ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
ಮಧ್ಯಾನ್ಹದ ಊಟ ಮುಗಿಸಿ ಸಹುದ್ಯೋಗಿಗಳೊಂದಿಗೆ ಸೇರಿ ಒಂದು ರೌಂಡ್ಸ್ ಹೋಗೋ ಅಭ್ಯಾಸ ಇದೆ.ನಿನ್ನೆ ಹಾಗೆ ಹೋಗುವಾಗ, ಗೆಳೆಯ ಕಾರ್ತಿಕ್ ಹೇಳಿದ್ರು 'ಬೆಳಿಗ್ಗೆ ಎದ್ದ ತಕ್ಷಣ ನಾನು ರೇಡಿಯೋ ಕೇಳೋ ಅಭ್ಯಾಸ ಮಾಡ್ಕೊಂಡಿದ್ದೀನಿ'. ಓಹೋ,ಇದೇನೋ ಹೊಸ ಅಭ್ಯಾಸ ಅಂತ ಸವಿತ ಕೇಳಿದ್ರು.
ಅದಕ್ಕೆ, ನಾನು ಈಗ ಕೆಲವು FM ಗಳಲ್ಲಿ ಕನ್ನಡ ಹಾಡು ಮಾತ್ರ ಹಾಕ್ತಾ ಇದ್ದಾರೆ ಅಲ್ವಾ ಅಂದೆ, ಅದಕ್ಕೆ ಕಾರ್ತಿಕ್ ಹೌದು ಹೌದು , ಇತ್ತೀಚಿಗೆ ಕನ್ನಡದ ಹಾಡುಗಳು ಚೆನ್ನಾಗಿ ಬರುತ್ತಿವೆ ಅಂದ್ರು!
ನಾನು ಸವಿತ ಇಬ್ಬರು ಒಟ್ಟಿಗೆ "ಅಂದ್ರೆ ಏನಪ್ಪಾ ಮೊದಲೆಲ್ಲ ಚೆನ್ನಗಿರಲಿಲ್ವಾ?" ಅಂದ್ವು.
ಅವರು " ಇಲ್ಲ ಇಲ್ಲ 'ಮುಂಗಾರು ಮಳೆ' ಬಂದ ಮೇಲೆ ಕನ್ನಡದಲ್ಲಿ ಹಾಡುಗಳು ಚೆನ್ನಾಗಿ ಬರ್ತಾ ಇದೆ" ಅನ್ನೋದಾ?
ಅಲ್ಲ ಗುರುವೇ, ನಿನಗೆ ಹಳೆ ಕನ್ನಡ ಚಿತ್ರ ಗೀತೆಗಳ ಬಗ್ಗೆ ಗೊತ್ತಾ? ಕೇಳಿದ್ದಿಯಾ? ಅಂದ್ರೆ,ಪುಣ್ಯಾತ್ಮ ಕಾರ್ತಿಕ್ ಅವರದೇ ಧಾಟಿಯಲ್ಲಿ ಹೇಳುತ್ತಾ ಹೋದರು,
'ಸೋನು ,ಶ್ರೇಯ,ಸುನಿಧಿ,ಗಾಂಜಾವಾಲ' ಎಲ್ಲ ಈಗ ಕನ್ನಡದಲ್ಲಿ ಹಾಡ್ತಾ ಇರೋದ್ರಿಂದ ಕ್ವಾಲಿಟಿ ಚೆನ್ನಾಗಿದೆ.
ಸವಿತ ಏನೇ ಹೇಳಿದರು, ಕಾರ್ತಿಕ್ಗೆ ಅವರು ಹೇಳಿದ್ದೆ ಸರಿ ಅನ್ನುವಂತೆ ಅಸಂಬದ್ಧವಾಗಿ ವಾದ ಮಾಡುತ್ತಲೇ ಹೋದರು. ಅಂದ ಹಾಗೆ ಈ ಕಾರ್ತಿಕ್ ಕನ್ನಡದವರಲ್ಲ, ತೆಲುಗಿನವರು. ಆದ್ರೆ ಕನ್ನಡ ಮಾತನಾಡುತ್ತಾರೆ,ಕನ್ನಡ ಸಿನಿಮಾ ನೋಡ್ತಾರೆ.
ಅವರು ಹೇಳಿದ ಮಾತಿನಿಂದ ನನಗೆ ಎರಡು ವಿಷಯಗಳು ತಲೆಯಲ್ಲಿ ಹರಿಯಲಾರಂಭಿಸಿತು.
