ಪುಸ್ತಕ ಪರಿಚಯ

ಲೇಖಕರು: narendra
August 09, 2008
"ಧಾರವಾಡದ ಬೀದಿಯಲ್ಲಿ, ಒಂದು ಕೈಯಲ್ಲಿ ಚೀಲ ಮತ್ತೊಂದು ಕೈಯಲ್ಲಿ ಮಗುವನ್ನು ಹಿಡಿದು, ಗಿರಾಕಿಗಾಗಿ ಕಾಯುತ್ತ ನಿಂತ ದೇವತೆ; ಬದಲಾದ ಆರ್ಥಿಕ ಸ್ಥಿತಿಯಲ್ಲಿ ಬದುಕಿನ ಹೋರಾಟ ನಡೆಸುವ ಕುಟುಂಬ; ದಟ್ಟ ಅಡವಿಯನ್ನು ಬರಿದಾಗಿಸುತ್ತಿರುವ ಲಾರಿಗಳು; ಬಾರ್‌ನಲ್ಲಿ, ಡ್ಯಾನ್ಸ್ ಮಾಡುತ್ತ ಸಹಜ ಬದುಕಿಗೆ ಹಂಬಲಿಸುವ ಹುಡುಗಿಯರು; ಇವರೆಲ್ಲರ ಮಧ್ಯವೇ ಒಂದು ಕೈಯಲ್ಲಿ ತಂಗಿಯನ್ನು, ಮತ್ತೊಂದು ಕೈಯಲ್ಲಿ ತಮ್ಮನನ್ನು ಹಿಡಿದುಕೊಂಡು, ಧೀರೋದಾತ್ತ ಹೆಜ್ಜೆ ಇಟ್ಟು ನಡೆದುಹೋದ ಬಾಲಕ; ಪಕ್ಕದಲ್ಲಿಯೆ…
ಲೇಖಕರು: narendra
July 17, 2008
ರೂಪಕದ ಭಾಷೆಯವರೆಂದೇ ಗುರುತಿಸಲ್ಪಡುವ, ಹಲವಾರು ಹೃದ್ಯ ಕತೆಗಳನ್ನು ಕನ್ನಡಕ್ಕೆ ನೀಡಿರುವ, ಅನನ್ಯ ರೀತಿಯಲ್ಲಿ ಕವಿಭಾವ ಪುನರ್‌ಸೃಷ್ಟಿ ಮಾಡಬಲ್ಲ, ಆಪ್ತ ನುಡಿಚಿತ್ರಗಳ ಕುಶಲ ಕಲೆಗಾರ ಜಯಂತ್ ಕಾಯ್ಕಿಣಿ ಜನ್ಮತಃ ಕವಿ. ಅವರ ಕತೆಗಳೂ, `ಬೊಗಸೆಯಲ್ಲಿ ಮಳೆ'ಯಂಥ ಅಂಕಣಗಳೂ, ಎಲ್ಲವೂ ಈ ಅರ್ಥದಲ್ಲಿ ಕವನಗಳೇ. ಆದಾಗ್ಯೂ, ಜಯಂತ್ ಇವತ್ತಿನ ಕನ್ನಡ ಸಾಹಿತ್ಯ ಪರಿಸರದಲ್ಲಿ ಬಹಳ ಮುಖ್ಯವಾಗುವುದು ಅವರಿಗೆ ಮಾನವೀಯತೆಯಲ್ಲಿ, ಮನುಷ್ಯನ ಹೃದಯವಂತಿಕೆಯಲ್ಲಿ, ಮನುಷ್ಯ ಸಂಬಂಧಗಳಲ್ಲಿ, ಮಾನವ ಪ್ರೀತಿಯಲ್ಲಿ…
ಲೇಖಕರು: narendra
July 13, 2008
ಶ್ರೀನಿವಾಸ ವೈದ್ಯರು ಇವನ್ನೆಲ್ಲ ಕಥಾರೂಪಿ ಹರಟೆ, ಹರಟೆ ರೂಪಿ ವ್ಯಕ್ತಿ ಚಿತ್ರಣ ಅಥವಾ ಶುದ್ಧ ತಲೆಹರಟೆ ರೂಪಿ ಹರಟೆ ಎಂದು ಕರೆದಿದ್ದಾರೆ. ಅಂದರೆ ಎಲ್ಲದರಲ್ಲೂ ಹರಟೆಯ ಅಂಶ ಸ್ವಲ್ಪ ಹೆಚ್ಚೇ ಇದ್ದರೆ ಅದು ದೋಷವಲ್ಲ, ಗುಣ ಎಂದೇ ಪರಿಗಣಿಸುವುದು ಅನಿವಾರ್ಯ. ಆದರೆ ಇಲ್ಲಿ ಬರುವ ಎಲ್ಲ ವ್ಯಕ್ತಿಗಳೂ ಘಟನೆಗಳೂ ಕಾಲ್ಪನಿಕ. ಈ ಸ್ಥೂಲ ಪರಿಚಯದೊಂದಿಗೇ ಇಲ್ಲಿನ ಕತೆಗಳನ್ನು ಪ್ರವೇಶಿಸಿದರೆ ಗುಂಗು ಹತ್ತಿಸುವ ವಿವರಗಳು, ಹೃದಯದ ಭಾವಕ್ಕೆ ಮೆದುಳಿನ ತರ್ಕದ ಸ್ಪರ್ಶ, ಹಾಗೆ ಲಾಜಿಕ್‌ಗೆ ಭಾವದ…
