ವೇದೋಕ್ತ ಜೀವನ ಶಿಬಿರ ಮಾಹಿತಿ
ಓಂ
ವೇದಭಾರತೀ, ಹಾಸನ
ವೇದಾಧ್ಯಾಯೀ ಶ್ರೀಸುಧಾಕರಶರ್ಮರ ಮಾರ್ಗದರ್ಶನದಲ್ಲಿ
ವೇದೋಕ್ತ ಜೀವನ ಶಿಬಿರ
ಸ್ಥಳ: ಸಹೃದಯ ಮಂದಿರ, ಶ್ರೀಶಂಕರಮಠದ ಆವರಣ,ಹಾಸನ
ದಿನಾಂಕ 23,24 ಮತ್ತು 25 ಆಗಸ್ಟ್ 2013
ಸಮಯ ಸಾರಿಣಿ
ಪ್ರಾತ:ಕಾಲ
5:00 :ಉತ್ಥಾನ
5:00 ರಿಂದ 6:15 :ಶೌಚ-ಸ್ನಾನ-ಪಾನೀಯ
6:15 ರಿಂದ 7:00 :ಯೋಗ-ಪ್ರಾಣಾಯಾಮ
7:15 ರಿಂದ 8:00 :ಸಂಧ್ಯೋಪಾಸನೆ-ಅಗ್ನಿಹೋತ್ರ
8:00 ರಿಂದ 8.30 :ಉಪಹಾರ
8:45 ರಿಂದ 11:00 :ವೇದೋಕ್ತ ಜೀವನ ಕ್ರಮ,ಅವಧಿ-1
11:00 ರಿಂದ 12:00 :ವೇದಾಭ್ಯಾಸ
ಮಧ್ಯಾಹ್ನ:
12:15 ರಿಂದ 2:30 :ಭೋಜನ ವಿಶ್ರಾಂತಿ
2:45 ರಿಂದ 4:00 :ವೇದೋಕ್ತ ಜೀವನ ಕ್ರಮ,ಅವಧಿ-2
4:00 ರಿಂದ 4:30 :ಪಾನೀಯ
4:30 ರಿಂದ 6:00 :ವೇದೋಕ್ತ ಜೀವನ ಕ್ರಮ ,ಅವಧಿ-3
6:00 ರಿಂದ 6:40 :ಸಂಧ್ಯೋಪಾಸನೆ-ಅಗ್ನಿಹೋತ್ರ
ರಾತ್ರಿ:
7:00 ರಿಂದ 8:00 :ಉಪನ್ಯಾಸ
8:15 ರಿಂದ 9:00 :ಭೋಜನ
9:00 ರಿಂದ 10:00 :ಅನೌಪಚಾರಿಕ
10:00-ದೀಪ ವಿಸರ್ಜನೆ
ವೇದೋಕ್ತ ಜೀವನ ಶಿಬಿರ- ಸೂಚನೆಗಳು:
1.ಶಿಬಿರಾರ್ಥಿಗಳು ದಿನಾಂಕ 22.8.2013 ರಾತ್ರಿ 9.00ಕ್ಕೆ ಮುಂಚೆ ಶಿಬಿರಸ್ಥಾನದಲ್ಲಿರಬೇಕು.ರಾತ್ರಿ ಊಟದ ವ್ಯವಸ್ಥೆ ಇರುತ್ತದೆ.
2.ಜಮಖಾನದ ವ್ಯವಸ್ಥೆ ಇರುತ್ತದೆ.ಹೊದಿಕೆಯಣ್ಣೂ ಶಿಬಿರಾರ್ಥಿಗಳೇ ತರಬೇಕು.
3.ಹಾಸನದ ಶಿಬಿರಾರ್ಥಿಗಳು ಶಿಬಿರದಲ್ಲಿ ರಾತ್ರಿಯ ಊಟ ಮುಗಿಸಿ ಮನೆಗೆ ತೆರಳಿ ಬೆಳಿಗ್ಗೆ6.00ಕ್ಕೆ ಶಿಬಿರಸ್ಥಾನದಲ್ಲಿ ಹಾಜರಿರಬೇಕು.
4.ಟಾರ್ಚ್ ಒಂದನ್ನು ಹೊಂದಿದ್ದರೆ ಉತ್ತಮ.
5.ಬರೆಯಲು ಪುಸ್ತಕ ಪೆನ್ ಶಿಬಿರದಲ್ಲಿ ಕೊಡಲಾಗುತ್ತದೆ.
6.ವೇದೋಕ್ತ ಜೀವನ ಪಥ, ನಿತ್ಯ ಸಂಧ್ಯಾಗ್ನಿಹೋತ್ರ, ನಿಜವ ತಿಳಿಯೋಣ ಸಿಡಿ, ಮತ್ತು ಉಪಯುಕ್ತ ಇತರೆ ಪುಸ್ತಕಗಳು ಶಿಬಿರದಲ್ಲಿ ಮಾರಾಟಕ್ಕೆ ಲಭ್ಯ.
7.ಶಿಬಿರದಲ್ಲಿ ಮುಕ್ತ ಸಂವಾದಕ್ಕೆ ಅವಕಾಶವಿರುತ್ತದೆ.
