ಕವಿತೆ, ಕೆಲವು ಪದಗಳ ಸಾಲೇ
ಸಾಲಿನ ಕೊನೆಯ ಪ್ರಾಸವೇ
ಪ್ರಾಸದೊಳಗಿನ ಭಾವವೇ
ಭಾವದೊಳಗಿನ ಕಲ್ಪನೆಯೇ
ಕಲ್ಪನೆಗೊಂದು ಚಿಂತನೆಯೇ
ಚಿಂತಣದೊಂದಿನ ವಿಷಯವೇ
ವಿಷಯದ ಹಿಂದಿನ ಘಟನೆಯೇ
ಘಟನೆಗೊಂದು ತರ್ಕವೇ
ತರ್ಕಕ್ಕೆ ನಿಲುಕದ ಸತ್ಯವೇ
ಸತ್ಯದೊಳಗಿನ ಸೌಂದರ್ಯವೇ
ಸೌಂದರ್ಯವೆಂಬ ಕನಸೇ
ಕನಸಿಂದ ದೊರೆತ ಸ್ಪೂರ್ತಿಯೇ
ಸ್ಪೂರ್ತಿಯಿಂದ ಹುಟ್ಟಿದ ಶಿಲ್ಪವೇ
ಶಿಲ್ಪವ ವರ್ಣಿಸುವ ಪದಗಳೇ
(ಮತ್ತೆ ಮೊದಲಿನಿಂದ ಓದಿಕೊಳ್ಳಿ :) )
ಬ್ಲಾಗ್ ವರ್ಗಗಳು
ಉ: ಕವಿತೆಯೆಂದರೇನು?