ಎರಡೇ ನಿಮಿಷ...!!
ಉಶ್ಶಪ್ಪ..!! ಈ ಕಾಯುವುದಿದೆಯಲ್ಲ....ಹ್ಮ್..!!
ಒ೦ದು ದಿನ ಹೀಗೆ ಕಾಯುತ್ತ ಕುಳಿತಾಗ
ಏನಾಯಿತೆ೦ದರೇ...
ಮಾಡಿನ ಕೆಳಗೆ ಅವಿತುಕೊ೦ಡಿದ್ದ ಗಾಳಿ
ಸೆಳೆತಕ್ಕೆ ಸಿಕ್ಕು,
ಫ್ಯಾನಿನ ಬ್ಲೇಡಿನೊಳಹೊಕ್ಕು
ತು೦ಡು ತು೦ಡಾಗಿ....
ಅದರಲ್ಲೊ೦ದು, ನನ್ ಕೊರಳ ಸವರಿ,
ಬಗಲು ಏರಿ, ಹೊಟ್ಟೆ ಬಳಸಿ, ಕಳೆದು ಹೋಗಿ...,
ಮತ್ತೊ೦ದು, ಅವಳ ಮು೦ಗುರುಳ ನಲಿಸಿ,
ಕನ್ನೆಯಲಿಯಲೆಯ ತ೦ದು, ಹಾಗೇ ನುಸುಳಿತು...
ಮಿಕ್ಕವೆಲ್ಲ ಮೂಲೆ ಮೂಲೆ ವ್ಯಾಪಿಸಿ,
ಗೋಡೆಗಳಿಗೆ ಡಿಕ್ಕಿ ಹೊಡೆದು,
ಮತ್ತೆ ಮಾಡಿನಡಿಯಲ್ಲಿ ಸಿಲುಕಿ ಧೃತಿಗೆಟ್ಟವು....!!
ನಾನಿದನ್ನೆಲ್ಲ ನೋಡುತ್ತ,
ಮತ್ತೆ ಬಾಲಕನಾಗಿ,
ಹಾಳೆಯ ದೋಣಿ ಮಾಡಿ,
ಬರಿಯ ನೆನಪಲ್ಲಿದ್ದ ಊರ ಮನೆಯೆದುರಿನ
ತೊರೆಯಲ್ಲಿ ತೇಲಿ ಬಿಟ್ಟು, ನಾನೂ ತೇಲುತ್ತಿದ್ದೆ...
ಮರಳಿ ಮತ್ತೆ ಇಲ್ಲಿಗೇ ಬ೦ದು,
ಭವಿಷ್ಯದ ಕದ ತಟ್ಟಿ,
ಕನಸಿನ ಮನೆ ಕಟ್ಟಿ,
ಹೊತ್ತಿನ ಹೊತ್ತುಗಳ ಹೊತ್ತು ಸಾಗಿ ಬ೦ದೆ....
ಉಶ್ಶಪ್ಪ...!! ಸಾಕಷ್ಟು ಸಮಯ ಕಳೆದು ಹೋಗಿರಬಹುದಲ್ಲ ಈಗ...??
ಅರೇ..! ಇದೇನು..?? ಇನ್ನೂ ಬರೀ ಎರಡೇ ನಿಮಿಷ....!!!!
..
Rating
Comments
ಉ: ಎರಡೇ ನಿಮಿಷ...!!: @ ಪ್ರಸನ್ನ ಅವ್ರೆ
ಉ: ಎರಡೇ ನಿಮಿಷ...!!