ಲೇಖಕರು: narendra
May 23, 2008
"ಒಂದು ಬದಿ ಸಹ್ಯಾದ್ರಿ, ಒಂದು ಬದಿ ಕಡಲು ನಡು ಮಧ್ಯದಲಿ ಅಡಕೆ ತೆಂಗುಗಳ ಮಡಲು ಸಿರಿಗನ್ನಡದ ಚಪ್ಪರವೆ ನನ್ನ ಜಿಲ್ಲೆ ಇಲ್ಲಿಯೇ ಇನ್ನೊಮ್ಮೆ ಹುಟ್ಟುವೆನು ನಲ್ಲೆ " ದಿನಕರ ದೇಸಾಯಿಯವರ ಈ ಚುಟುಕದಿಂದಲೇ ವಿವೇಕ ತಮ್ಮ ಕಾದಂಬರಿಗೆ ಒಂದು ಬದಿ ಕಡಲು ಎನ್ನುವ ಹೆಸರನ್ನು ಆಯ್ದಿದ್ದಾರೆ. ಒಂದು ಊರು ನಮಗೆ ನಮ್ಮ ಬಾಲ್ಯದಲ್ಲಿ ಕಂಡಂತೆಯೇ ನಮ್ಮ ತಾರುಣ್ಯದಲ್ಲಿ, ಯೌವನದಲ್ಲಿ, ನಡುವಯಸ್ಸಿನಲ್ಲಿ ಮತ್ತು ಮುದಿತನದಲ್ಲಿ ಕಾಣುವುದಿಲ್ಲ. ಊರು ಕಾಲಮಾನಕ್ಕೆ ತಕ್ಕಂತೆ ಬದಲಾಗುವುದು ಸಹಜ ವಿದ್ಯಮಾನವೇ. ಆದರೆ…
ಲೇಖಕರು: narendra
May 20, 2008
ಬಾಳಾಸಾಹೇಬ ಲೋಕಾಪುರ ಅವರು ತಮ್ಮ `ಹುತ್ತ' ಕಾದಂಬರಿಯ ಮೂಲಕ ಬದುಕಿನ ಹಲವು ಮೂಲಭೂತ ಪ್ರಶ್ನೆಗಳಿಗೆ ಮುಖಾಮುಖಿಯಾಗಿದ್ದಾರೆ ಮತ್ತು ತಮ್ಮ ಓದುಗನೂ ಅವುಗಳಿಗೆ ಮುಖಾಮುಖಿಯಾಗುವಂತೆ ಮಾಡಿದ್ದಾರೆ. ತುಂಬ ಪ್ರಾಮಾಣಿಕವಾದ ಬದುಕಿನ ಸತ್ಯದ ಶೋಧ ಇಲ್ಲಿದ್ದು ಕಾದಂಬರಿ ಓದಿನಾಚೆ ಒಂದು ಜಿಜ್ಞಾಸೆಯಾಗಿ ಓದುಗನೊಳಗೆ ಬೆಳೆಯುವ ಕಸು ಹೊಂದಿದೆ. ಅಷ್ಟೇ ಮಹತ್ವದ್ದಾಗಿ ಇದನ್ನು ಸಾಧಿಸುವಾಗ ಅವರು ಕಾದಂಬರಿ ಪ್ರಕಾರದ ಎಲ್ಲ ಅಂಶಗಳಿಗೂ ಸೂಕ್ತ ನ್ಯಾಯ ಸಲ್ಲಿಸಿರುವುದು ಕೂಡ ಗಮನಾರ್ಹವಾಗಿದೆ. ಇಲ್ಲಿನ ಭಾಷೆ…
ಲೇಖಕರು: Shreekant Mishrikoti
May 07, 2008
( ಇಲ್ಲಿ ಬರೆದದ್ದೆಲ್ಲವೂ ನಾನು ಬರೆದಿದ್ದಲ್ಲ ; ನಾನು ಆಯ್ದ ವಾಕ್ಯಗಳೇ ಬಹಳ - ಶ್ರೀಕಾಂತ ಮಿಶ್ರೀಕೋಟಿ) ಪ್ರಸಿದ್ಧ ತತ್ವಶಾಸ್ತ್ರಜ್ಞ , ಚಿಂತಕ, ಕಾದಂಬರಿಕಾರನ ಪ್ರಸಿದ್ಧ ಕೃತಿ ’ಲೆಮೊ’ ದ ಅನುವಾದವೇ ’ಪದಚರಿತ’ . ಇದು ಅವನ ಬಾಲ್ಯದ ’ಆತ್ಮಚರಿತ್ರೆ’ ; ಅವನನ್ನು ಕಾಡಿದ ಬರೆದಿಟ್ಟ ಶಬ್ದಗಳ ಜತೆ ನಡೆಸಿದ ಒಂದು ಸುದೀರ್ಘ ಪ್ರಣಯ ಪ್ರಸಂಗ. ಈ ಪುಸ್ತಕ ಜೀವನಾನುಭವದ ಸಂದರ್ಭದಲ್ಲಿ ಪುಸ್ತಕಗಳ ಮತ್ತು ಭಾಷೆಯ ಉಪಯುಕ್ತತೆ ಮತ್ತು ಉಪಯೋಗದ ಬಗ್ಗೆ ನಡೆಸಿರುವ ವಿಶಿಷ್ಟ ಸಂಶೋಧನೆ ಮತ್ತು…