟ್ನಲ್ಲಿ ಅರ್ಜಿ ಗುಜರಾಯಿಸಿದರೆ ಸಾಕು. ಆಮೇಲೆ, ಒಂದು ಪೇಪರ್ ನಲ್ಲಿ ಜಾಹೀರಾತು ಕೊಟ್ಟರೆ ಸಾಕು ಎಂದ. ಮೊದಲನೆ ಬಾರಿ ನಿನ್ನ ಹೆಸರು ಕೂಡ ಲೈಮ್ ಲೈಟ್ ಗೆ ಬಂದ ಹಾಗಾಗುತ್ತೆ ಎಂದ.
ನಿನಗೆ, ಹೆಸರಿಗೆ ಆಗುವ ಶೋಷಣೆಯ ಒಂದು ರಸವತ್ತಾದ ಕತೆ ಹೇಳುತ್ತೇನೆ ಕೇಳು. ನಮ್ಮ ಪಕ್ಕದ ಮನೆಯಲ್ಲಿ ಒಬ್ಬ ಸೋಮಶೇಖರ ಎಂಬ ಗೆಳೆಯ ಇದ್ದ. ಅವನಿಗೆ ನಾವೆಲ್ಲರೂ ಸೋಮ ಎಂದು ಅನ್ನುತ್ತಿದ್ದೆವು. ಅವನು ಅವಳ ಅತ್ತೆ ಮಗಳನ್ನು ಪ್ರೀತಿಸುತ್ತಿದ್ದ. ಅವಳು ಕೂಡ ಅವನನ್ನು ಪ್ರೀತಿಸುತ್ತಿದ್ದಳು. ಅವಳು ಅವನನ್ನು ಸೋಮ ಎಂದೆ ಸಂಭೋದಿಸುತ್ತಿದ್ದಳು. ಅವರಿಬ್ಬರಿಗೆ ಮದುವೆ ಆಯಿತು. ಅವಳು ಮದುವೆ ಆದ ಮೇಲೂ ಹಾಗೆ ಅನ್ನುತ್ತಿದ್ದಾಗ ಒಬ್ಬ ಹಿರಿಯರು ಹಾಗೆಲ್ಲಾ ಅನ್ನಬಾರದು, ರೀ ಹಚ್ಚಿ ಮಾತನಾಡಬೇಕು ಎಂದು ಹೇಳಿದರು. ಆಗಿನಿಂದ ಅವಳು ರೀ ಎಂದು ಸೇರಿಸಿ ಸೋಮನನ್ನು "ಸೋಮಾರಿ" ಮಾಡಿಬಿಟ್ಟಿದ್ದಳು. ಅವನು ಹೇಳುತ್ತಿದ್ದಂತೆ ಬಾಯಲ್ಲಿರುವ ಕಾಫೀ ಅನಯಾಸವಾಗಿ ಹೊರಗಡೆ ಬಂತು.
ಜನರಿಗೆ ವ್ಯಂಗ್ಯ ಮಾಡೋದಕ್ಕೆ ಒಂದು ವಿಷಯವಿದ್ದರೆ ಸಾಕು, ಅದಕ್ಕೆ ಹೆಸರು ತುಂಬಾ ಬಳಕೆ ಆಗುತ್ತೆ ಅಷ್ಟೇ ಎಂದು ಸಮಾಧಾನ ಹೇಳಿದ. ನನಗು ಅವನು ಹೇಳಿದ್ದು ಸರಿ ಅನ್ನಿಸಿತು. ಕಡೆಗೆ ಮಂಜ ಲೇ ಹಾಗೆ ಹೊರಟರೆ ಹೇಗೆ "ಗೋಪಾಲ್ ಟೇಬಲ್ ಕ್ಲೀನ್ ಮಾಡು" ಎಂದು ವ್ಯಂಗ್ಯದ ಮಾತು ಆಡಿದ. ಕಾಫೀ ಮುಗಿಸಿ ಮನೆಗೆ ಬಂದೆವು.
