ಮೂಢ ಉವಾಚ - 150

ಮೂಢ ಉವಾಚ - 150

ಹುಟ್ಟು ಮೊದಲಲ್ಲ ಸಾವು ಕೊನೆಯಲ್ಲ
ಹುಟ್ಟು ಸಾವಿನ ಕೊಂಡಿ ಬದುಕಿನಾ ಬಂಡಿ |
ಹಿಂದಕೋ ಮುಂದಕೋ ಬಂಡಿ ಸಾಗುವುದು
ನಶಿಸಿದರೆ ಏರುವೆ ಹೊಸಬಂಡಿ ಮೂಢ || ..299


ಬಂಡಿಗೊಡೆಯನು ನೀನೆ ಪಯಣಿಗನು ನೀನೆ
ಅವನ ಕರುಣೆಯಿದು ಅಹುದಹುದು ತಾನೆ |
ಗುರಿಯ ಅರಿವಿರಲು ಸಾರ್ಥಕವು ಪಯಣ
ಗುರಿಯಿರದ ಪಯಣ ವ್ಯರ್ಥ ಮೂಢ || ..300
************
-ಕ.ವೆಂ.ನಾಗರಾಜ್.
 

 

Rating
No votes yet

Comments