ಹಿತನುಡಿ
ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವ ತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.