ಮತ್ತೊಮ್ಮೆ ಮಗುವಾಗಬಾರದೇ !

Submitted by ravinayak on Tue, 06/12/2018 - 14:46
ಚಿತ್ರ

 
ಹತ್ತಿ ಕಟಗಿ
ಬತ್ತಿ ಕಟಗಿ
ಬಾವಣ್ಣವರ
ಬಸಪ್ಪನವರ
ಕೈ ಕೈ ದೂಳಗೈ
ಪಂಚಂ ಪಗಡಂ
ನೆಲಕಡಿ ಹನುಮ
ದಾತರ ದರ‍್ಮ
ತಿಪ್ಪಿ ಮೇಲೆ ಕೋಳಿ
ರಗತ ಬೋಳಿ
ಕೈ ಕೈ ಎಲ್ಲಿ ಹೋಯ್ತು ?
ಕದದ ಸಂದ್ಯಾಗ !
ಕದ ಏನ್ ಕೊಟ್ತು ?
ಚೆಕ್ಕಿ ಕೊಟ್ತು !
ಚೆಕ್ಕಿ ಏನ್ ಮಾಡ್ದಿ ?
ಒಲಿಯಾಗ ಹಾಕ್ದೆ !
ಒಲಿ ಏನ್ ಕೊಟ್ತು ?
ಬೂದಿ ಕೊಟ್ತು !
ಬೂದಿ ಏನ್ ಮಾಡ್ದಿ ?
ತಿಪ್ಪಿಗಾಕಿದೆ !
ತಿಪ್ಪಿ ಏನ್ ಕೊಟ್ತು ?
ಗೊಬ್ಬರ ಕೊಟ್ತು !
ಗೊಬ್ಬರ ಏನ್ ಮಾಡ್ದಿ ?
ಹೊಲಕ ಹಾಕಿದೆ !
ಹೊಲ ಏನ್ ಕೊಟ್ತು ?
ಜೋಳ ಕೊಟ್ತು !
ಜೋಳ ಏನ್ ಮಾಡ್ದಿ ?
ಚೊಲೊ ಚೊಲೊ ನಾ ತಿಂದೆ
ಸೆರಗ ಮುರಗ ಕುಂಬಾರಗ ಕೊಟ್ಟೆ !
ಕುಂಬಾರ ಏನ್ ಕೊಟ್ಟ ?
ಗಡಿಗಿ ಕೊಟ್ಟ !
ಗಡಿಗಿ ಏನ್ ಮಾಡ್ದಿ ?
ಬಾವ್ಯಾಗ ಬಿಟ್ಟೆ !
ಬಾವಿ ಏನ್ ಕೊಟ್ತು ?
ನೀರು ಕೊಟ್ತು !
ನೀರು ಏನ್ ಮಾಡ್ದಿ ?
ಗಿಡಕ್ಕ ಹಾಕ್ದೆ !
ಗಿಡ ಏನ್ ಕೊಟ್ತು ?
ಹೂವು ಕೊಟ್ತು !
ಹೂವು ಏನ್ ಮಾಡ್ದೆ ?
ದೇವ್ರಿಗೆ ಏರಿಸಿದೆ… !
 
 

Rating
No votes yet

Comments

kavinagaraj

Sat, 06/16/2018 - 10:10

ಬಾಲ್ಯದ ನೆನಪಾಯತು. ಚಿಕ್ಕಂದಿನಲ್ಲಿ ಇಂತಹ ಪ್ರಾಸಬದ್ಧ ಹಾಡುಗಳನ್ನು ಹೇಳಿಕೊಂಡು ಸಂಭ್ರಮಿಸುತ್ತಿದ್ದೆವು. ಆ ಕಾಲದ ಪತ್ರಿಕೆಗಳಲ್ಲೂ ಇಂತಹ ರಚನೆಗಳು ಪ್ರಕಟವಾಗುತ್ತಿದ್ದವು.