ಸೊಕ್ಕಿದ ಪ್ರವಾಸಿ
ಭಾರತ ಇಂಗ್ಲೆಂಡ್ ಪ್ರವಾಸದಲ್ಲಿದೆ. ನಾಲ್ಕು ಟೆಸ್ಟ್ ಮತ್ತು ಇತರೆ ಪಂದ್ಯಗಳಲ್ಲಿ ಭಾಗವಹಿಸಲು ಬಂದ ಭಾರತ ಬರುತ್ತಲೇ ವಿವಾದದ ಕಂಬಳಿಯ ಮೇಲೆ ಕಾಲಿಟ್ಟಿತು. ಹೊಸ ತಂತ್ರಜ್ಞಾನವನ್ನು ಅಳವಡಿಸಿ ಕೊಳ್ಳಲು ಒಲ್ಲದ ಸೊಕ್ಕಿದ ಪ್ರವಾಸಿಗರು ಎಂದು ಇಂಗ್ಲೆಂಡ್ ನ ಪತ್ರಿಕೆಯೊಂದು ನಮ್ಮನ್ನು ಜರೆಯಿತು. ಅತಿಥಿಗಳನ್ನು ಆದರಿಸುವ ಪರಿ ಇದು. ಹೊಸ ತಂತ್ರ ಜ್ಞಾನ ( lbw verdicts under the Decision Review System ) ವನ್ನು ನಾವು ತಿರಸ್ಕರಿಸಿದ್ದಿದ್ದರೆ ಅದಕ್ಕೆ ಉತ್ತರಿಸ ಬೇಕಾದ ರೀತಿ ಇದಲ್ಲ. ಹೌದು ಕ್ರಿಕೆಟ್ ಇಂಗ್ಲೆಂಡಿನ ಹುಲ್ಲುಗಾವಲಿನಲ್ಲಿ ಕುರಿ ಮೇಯಿಸುತ್ತಿದ್ದ ಕುರುಬರಿಂದ ಬಂದಿರಬಹುದು. ಆದರೆ ಆ ಕ್ರೀಡೆಗೆ ಮಾನ್ಯತೆ, ಜನಪ್ರಿಯತೆ, ರಂಗು, ಸ್ಪರ್ದೆ ಎಲ್ಲವನ್ನೂ ಒದಗಿಸಿದ್ದು ಏಷ್ಯಾದ ತಂಡಗಳು. ಕ್ರಿಕೆಟ್ ಇಂದು ವಿಶ್ವ ಮಾನ್ಯ ಕ್ರೀಡೆಯಾಗಿ ಕಂಗೊಳಿಸಿದರೆ ಅದರ ಕೀರ್ತಿಗೆ ಭಾರತ, ಶ್ರೀಲಂಕಾ, ಪಾಕಿಸ್ತಾನ ಭಾಜನರು. ಅದರಲ್ಲೂ ಭಾರತೀಯರ ಅಭೂತಪೂರ್ವ ಬೆಂಬಲ ಇಂದು ಕ್ರಿಕೆಟ್ ಶ್ರೀಮಂತ ಕ್ರೀಡೆಯಾಗಿ ಹೊರ ಹೊಮ್ಮಲು ಕಾರಣ.
ಭಾರತ ವಿಶ್ವದ ನಂಬರ್ ವನ್ ಕ್ರಿಕೆಟ್ ರಾಷ್ಟ್ರವಾಗದೆ ಬರೀ ಒಂದು “ಆಮ್ಲೆಟ್” ಆಗಿದ್ದಿದ್ದರೆ ಸರಿಯಾಗಿ ಬೆಂದಿಲ್ಲ ಎಂದು ಅಡುಗೆ ಕೋಣೆಗೆ ಕಳಿಸಬಹುದಿತ್ತು. ಈ ಮಾತಿನ ಧಾಟಿ ನೋಡಿ. ನಮ್ಮ ನಡತೆ ಸರಿಯಿಲ್ಲ ಎಂದು ಅವರ ಭಾವನೆ. ಭಾರತದ ನಿರ್ಧಾರದ ವಿರುದ್ಧ ICC ಮೊರೆ ಹೋಗೋ ಬದಲು ಮಾಧ್ಯಮದ ಮೊರೆ ಏಕೆ ಹೋದರೋ ಅವರಿಗೇ ಗೊತ್ತು. ಈ ಸರಣಿಯಲ್ಲಿ ಯಾರ ಕಾನೂನಿಗೆ ಮಾನ್ಯತೆ ಎಂದು ಎಂಬುದನ್ನು ಭಾರತ ತೋರಿಸಿ ಕೊಟ್ಟಿತು ತನ್ನ ರೂಪಾಯಿಯ ಶಕ್ತಿ (“rupee-pile of influence” ) ಮೂಲಕ ಎಂದು ದೂರಿತು ಪತ್ರಿಕೆ. ವೆಸ್ಟ್ ಇಂಡೀಸ್ ನಲ್ಲಿ ಭಾರತದ ನಾಯಕ ಹೇಳಿದ ಮಾತನ್ನೂ ಈ ಲೇಖನದಲ್ಲಿ ಉದ್ಧರಿಸಲಾಯಿತು; ಆತ್ಮ ಸಾಕ್ಷಿಯಿಲ್ಲದೆ ಬಿಳಿ ಕೋಟ್ (ಅಂಪೈರ್) ಧರಿಸಿದವರ ಮೇಲೆ ಒತ್ತಡ ಹೇರಲಾಯಿತಂತೆ.
“ಆಧುನಿಕ ತಂತ್ರಜ್ಞಾನ ಉಪಯೋಗಿಸಲು ಒಪ್ಪದಿರುವುದು ಪ್ರವಾಸಿಗಳು ಮಾಡಿದ ವಿಧ್ವಂಸಕ ಕೃತ್ಯ” ಎನ್ನುವ ಶೀರ್ಷಿಕೆಯಡಿ ಬಂದ ಉದ್ದನಾದ ಲೇಖನ ಟೀಕೆ ಮಾಡಬೇಕೆಂದೇ ಬರೆದಿದ್ದು. ಕ್ರೀಡೆಯಲ್ಲೇ ಆಗಲೀ, ಸಂಸ್ಕಾರದಲ್ಲೇ ಆಗಲೀ, ವಾಣಿಜ್ಯವಹಿವಾಹಿಟಿನಲ್ಲೇ ಆಗಲೀ ಭಾರತದ ಉನ್ನತಿ ವಿದೇಶೀಯರಿಗೆ ಜೀರ್ಣಿಸಿಕೊಳ್ಳಲಾಗದ ಬೆಳವಣಿಗೆ. ಹೀಗೆ ಅಜೀರ್ಣದಿಂದ ನರಳುವಾಗ ದೇಶವೊಂದು “ಮೊಟ್ಟೆ ದೋಸೆ” ( ಆಮ್ಲೆಟ್ ) ಆಗಿ ಕಾಣುತ್ತದೆ. ಪ್ರವಾಸಿಗಳು ಸೊಕ್ಕಿದವರಂತೆ ಕಾಣುತ್ತಾರೆ.
Rating
Comments
ಉ: ಸೊಕ್ಕಿದ ಪ್ರವಾಸಿ
In reply to ಉ: ಸೊಕ್ಕಿದ ಪ್ರವಾಸಿ by kavinagaraj
ಉ: ಸೊಕ್ಕಿದ ಪ್ರವಾಸಿ