ನೀನು ನಿತ್ಯ ನಿರಂತರ ಅನಂತ. ವಿಶ್ವ ತಾಯಿ ದಿನದ ಸಂದರ್ಭದಲ್ಲಿ ಅಮ್ಮನ ವಿವಿಧ ಮುಖಗಳು. ಮಾನವೀಯ ಸಂಬಂಧಗಳಲ್ಲೇ ಅತ್ಯಂತ ಭಾವುಕ ಬಂಧನವೇ ಅಮ್ಮಾ. ದೇವರ ನಂತರ ಅತಿಹೆಚ್ಚು ತೀವ್ರತೆಗೆ, ಭ್ರಮೆಗಳಿಗೆ ಒಳಗಾದವಳು ಅಮ್ಮಾ. ಅಕ್ಕ, ತಂಗಿ, ಪ್ರೇಯಸಿ, ಹೆಂಡತಿ, ಅತ್ತಿಗೆ, ಮಗಳು ಇತ್ಯಾದಿ ಎಲ್ಲಕ್ಕಿಂತ, ಹೆಚ್ಚಾಗಿ ಗೌರವಿಸಲ್ಪಡುವವಳು ಅಮ್ಮಾ. ಅಮ್ಮಾ ಎಂಬ ಸ್ಥಿತಿಯೇ ಹೆಣ್ಣಿಗೆ ಪವಿತ್ರ, ಪೂಜನೀಯ ಸ್ಥಾನ ಕಲ್ಪಿಸಿದೆ. ತಾಯಿನಾಡು, ತಾಯಿನುಡಿ, ತಾಯಿಯೇ ಮೊದಲ ಗುರು, ತಾಯಿ ಹೃದಯ, ತಾಯಿ ಕರುಳು ಈ ಮಾತುಗಳೇ ಅಮ್ಮನನ್ನು ಆರಾಧನಾ ಭಾವದೊಂದಿಗೆ ದೈವತ್ವಕ್ಕೇರಿಸಿದೆ. ಪತ್ರಿಕೆಗಳು, ಟಿವಿಗಳು, ಸಾಮಾಜಿಕ ಜಾಲತಾಣಗಳು, ಸಾಹಿತ್ಯ, ಸಿನಿಮಾ, ಕಲೆ ಮನರಂಜನೆ ಇತ್ಯಾದಿ ಮಾಧ್ಯಮಗಳಲ್ಲಿ, ಅಮ್ಮನ ಬಗೆಗಿನ ವಿವರಣೆಗಳಲ್ಲಿ, ಪಾತ್ರ ಪೋಷಣೆಯಲ್ಲಿ ಭಾವತೀವ್ರತೆ ಉಕ್ಕಿ ಹರಿಯುತ್ತದೆ.
ಅಮ್ಮ,.... ಜೀವಿಯ ಅಸ್ತಿತ್ವದ ಮೊದಲ ಎಳೆ ಪ್ರಾರಂಭವಾಗುವುದೇ ತಾಯಿ ಹೊಟ್ಟೆಯಲ್ಲಿ - ಗರ್ಭದಲ್ಲಿ. ಮನುಷ್ಯ ಜೀವಿಗಳಲ್ಲಿ ಸರಿಸುಮಾರು 9 ತಿಂಗಳು ಜೀವಕ್ಕೆ ಆಶ್ರಯ ನೀಡುವುದು ತಾಯಿ ಹೊಟ್ಟೆ. ತನ್ನ ಕರುಳ ಬಳ್ಳಿಯ ಮುಖಾಂತರವೇ ನಮ್ಮನ್ನು ಪೋಷಿಸುತ್ತಾಳೆ. ಇದೊಂದು ಪ್ರಕೃತಿಯ ಸಹಜ ಕ್ರಿಯೆ ಮತ್ತು ವಿಸ್ಮಯ. ಇದು ಅಮ್ಮನ ಶ್ರೇಷ್ಠತೆಯನ್ನು ಎತ್ತಿಹಿಡಿಯುತ್ತದೆ.
ನಂತರ ಕರುಳು ಬಳ್ಳಿಯ ಕತ್ತರಿಸುವಿಕೆಯಿಂದ ಹೊರಬರುವ ಮಗು ತಾಯಿಗೆ ತನ್ನದೇ ದೇಹದ ವಿಸ್ತೃತ ಅಂಗ ಮತ್ತು ತನ್ನ ದೀರ್ಘ ನೋವಿನ ಪ್ರತಿಫಲ ಎಂಬಂತೆ ಭಾಸವಾಗುತ್ತದೆ. ಇಲ್ಲಿಂದ ಮುಂದೆ ತಾಯಿ ಮಗುವಿನ ಸಂಬಂಧದ ತೀವ್ರತೆಯ ಪ್ರಕ್ರಿಯೆ ವಾಸ್ತವದ ರೂಪ ಪಡೆಯುತ್ತದೆ. ಹುಟ್ಟಿನಿಂದ ಕೆಲವು ತಿಂಗಳುಗಳವರೆಗೂ ಮಗುವಿಗೆ ತಾಯಿಯಲ್ಲದೆ ಬೇರೆ ಸಂಬಂಧದ ಅರಿವೇ ಇರುವುದಿಲ್ಲ. ಎಲ್ಲಕ್ಕೂ ತಾ…
ಮುಂದೆ ಓದಿ...