೧. ಯಾವುದೇ ವಿಷಯದ ಅರಿವು ಇಲ್ಲದೆ, ಟೀಕೆ- ಟಿಪ್ಪಣಿ ಮಾಡುತ್ತಾ, ಸ್ವಲ್ಪ ಜ್ಞಾನವು ಇಲ್ಲದೆ ತೀರ್ಪನ್ನು ಕೊಟ್ಟು ಬಿಡುವ ಅವಿವೇಕಿಗಳ ಬಗ್ಗೆ.
೨. ಇತ್ತೀಚಿಗೆ ಕನ್ನಡ ಚಿತ್ರಗಳಲ್ಲಿ ಅತಿಯಾಗಿ ಬಾಲಿವುಡ್ನ ಗಾಯಕ ಗಾಯಕಿಯರಿಗೆ ಮಣೆ ಹಾಕಲಾಗುತ್ತಿದೆಯೇ ಎಂಬ ಬಗ್ಗೆ ?
ಆದರೆ, ಇವೆರಡರಲ್ಲಿ ಮೊದಲನೆ ವಿಷಯ ಸ್ವಲ್ಪ ವಿಚಾರ ಮಾಡಬೇಕಾದದ್ದು, ಅದೇನಿದ್ದರೂ ವಿಚಾರವಾದಿಗಳಿಗೆ, ಬುದ್ದಿಜೀವಿ(?)ಗಳಿಗೆ ಇರಲಿ ಅಂತ ಬಿಟ್ಟು,ಎರಡನೇ ವಿಷಯದ ಬಗ್ಗೆ ಬರೆಯುತಿದ್ದೇನೆ.
ಹೌದು, ಇಲ್ಲ ಅಂದ್ರು ಇತ್ತೀಚಿಗೆ ಕನ್ನಡ ಚಿತ್ರಗಳಲ್ಲಿ ಅತಿ ಎನಿಸುವಷ್ಟು ಬಾಲಿವುಡ್ ಗಾಯಕ ಗಾಯಕಿಯರಿಗೆ ಮಣೆ ಹಾಕಲಾಗುತ್ತಿದೆ. ಖಂಡಿತ ಅವರ ಪ್ರತಿಭೆಯ ಬಗ್ಗೆ ಎರಡು ಮಾತಿಲ್ಲ. ಶ್ರೇಯ ಹಾಡುವ ಶೈಲಿ ಇದೆಯಲ್ಲ, ಅವಳು ಒಂದೊಂದೇ ಶಬ್ದವನ್ನು ಅಪ್ಪಟ ಕನ್ನಡತಿಯಂತೆ ಉಚ್ಚಾರಿಸುತ್ತಾಳೆ, ಸೋನು ಹಾಡಿನಲ್ಲೇ ಕಿಕ್ ಬರಿಸುತ್ತಾನೆ ಅವರೆಲ್ಲ ಪ್ರತಿಭಾವಂತರೆ ಆ ಬಗ್ಗೆ ಎರಡು ಮಾತಿಲ್ಲ.
ಕನ್ನಡ ಚಿತ್ರ ರಂಗದಲ್ಲಿ ಇದು ಹೆಚ್ಚಾಗಿ ಆಗುತ್ತಿದೆ, ಹೀಗೆ ಸ್ವಲ್ಪ ದಿನದ ಹಿಂದೆ ಕನ್ನಡ ಗಾಯಕ ಗಾಯಕಿಯರು , ನಿರ್ಮಾಪಕರ ಈ ನೀತಿಯನ್ನು ವೀರೋಧಿಸಿದ್ದರು, ಆಗ ಒಬ್ಬ ಸಂಗೀತ ನಿರ್ದೇಶಕರು 'ಇಲ್ಲಪ್ಪ, ಆಗಕ್ಕಿಲ್ಲ ಆ ಸೋನು , ಶ್ರೇಯ ಇಲ್ಲ ಅಂದ್ರೆ ನಂಗೆ ಮ್ಯೂಸಿಕ್ ಮಾಡಕ್ಕೆ ಆಗಕಿಲ್ಲ" ಅಂದ್ರು ಅಂತ ಪೇಪರ್ನಲ್ಲಿ ಓದಿದ ನೆನಪು. ಪಾಪ :( ಅವರಿಗೆ ಆ ಗಾಯಕರ ಮೇಲೆ ಇರುವಷ್ಟು ನಂಬಿಕೆ ಅವರ ಸಂಗೀತದ ಮೇಲೆ ಇಲ್ಲ ಅನ್ನಿಸುತ್ತೆ!
