ನಮಗೇನು ಬೇಕು?
ಅಪ್ಪಯ್ಯ ಹೇಳಿದ್ದ ಕತೆ – ೦೫
ನಮಗೇನು ಬೇಕು?
ಹೆಚ್ಚಾಗಿ ಮಾವಿನ ಮರಗಳಲ್ಲಿ ಹಾಗೂ ಗೇರು ಮರಗಳಲ್ಲಿ, ತಿಳಿಯಾದ ಕೆಂಪು-ಕೇಸರಿ ಬಣ್ಣದ ಹಾಗೂ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ ಇರುವೆಗಳು ಅಡ್ಡಾಡುತ್ತಿರುತ್ತವೆ. ಅವುಗಳು ನಮ್ಮ ಮೈಮೇಲೆ ಹರಿದಾಡಿದರೆ, ನಮ್ಮನ್ನು ಕಡಿಯದೇ ಇರುವುದಿಲ್ಲ. ಕಡಿದರೆ ವಿಪರೀತ ಉರಿತ. ಅವುಗಳಿಗೆ ನಾವು "ತಬುರು" ಎಂದು ಕರೆಯುತ್ತಿದ್ದೆವು. ಬಹುಷಃ ಅದು ತುಳು ಭಾಷೆಯ ಪದವಾಗಿರಬಹುದು. ಕನ್ನಡದಲ್ಲಿ ಏನನ್ನುತ್ತಾರೋ ಗೊತ್ತಿಲ್ಲ. ನಮ್ಮನ್ನು ಕಡಿವ ಆ ತಬುರುಗಳನ್ನು ನಾವು ಹಿಸುಕಿ ಹಾಕುವುದು ಸರ್ವೇ ಸಾಮಾನ್ಯವಾಗಿತ್ತು.
ಇದೇಕೆ ಹೀಗೆ? ಎಂದು ನಾವು ಬಾಲ್ಯದಲ್ಲಿ ಒಮ್ಮೆ ನಮ್ಮ ಅಪ್ಪಯ್ಯನವರನ್ನು ಕೇಳಿದ್ದಾಗ ಅವರು ಹೇಳಿದ್ದ ಮಾತುಗಳಿವು.
ಒಮ್ಮೆ ಈ ತಬುರುಗಳೆಲ್ಲಾ ಒಂದು ಸಭೆ ನಡೆಸಿದವು. “ನಮ್ಮನ್ನು ಮನುಜರು ಹಿಸುಕಿ ಹಿಸುಕಿ ಸಾಯಿಸುತ್ತಿದ್ದಾರೆ. ಇದನ್ನು ತಡೆಯಲು ನಾವು ದೇವರ ಮೊರೆ ಹೋಗೋಣ. ತಪಸ್ಸು ಮಾಡಿ ದೇವರಲ್ಲಿ ವರ ಬೇಡೋಣ” ಎಂದು ನಿರ್ಧರಿಸಿದವು. ಒಂದು ಸುಮುಹೂರ್ಥದಲ್ಲಿ, ಎಲ್ಲಾ ತಬುರುಗಳೂ ತಪಸ್ಸಿಗೆ ಕೂತು ಬಿಟ್ಟವು. ಕೊನೆಗೂ ದೇವರು ಪ್ರತ್ಯಕ್ಷರಾಗಿ “ನಿಮ್ಮ ಸಮಸ್ಯೆ ಏನು? ಏನು ಬೇಕಾಗಿದೆ? ಒಂದು ವರ ನೀಡುತ್ತೇನೆ. ಬೇಡಿಕೊಳ್ಳಿ” ಅಂದರು. ಆಗ ಆ ತಬುರುಗಳೆಲ್ಲಾ ನಾನು ಕೇಳುತ್ತೇನೆ, ನಾನು ಕೇಳುತ್ತೇನೆ ಎಂದು ಹಾರಾಡತೊಡಗಿದವು. ಇದನ್ನು ಕಂಡ ದೇವರು “ನಿಮ್ಮಲ್ಲಿ ಯಾರಾದರೂ ಒಬ್ಬರು, ಒಂದು ವರ ಕೇಳಿ, ನೀಡುತ್ತೇನೆ” ಅನ್ನುತ್ತಾರೆ.
ಆಗ ಒಂದು ತಬುರು, “ಸುಮ್ಮನಿರಿ ನಾನು ಕೇಳುತ್ತೇನೆ” ಎಂದು ಅನ್ಯ ತಬುರುಗಳನ್ನೆಲ್ಲಾ ಸುಮ್ಮನಿರಿಸಿ “ದೇವರೇ, ನಮ್ಮ ಸಮಸ್ಯೆ ಏನೆಂದರೆ, ನಾವು ಯಾವ ಮನುಜರನ್ನು ಕಡಿಯುತ್ತೇವೆಯೋ, ಆ ಮನುಜರು ನಮ್ಮನ್ನು ಹಿಸುಕಿ ಹಿಸುಕಿ ಸಾಯಿಸುತ್ತಿದ್ದಾರೆ. ಹಾಗಾಗಿ ’ಕಡಿದ ಕೂಡಲೇ ಸಾಯುವಂತೆ ವರ ನೀಡಿ ನಮಗೆ’’’ ಎಂದು ಬೇಡಿಕೆ ಸಲ್ಲಿಸುತ್ತದೆ. ಕೂಡಲೇ ದೇವರು “ತಥಾಸ್ತು” ಎಂದು ನುಡಿದು ಅದೃಶ್ಯರಾಗುತ್ತಾರೆ.
