ಹಬ್ಬದ ದಿನವೂ ಹಳೇ ಗಂಡನೇ ?

ಹಬ್ಬದ ದಿನವೂ ಹಳೇ ಗಂಡನೇ ?

ಬರಹ

ಕಾಸಿಗೆ ತಕ್ಕ ಕಜ್ಜಾಯ
ಹೆತ್ತೋರ್ಗೆ ಹೆಗ್ಗಣ ಮುದ್ದು, ಕಟ್ಗೊಂಡೋರ್ಗೆ ಕೋಡಂಗಿ ಮುದ್ದು
ಅಡುಗೆ ಮಾಡಿದವಳಿಗಿಂತ ಬಡಿಸಿದವಳೆ ಮೇಲು
ಕೋಣೆಯ ಕೂಸು ಕೊಳೆಯಿತು; ಓಣಿಯ ಕೂಸು ಬೆಳೆಯಿತು
ಕೂರೆಗೆ ಹೆದರಿ ಸಂತೆಯಲ್ಲಿ ಸೀರೆ ಬಿಚ್ಚಿದರಂತೆ
ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ
ಕೋಪದಲ್ಲಿ ಕೊಯ್ದ ಮೂಗು ಶಾಂತವಾದ ಮೇಲೆ ಬರುತ್ತದೆಯೆ ?
ಕದ ತಿನ್ನೋವನಿಗೆ ಹಪ್ಪಳ ಈಡಲ್ಲ
ಕಣ್ಣರಿಯದಿದ್ದರೂ ಕರುಳರಿಯುತ್ತದೆ
ಹಳೇ ಚಪ್ಪಲಿ, ಹೊಸಾ ಹೆಂಡತಿ ಕಚ್ಚುಲ್ಲ
ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೇ ಮೇಲೆ ಬಿತ್ತು
ಮದುವೆಯಾಗೋ ಗುಂಡ ಅಂದರೆ ನೀನೇ ನನ್ನ ಹೆಂಡತಿಯಾಗು ಅಂದ ಹಾಗೆ
ಲೇ ! ಅನ್ನೋಕೆ ಅವಳೇ ಇಲ್ಲ; ಮಗನ ಹೆಸರು ಅನಂತಯ್ಯ
ಹಬ್ಬದ ದಿನವೂ ಹಳೇ ಗಂಡನೇ ?
ಶೆಟ್ಟಿ ಶೃಂಗಾರ ಆಗೋದ್ರಲ್ಲಿ ಪಟ್ಣ ಕೆಡ್ತು