ಈ ಮಾತು ಹೇಳುವಾಗ ಎಲ್ಲರೂ ಒಂದು ಮಾತು ಹೇಳುತ್ತಾರೆ "ಸಂಗೀತಕ್ಕೆ ಯಾವುದೇ ಭಾಷೆಯಿಲ್ಲ, ಕಲಾವಿದರಿಗೆ ಭಾಷೆಯ ಪರಿಧಿಯಿಲ್ಲ" ಅಂತ, ನಿಜ ನಿಜ ಒಪ್ಪುವಂತದ್ದೆ.
ನಮ್ಮ ನಿರ್ಮಾಪಕರ ತಲೆಯಲ್ಲಿ ಅದ್ಯಾವ ದೈವ ವಾಣಿ ಆಗಿದೆಯೋ ತಿಳಿಯದು, ಬಹಳಷ್ಟು ನಿರ್ಮಾಪಕರಿಗೆ ಸಂದರ್ಶನದಲ್ಲಿ "ಕನ್ನಡ ಗಾಯಕರನ್ನು ಏಕೆ ಬಳಸಿಲ್ಲ?" ಅಂತ ಕೇಳಿದರೆ, "ಬಾಲಿವುಡ್ ಗಾಯಕ/ಗಾಯಕಿಯರ ಹೆಸರಿದ್ದರೆ ಜನ ಹಾಡು ಜಾಸ್ತಿ ಕೇಳ್ತಾರೆ" ಅಂತಾರೆ.
ಅಂದ್ರೆ ಏನರ್ಥ ಸ್ವಾಮಿ ಸಂಗೀತ, ಸಾಹಿತ್ಯ ಹೇಗಿದ್ರು ಪರವಾಗಿಲ್ಲ, ಅವರು ಹಾಡಿಬಿಟ್ಟರೆ ಅದು ಚೆನ್ನಾಗಿ ಆಗುತ್ತೆ ಅಂತಾನಾ? ಅಬ್ಬಾ!
'ಉಪ್ಪಿನಕಾಯಿಯನ್ನು ಊಟದ ಜೊತೆಗೆ ತಿಂದರೆ ಚಂದ, ಆದರೆ ಚೆನ್ನಾಗಿದೆ ಅಂತ, ಉಪ್ಪಿನಕಾಯಿಯನ್ನೇ ಊಟ ಎಂದು ತಿನ್ನಲಾಗುತ್ತದೆಯೇ?'
ನನಗೆ ಅನ್ನಿಸೋದು ಅವರನ್ನು ಬಳಸಿಕೊಳ್ಳೋದು ತಪ್ಪಲ್ಲ, ಆದರೆ ನಮ್ಮಲ್ಲೇ ಪ್ರತಿಭೆಗಳಿರುವಾಗ ಅವರನ್ನು ಸ್ವಲ್ಪ ಕಡಿಮೆಯಾಗಿ, ಬೇಕು ಎನಿಸುವಂತ ಹಾಡುಗಳಿಗೆ ಮಾತ್ರ ಕರೆಸಬಹುದಲ್ವಾ?
ನಿಮಗೆ ಈ ರೀತಿ ಅನ್ನಿಸುವುದಿಲ್ಲವೇ?
-- ರಾಕೇಶ್ ಶೆಟ್ಟಿ :)
Comments
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
In reply to ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ??? by ASHOKKUMAR
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
In reply to ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ??? by Rakesh Shetty

In reply to ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ??? by hamsanandi
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
In reply to ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ??? by vasant.shetty
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
In reply to ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ??? by manjunath s reddy
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
In reply to ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ??? by vasant.shetty
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
In reply to ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ??? by sathvik N V
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
In reply to ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ??? by Rakesh Shetty
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
In reply to ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ??? by sathvik N V
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
In reply to ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ??? by ಶ್ರೀನಿಧಿ
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???
In reply to ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ??? by kalpana
ಉ: ಮುಂಗಾರು ಮಳೆ ಬಂದ ಮೇಲೆ ಕ್ವಾಲಿಟಿ ಬಂತಾ???