8.ಮಲಗಲು ಸ್ತ್ರೀ ಪುರುಷರಿಗೆ ಪ್ರತ್ಯೇಕ ಹಾಲ್ ವ್ಯವಸ್ಥೆ ಇರುತ್ತದೆ .ಪ್ರತ್ಯೇಕ ಕೊಠಡಿ ಗಳಿರುವುದಿಲ್ಲ
9.ಬೆಲೆಬಾಳುವ ಸಾಮಾನುಗಳನ್ನು ತರದಿರುವುದು ಉತ್ತಮ
10.ಶಿಬಿರದಲ್ಲಿನ ಎಲ್ಲಾ ಕಾರ್ಯಕ್ರಮಗಳೂ ರೆಕಾರ್ಡ್ ಆಗುತ್ತವೆ ಮತ್ತು ಅದರ ಆಡಿಯೋ/ವೀಡಿಯೋ/ ಫೋಟೋಗಳು ಇರುವ ಸಿ.ಡಿ/ಡಿ.ವಿ.ಡಿ ಯನ್ನು ಆಸಕ್ತರಿಗೆ ಶಿಬಿರ ಮುಗಿದ 15 ದಿನಗಳಲ್ಲಿ ಕಳಿಸಿಕೊಡ ಲಾಗುವುದು.ಆದ್ದರಿಂದ ಶಿಬಿರಾರ್ಥಿಗಳು ಬೆಲೆಬಾಳುವ ಕ್ಯಾಮರಾ, ಮೊಬೈಲ್ ಅಥವಾ ರೆಕಾರ್ಡಿಂಗ್ ಸಾಧನ ತರದಿರುವುದು ಉತ್ತಮ.ಒಂದು ವೇಳೆ ತಂದರೆ ಬೆಲೆಬಾಳುವ ಸಾಧಗಳ ಜವಾಬ್ದಾರಿ ಶಿಬಿರಾರ್ಥಿಗಳದ್ದೇ ಆಗಿರುತ್ತದೆ.
11.ವಿಶ್ರಾಂತಿ ಸಮಯದ ಹೊರತಾಗಿ ಶಿಬಿರದ ಸಮಯದಲ್ಲಿ ಮೊಬೈಲ್ ಸ್ವಿಚ್ ಆಫ್ ಮಾಡಿರಬೇಕು.
12.ವೇದಸುಧೆ ತಾಣದಲ್ಲಿ ಶಿಬಿರಾರ್ಥಿಗಳ ಹೆಸರು ಪ್ರಕಟಿಸಲಾಗಿದೆ.ಒಂದುವೇಳೆ ಶಿಬಿರಶುಲ್ಕ 500.00 ರೂ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು ಅವರ ಹೆಸರು ಪ್ರಕಟವಾಗಿರದಿದ್ದರೆ vedasudhe@gmail.com ಗೆ ಹಣಪಾವತಿ ವಿವರವನ್ನು ಮೇಲ್ ಮಾಡಿ.
13.ದಿನಾಂಕ 25.8.2013 ಭಾನುವಾರ ಸಂಜೆ 5.00 ಗಂಟೆಗೆ ನಡೆಯುವ ಶಿಬಿರ ಸಮಾರೋಪ ಸಮಾರಂಭವನ್ನು ಮುಗಿಸಿಕೊಂಡು ಶಿರಾರ್ಥಿಗಳು ಹಿಂದಿರುಗಬಹುದು. ಹೊರ ಊರುಗಳಿಗೆ ಅಂದು ತೆರಳಲು ಅವಕಾಶವಿಲ್ಲದಿದ್ದವರಿಗೆ ರಾತ್ರಿ ಉಳಿಯಲು ಅವಕಾಶವಿರುತ್ತದೆ.
14.ಹೆಚ್ಚಿನ ಮಾಹಿತಿಗಾಗಿ ಕವಿನಾಗರಾಜ್: 9448504804,ಹರಿಹರಪುರಶ್ರೀಧರ್:9663572406, ಅಥವಾ ಶ್ರೀ ಚಿನ್ನಪ್ಪ: 9448653727ಇವರನ್ನು ಸಂಪರ್ಕಿಸಿ
Comments
ಉ: ವೇದೋಕ್ತ ಜೀವನ ಶಿಬಿರ ಮಾಹಿತಿ
7.ಶಿಬಿರದಲ್ಲಿ ಮುಕ್ತ ಸಂವಾದಕ್ಕೆ ಅವಕಾಶವಿರುತ್ತದೆ.... 10."ಶಿಬಿರದಲ್ಲಿನ ಎಲ್ಲಾ ಕಾರ್ಯಕ್ರಮಗಳೂ ರೆಕಾರ್ಡ್ ಆಗುತ್ತವೆ"-ಬಿಗ್ ಬಾಸ್ ೨?:)
In reply to ಉ: ವೇದೋಕ್ತ ಜೀವನ ಶಿಬಿರ ಮಾಹಿತಿ by ಗಣೇಶ
ಉ: ವೇದೋಕ್ತ ಜೀವನ ಶಿಬಿರ ಮಾಹಿತಿ
ಪ್ರಿಯ ಗಣೇಶರೇ, ಬಿಗ್ ಬಾಸಿಗೆ ಟಿಆರ್ ಪಿ ಅಗತ್ಯವಿದೆ. ಅವರಿಗೆ ಹಣ ಸಿಗುತ್ತದೆ. ಇಲ್ಲಿ ಉಲ್ಟಾ! ಇಲ್ಲಿ ಹಣ ಖರ್ಚಾಗುತ್ತದೆ! ತಿಳಿಯಲು ಆಸಕ್ತಿ ಇರುವವರಿಗೆ ತಿಳಿಯಲು ಅವಕಾಶವಾಗಲಿ ಎಂಬುದಷ್ಟೇ ಶಿಬಿರದ ಉದ್ದೇಶ. ಇನ್ನು ರೆಕಾರ್ಡ್ ಮಾಡುವ ಉದ್ದೇಶ ತಿಳಿಯಲು ಇಚ್ಛಿಸುವ ಹೊರಗಿನವರಿಗಾಗಿ!