ಒಮ್ಮೆ ನಾನು ಮತ್ತು ನನ್ನ ಮಡದಿ ದಾವಣಗೆರೆಗೆ ನೆಂಟರ ಮನೆಗೆ ಹೋಗಿದ್ದೆವು. ಆಗ ಒಬ್ಬ ಅಜ್ಜಿ ಪುಟ್ಟಿ ಎತ್ತಿ ತಾ ಎಂದರು. ನಾನು ಗಾಬರಿ ನನ್ನ ಹೆಂಡತಿಯನ್ನು ಹೇಗೆ ಎತ್ತಲಿ ಎಂದು. ಮತ್ತೆ ಸೆಗಣಿ ಪುಟ್ಟಿ ತಾ ಎಂದರು. ನನ್ನ ಹೆಂಡತಿಗೆ ಹೇಳುತ್ತಿದ್ದಾರೆ ಎಂದು ಸುಮ್ಮನೇ ಇದ್ದೆ. ನನ್ನ ಹೆಂಡತಿಗೆ ಚಿಕ್ಕಂದಿನಿಂದ ಪುಟ್ಟಿ ಎಂದೆ ಎಲ್ಲರೂ ಅನ್ನುತ್ತಾರೆ. ಕಡೆಗೆ ರೀ ಅದನ್ನು ಎತ್ತಿ ಕೊಡಿ ಎಂದು ಒಂದು ಪುಟ್ಟಿ(ಬುಟ್ಟಿ) ತೋರಿಸಿದಳು ಮಡದಿ, ನಾನು ಎತ್ತಿ ಕೊಟ್ಟೆ. ಆಮೇಲೆ ತಿಳಿಯಿತು ಅವರು ಬುಟ್ಟಿಗೆ ಪುಟ್ಟಿ ಅನ್ನುತ್ತಾರೆ ಎಂದು.
Comments
ಉ: ಹೆಸರಿನ ಹುಚ್ಚು ....
In reply to ಉ: ಹೆಸರಿನ ಹುಚ್ಚು .... by Jayanth Ramachar
ಉ: ಹೆಸರಿನ ಹುಚ್ಚು ....
ಉ: ಹೆಸರಿನ ಹುಚ್ಚು ....
In reply to ಉ: ಹೆಸರಿನ ಹುಚ್ಚು .... by prasannakulkarni
ಉ: ಹೆಸರಿನ ಹುಚ್ಚು ....
ಉ: ಹೆಸರಿನ ಹುಚ್ಚು ....
In reply to ಉ: ಹೆಸರಿನ ಹುಚ್ಚು .... by kamath_kumble
ಉ: ಹೆಸರಿನ ಹುಚ್ಚು ....
ಉ: ಹೆಸರಿನ ಹುಚ್ಚು ....
In reply to ಉ: ಹೆಸರಿನ ಹುಚ್ಚು .... by Chikku123
ಉ: ಹೆಸರಿನ ಹುಚ್ಚು ....
ಉ: ಹೆಸರಿನ ಹುಚ್ಚು ....
In reply to ಉ: ಹೆಸರಿನ ಹುಚ್ಚು .... by ನಂದೀಶ್ ಬಂಕೇನಹಳ್ಳಿ
ಉ: ಹೆಸರಿನ ಹುಚ್ಚು ....
ಉ: ಹೆಸರಿನ ಹುಚ್ಚು ....
In reply to ಉ: ಹೆಸರಿನ ಹುಚ್ಚು .... by kavinagaraj
ಉ: ಹೆಸರಿನ ಹುಚ್ಚು ....
ಉ: ಹೆಸರಿನ ಹುಚ್ಚು ....
In reply to ಉ: ಹೆಸರಿನ ಹುಚ್ಚು .... by bhalle
ಉ: ಹೆಸರಿನ ಹುಚ್ಚು ....
ಉ: ಹೆಸರಿನ ಹುಚ್ಚು ....
In reply to ಉ: ಹೆಸರಿನ ಹುಚ್ಚು .... by asuhegde
ಉ: ಹೆಸರಿನ ಹುಚ್ಚು ....