ಆ ತಬುರುಗಳೆಲ್ಲಾ ಸಂತೋಷದಿಂದ, "ಇನ್ನು ಕಡಿದ ಕೂಡಲೇ ಸಾವು, ಕಡಿದ ಕೂಡಲೇ ಸಾವು" ಎಂದು ಹಾಡುತ್ತಾ ಮರಳುತ್ತವೆ.
ಆಗ ನಾವು “ಆದರೆ ಇಂದಿಗೂ ಮನುಜ ಆ ತಬುರುಗಳು ಕಡಿದ ಕೂಡಲೇ, ಅವುಗಳನ್ನು ಹಿಸುಕಿ ಸಾಯಿಸುತ್ತಿದ್ದಾನೆ. ಮನುಜರು ಯಾರೂ ಆ ತಬುರುಗಳು ಕಡಿದ ಕೂಡಲೇ ಸಾಯಿತ್ತಿಲ್ಲವಲ್ಲಾ? ದೇವರಲ್ಲಿ ವರ ಪಡೆದು ಏನು ಪ್ರಯೋಜನವಾಯ್ತು?" ಎಂದು ಕೇಳಿದೆವು. ನಮ್ಮ ಈ ಪ್ರಶ್ನೆಗಳಿಗೆ ಅಪ್ಪಯ್ಯ ಉತ್ತರಿಸಿದ್ದು ಹೀಗೆ.
“ದೇವರು ವರ ಬೇಡಿಕೊಳ್ಳಿ ಅಂದಾಗ, ತಮಗೆ ಏನು ಬೇಕು ಅನ್ನುವುದನ್ನು ಅರಿತುಕೊಂಡು, ಒಂದಿಷ್ಟೂ ಅಪಾರ್ಥ ಅಥವಾ ಅನರ್ಥಗಳಿಗೆ ಎಡೆಮಾಡಿಕೊಡದಂತೆ, ಸ್ಪಷ್ಟವಾಗಿ, ಬೇಡಿಕೊಳ್ಳಬೇಕಿತ್ತು. ಆದರೆ, ಹಾಗೆ ಮಾಡುವ ಬದಲು ’ಕಡಿದ ಕೂಡಲೇ ಸಾಯುವಂತೆ ವರ ನೀಡಿ’ ಎಂದು ಬೇಡಿಕೊಂಡು, ಮೋಸ ಹೋಯಿತು.
ಹಾಗೆಯೇ, ನಮ್ಮ ಜೀವನದಲ್ಲಿ ನಮಗೆ ಏನು ಬೇಕು ಅನ್ನುವುದರ ಅರಿವು ನಮಗೆ ಚೆನ್ನಾಗಿ ಇರಬೇಕು. ಅದಿಲ್ಲವಾದರೆ, ನಮಗೆ ಒದಗುವ ಅವಕಾಶಗಳನ್ನು ನಾವು ಸದುಪಯೋಗಪಡಿಸಿಕೊಳ್ಳದೇ, ಅವು ನಮ್ಮ ಕೈತಪ್ಪಿಹೋಗುತ್ತವೆ”
*****
Comments
ಉ: ನಮಗೇನು ಬೇಕು?
In reply to ಉ: ನಮಗೇನು ಬೇಕು? by makara
ಉ: ನಮಗೇನು ಬೇಕು?
In reply to ಉ: ನಮಗೇನು ಬೇಕು? by asuhegde
ಉ: ನಮಗೇನು ಬೇಕು?
In reply to ಉ: ನಮಗೇನು ಬೇಕು? by makara
ಉ: ನಮಗೇನು ಬೇಕು?
In reply to ಉ: ನಮಗೇನು ಬೇಕು? by asuhegde
ಉ: ನಮಗೇನು ಬೇಕು?
ಉ: ನಮಗೇನು ಬೇಕು?
In reply to ಉ: ನಮಗೇನು ಬೇಕು? by vinuhegde
ಉ: ನಮಗೇನು ಬೇಕು?
ಉ: ನಮಗೇನು ಬೇಕು?
In reply to ಉ: ನಮಗೇನು ಬೇಕು? by suma kulkarni
ಉ: ನಮಗೇನು ಬೇಕು?
ಉ: ನಮಗೇನು ಬೇಕು?
In reply to ಉ: ನಮಗೇನು ಬೇಕು? by partha1059
ಉ: ನಮಗೇನು ಬೇಕು?
In reply to ಉ: ನಮಗೇನು ಬೇಕು? by Premashri
ಉ: ನಮಗೇನು ಬೇಕು?
In reply to ಉ: ನಮಗೇನು ಬೇಕು? by partha1059
ಉ: ನಮಗೇನು ಬೇಕು?