ನೆನಪಿದೆ ಅಮ್ಮ!!
(ಚಿತ್ರಕೃಪೆ:Google)
ಇನ್ನೂ ನೆನಪಿದೆ ಅಮ್ಮ,
ನಿನ್ನುದರ ಸೀಳಿ ನಾ ಹೊರಬಂದಾಗ,
ಸಿಕ್ಕ ಮರುಹುಟ್ಟಿನಲೂ,
ನನ್ನ ನೋಡುವ ನಿನ್ನ ಕಾತರ.
ಇನ್ನೂ ನೆನಪಿದೆ ಅಮ್ಮ,
ನಿನ್ನೆದೆಯ ನಾ ಚೀಪುವಾಗ,
ನಾನೊದ್ದ ಕಾಲಿನ ನೋವಿಗೆ,
ನಿನ್ನ ತುಟಿಯಲ್ಲಿ ಮಿನುಗಿದ ನಗು.
ಇನ್ನೂ ನೆನಪಿದೆ ಅಮ್ಮ,
ಮೊಸರನ್ನವನಿಕ್ಕುತ ನೀ ತೋರಿದ,
ಮಾಳಿಗೆಯ ಅಚ್ಚರಿಯ ಚಂದಿರ,
ಎಣಿಸಿದ ನಕ್ಷತ್ರ.
ಇನ್ನೂ ನೆನಪಿದೆ ಅಮ್ಮ,
ನಾ ನಿನ್ನ ತೊದಲು ಕರೆದಾಗ,
ಬಳಿ ಓಡಿ ಬಂದು,
ನೀನಪ್ಪಿದ ಬಿಸಿ ಸ್ಪರ್ಶ.
ಇನ್ನೂ ನೆನಪಿದೆ ಅಮ್ಮ,
ಅಪ್ಪ ಬರೆದ ಬೆನ್ನ ಬಾಸುಂಡೆಗಳ,
ಮೇಲೆ ನೀ ಹಚ್ಚಿದ,
ಕಣ್ಣೀರ ಲೇಪನ.
ಇನ್ನೂ ನೆನಪಿದೆ ಅಮ್ಮ,
ಯಶಸ್ಸಿನುತ್ತುಂಗವನೇರಲು,
ನೀ ಗುಂಡಿಗೆಯಲ್ಲಿ ಬಿತ್ತಿದ,
ಉತ್ಸಾಹದ ಚಿಲುಮೆ.
ಇನ್ನೂ ನೆನಪಿದೆ ಅಮ್ಮ,
ನಾನವಳ ಕೈ ಹಿಡಿದಾಗ,
ನಿನ್ನ ಕಣ್ಣಂಚಿನಲಿ,
ಜಿನುಗಿದ ಆ ಮುತ್ತು ಹನಿ.
ಇನ್ನೂ ನೆನಪಿದೆ ಅಮ್ಮ,
ಇದ್ದಕಿದ್ದಂತೆ ನೀನೆದ್ದು,
ಹೊರಟು ನಿಂತಾಗ,
ಬೆಂಬಿಡದೆ ಕಾಡಿದ ಅಸಾಧ್ಯ ಯಾತನೆ.
Comments
ಉ: ನೆನಪಿದೆ ಅಮ್ಮ!!
In reply to ಉ: ನೆನಪಿದೆ ಅಮ್ಮ!! by venkatb83
ಉ: ನೆನಪಿದೆ ಅಮ್ಮ!!
In reply to ಉ: ನೆನಪಿದೆ ಅಮ್ಮ!! by nanjunda
ಉ: ನೆನಪಿದೆ ಅಮ್ಮ!!
In reply to ಉ: ನೆನಪಿದೆ ಅಮ್ಮ!! by gurudutt_r

In reply to ಉ: ನೆನಪಿದೆ ಅಮ್ಮ!! by ganapati_bd
ಉ: ನೆನಪಿದೆ ಅಮ್ಮ!!