ಸುಂದರ ಜೀವನಕ್ಕೆ ಕೆಲವು ಸೂತ್ರಗಳು

ಸುಂದರ ಜೀವನಕ್ಕೆ ಕೆಲವು ಸೂತ್ರಗಳು

1. ದಿನಾ 10-30 ನಿಮಿಷಗಳ ಕಾಲ ನಗುಮೊಗದಿಂದ ವಾಕ್ ಮಾಡಿ. 10 ನಿಮಿಷಗಳ ಮೌನ ಆಚರಿಸಿ, 7 ಘಂಟೆಗಳ ಕಾಲ ನಿದ್ದೆ ಮಾಡಿ.

2. ದಿನಾಲೂ ಪ್ರಾರ್ಥನೆ, ಧ್ಯಾನ ಮನಸ್ಸನ್ನು ಹತೋಟಿಯಲ್ಲಿಡುತ್ತದೆ. ಜೀವನದ ಜಂಜಡವನ್ನು ಎದುರಿಸಲು ಇಂಧನದಂತೆ ಶಕ್ತಿ ನೀಡುತ್ತದೆ.

3. ಶಕ್ತಿ, ಉತ್ಸಾಹ, ಸಂವೇದನಾಶೀಲತೆ ಇರಲಿ.

4. ಧಾರಾಳವಾಗಿ ನೀರು ಕುಡಿಯಿರಿ. ಇಷ್ಟವಾದ ಆಟವಾಡಿ.

5. ತಿಂಡಿ ರಾಜನಂತೆ ತಿನ್ನಿ. ಮಧ್ಯಾಹ್ನದ ಊಟ ರಾಣಿಯಂತೆ ತಿನ್ನಿ. ರಾತ್ರಿ ಊಟ ಭಿಕ್ಷುಕನಂತೆ ಇರಲಿ.

6. ಕಾರ್ಖಾನೆಗಳಲ್ಲಿ ತಯಾರಾಗುವ ಆಹಾರಕ್ಕಿಂತ ಗಿಡಗಳಲ್ಲಿ ಬಿಡುವ ಆಹಾರವನ್ನು ಹೆಚ್ಚು ಹೆಚ್ಚು ತಿನ್ನಿ.

7. ಜಾಸ್ತಿ ಮುಗುಳುನಗಿ. ಹೆಚ್ಚೆಚ್ಚು ನಕ್ಕುಬಿಡಿ. ದಿನಾಲೂ ಕನಿಷ್ಟ 3 ಜನರಿಗಾದರೂ ಮುಗುಳುನಗೆ ಬೀರಿ.

8. ಗಾಸಿಪ್ ಗಳಲ್ಲಿ ಕಾಲಕಳೆದು ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಿಕೊಳ್ಳಬೇಡಿ. ಆ ಶಕ್ತಿಯನ್ನು ಧನಾತ್ಮಕ ಚಿಂತನೆಗಳಿಗೆ ಬಳಸಿ.

9. ಯಾರನ್ನೂ ದ್ವೇಷಿಸುವದರಲ್ಲಿ ಕಾಲ ಕೊಲ್ಲಬೇಡಿ. ಜೀವನ ಚಿಕ್ಕದು. ನಿಮ್ಮನ್ನು ಯಾರಿಗೂ ಹೋಲಿಸಿಕೊಳ್ಳಬೇಡಿ. ಯಾಕೆಂದರೆ ಅವರ ಪಯಣ ಎಲ್ಲೆಂದು ನಿಮಗೆ ತಿಳಿದಿಲ್ಲ.

10. ದಿನಾಲೂ ಸ್ವಲ್ಪ ಸಮಯವಾದರೂ 70 ವರ್ಷಕ್ಕಿಂತ ಜಾಸ್ತಿ, 6 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳೊಡನೆ ಕಾಲ ಕಳೆಯಿರಿ.

11. ಎಲ್ಲಾ ವಾದಗಳನ್ನೂ ಗೆಲ್ಲಬೇಕಿಂದಿಲ್ಲ. ಸೋತು ಗೆದ್ದುಬಿಡಿ.

12. ನಿಮ್ಮ ಸಂಗಾತಿಗೆ ಅವರ ಹಿಂದಿನ ತಪ್ಪುಗಳನ್ನು ಜ್ಞಾಪಿಸಿ ನಿಮ್ಮ ಇಂದಿನ ಸಂತೋಷವನ್ನು ಕೊಲ್ಲಬೇಡಿ.

13. ನಿಮ್ಮನ್ನು ನೀವೇ ಗಂಭೀರವಾಗಿ ತೆಗೆದುಕೊಳ್ಳಬೇಡಿ. ಯಾಕೆಂದರೆ ಬೇರೆ ಯಾರೂ ನಿಮ್ಮನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ.

14. ಜೀವನ ಒಂದು ಶಾಲೆಯಿದ್ದಂತೆ. ಸಮಸ್ಯೆಗಳು ಬೀಜಗಣಿತದ ಲೆಕ್ಕಗಳಂತೆ ಕರಗಿ ಉತ್ತಮ ಪಾಠ ಕಲಿಸುತ್ತವೆ. ಸಮಸ್ಯೆಗಳನ್ನು ಉತ್ಸಾಹದಿಂದ ಎದುರಿಸಿ.

15. ನಿಮ್ಮ ಉದ್ಯೋಗ ನಿಮ್ಮನ್ನು ನೀವು ನಿವೃತ್ತಿಯಾಗುವವರೆಗೂ ಕಾಯುವುದು. ನಿಮ್ಮ ಕುಟುಂಬ, ಸಂಬಂಧಿಗಳು ಮತ್ತು ಮಿತ್ರರು ಮಾತ್ರ ನಿಮ್ಮೊಡನೆ ಯಾವಾಗಲೂ ಇರುವವರು. ಅವರಿಗೆ ಯಾವಾಗಲೂ ಸಮಯ ಕೊಡಿ.

16. ಎಲ್ಲರನ್ನೂ ಕ್ಷಮಿಸುತ್ತಾ, ಅವರ ತಪ್ಪುಗಳನ್ನು ಮರೆಯುತ್ತಾ ಮುಂದೆ ಸಾಗಿ.

Comments

Submitted by ravindra n angadi Sat, 06/13/2015 - 11:04

ಹರೀಶ್ ಅವರಿಗೆ ನಮಸ್ಕಾರಗಳು,
ಸುಂದರವಾಗಿ ಜೀವನ ರೂಪಿಸಿಕೊಳ್ಳುವವರಿಗೆ ಈ ಸೂತ್ರಗಳು ಬಹಳಷ್ಟು ಉಪಯುಕ್ತ.ಈ ಅಂಶಗಳನ್ನು ಓದಿ ಮರೆಯಬೇಡಿ ಇವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಿ ಎಂದು ಓದುಗರಲ್ಲಿ ಸಲಹೆ ಕೊಡಲು ಇಚ್ಛಿಸುತ್ತೇನೆ.
ಧನ್ಯವಾದಗಳು.