ದೇಹದಾನ
ಕಳೆದ ವರ್ಷ ಮಾರ್ಚ್ನಲ್ಲಿ ನನ್ನ ತಾಯಿಯವರು ಆಸ್ಪತ್ರೆಯಲ್ಲಿ ನಿಧನರಾದಾಗ ನಡೆದ ಘಟನೆ : ೫೨ ವರ್ಷ ತಾಯಿಯನ್ನು ಹೆಚ್ಚು ಕಮ್ಮಿ ಕ್ಷಣವೂ ಬಿಟ್ಟಿರದ ತಂದೆಯವರು, ತಾಯಿಯ ಬಳಿ ಸ್ವಲ್ಪ ಹೊತ್ತು ನಿಂತು ನೋಡಿ, ಹೊರಬಂದು, ನನ್ನನ್ನು ಕರೆದು, "ಅಮ್ಮನ ದೇಹದಾನ ಮೆಡಿಕಲ್ ಕಾಲೇಜ್ಗೆ ಮಾಡುವಂತೆ ಡಾಕ್ಟ್ರಿಗೆ ತಿಳಿಸು" ಎಂದರು. ನನಗೆ ಆಗ ಏನು ಹೇಳುವುದು, ಏನು ಮಾಡುವುದು ತೋಚಲೇ ಇಲ್ಲ. " ಈ ದೇಹದಲ್ಲಿ ಏನಿದೆ? ಅವಳು ನಮ್ಮೆಲ್ಲರ ಹೃದಯದಲ್ಲಿರುವಳು. ನಾಳೆ ಹೇಗೂ ಸುಡುವರು,ಅದರ ಬದಲು..."ಎಂದೆಲ್ಲಾ ತಮ್ಮ ದುಃಖ ನುಂಗಿ ಹೇಳುತ್ತಲೇ ಇದ್ದರು. ಸಿನೆಮಾ ನಟ ಲೋಕೇಶ್ರ ನಿಧನಾನಂತರ ಅವರ ದೇಹವನ್ನು ಮೆಡಿಕಲ್ ಕಾಲೇಜ್ಗೆ ದಾನ ನೀಡಿದ್ದು ಗೊತ್ತಿತ್ತು. http://www.chitraloka.com/flash-back/137-memories-tragedies/1754-body-donated-to-hospital.html
ಮನಸ್ಸನ್ನು ಎಷ್ಟು ಗಟ್ಟಿ ಮಾಡಿದರೂ ನನ್ನಿಂದ ಒಪ್ಪಲು ಸಾಧ್ಯವಾಗಲಿಲ್ಲ. ತಮ್ಮ ತಂಗಿಯ ಅಭಿಪ್ರಾಯ ಕೇಳಿ ಬರುವೆ ಎಂದು ತಂದೆಯ ಬಳಿ ಹೇಳಿ ಬಂದೆ. ಎಲ್ಲರೂ ಬೇಡ ಎಂದು ಒತ್ತಾಯಿಸಿದ್ದರಿಂದ ಅಪ್ಪ ಸುಮ್ಮನಾದರು.
ನಂತರವೂ ಪ್ರತಿದಿನ ನಮ್ಮಲ್ಲಿ ನಡೆಯುವ ಕ್ರಿಯಾಕರ್ಮಗಳ ಬಗ್ಗೆ ತಂದೆಯವರು ವಿರೋಧಿಸುತ್ತಲೇ ಇದ್ದರು. "ಬದುಕಿರುವಾಗ ನೀನು ಚೆನ್ನಾಗಿ ನೋಡಿರುವೆ. ಅದು ಮುಖ್ಯ. ಇದೆಲ್ಲಾ ವ್ಯರ್ಥ..." ಎಂದು ಹೇಳುತ್ತಿದ್ದರು.
ಒಂದೆರಡು ತಿಂಗಳ ನಂತರ ತಂದೆಯವರು ಒಂದು ಅರ್ಜಿ ತಂದು ಸಹಿ ಹಾಕಲು ಹೇಳಿದರು. ನೋಡಿದರೆ ಅವರ ದೇಹದಾನದ ಅರ್ಜಿ. ಒಬ್ಬ ಡಾಕ್ಟರ್ ಮಗ ತನ್ನ ತಂದೆಯ ದೇಹವನ್ನೇ ಬಗೆದು ಮಕ್ಕಳಿಗೆ ಪಾಠ ಮಾಡಿದರೆ, http://www.bbc.co.uk/news/world-south-asia-11710741 ನಾನು ದೇಹದಾನದ ಅರ್ಜಿಗೇ ಸಹಿ ಹಾಕಲು ಹಿಂದೇಟು ಹಾಕಿದೆ.
ಆರೋಗ್ಯವಂತರಾಗೇ ಇದ್ದ ನನ್ನ ತಂದೆಯವರು ಎಪ್ರಿಲ್ ೨೫ರಂದು ನಮ್ಮಲ್ಲಿ (ಕೊನೆಯ) ಊಟಮಾಡಿ, ತಂಗಿ ಮನೆಗೆ ಹೋದವರು, ಎಪ್ರಿಲ್ ೨೯ರಂದು ಮನೆಯಲ್ಲಿ ಮಲಗಿದ್ದಂತೆ ತೀರಿದರು. ದುಃಖದಲ್ಲಿದ್ದವನಿಗೆ ದೇಹದಾನವಾಗಲಿ, ಅಂಗಾಂಗ ದಾನವಾಗಲೀ ನೆನಪಾಗಲೇ ಇಲ್ಲ. ತೀರಿಹೋದ ೪೧ ದಿನದ ಮಗುವಿನ ಹೃದಯದ ಕವಾಟ ದಾನದಿಂದಾಗಿ ೨ ಮಕ್ಕಳಿಗೆ ಜೀವದಾನ ಎಂಬ ಪತ್ರಿಕಾ ವರದಿ ಇದೇ ೨೨ನೇ ತಾರೀಕಿನಂದು ಓದಿದೆ. http://www.manipalworldnews.com/news_local.asp?id=3249
ಕವಾಟ ದಾನದ ಬಗ್ಗೆ ಮಗುವಿನ ತಂದೆತಾಯಿಯ ಮನವೊಲಿಸಿದ Mohan (Multi Organ Harvesting Aid Network) foundation ಪ್ರಯತ್ನ ನಿಜಕ್ಕೂ ಪ್ರಶಂಸನೀಯ. http://www.mohanfoundation.org/
ಆದರ್ಶ ಅಧ್ಯಾಪಕರಾಗಿದ್ದ ತಂದೆಯವರು ಸಾವಲ್ಲೂ ಆದರ್ಶರಾಗಲು ನಾನು ಬಿಡಲಿಲ್ಲ..
-ಗಣೇಶ
Comments
ಉ: ದೇಹದಾನ
In reply to ಉ: ದೇಹದಾನ by kavinagaraj
ಉ: ದೇಹದಾನ
ಉ: ದೇಹದಾನ
In reply to ಉ: ದೇಹದಾನ by Narayana
ಉ: ದೇಹದಾನ
ಉ: ದೇಹದಾನ
In reply to ಉ: ದೇಹದಾನ by partha1059
ಉ: ದೇಹದಾನ
ಉ: ದೇಹದಾನ
In reply to ಉ: ದೇಹದಾನ by nagarathnavina…
ಉ: ದೇಹದಾನ
ಉ: ದೇಹದಾನ
In reply to ಉ: ದೇಹದಾನ by venkatb83
ಶವದಾನ