ಒಂದಿಷ್ಟು ಗಾದೆಗಳು

ಒಂದಿಷ್ಟು ಗಾದೆಗಳು

ಬರಹ

ಹುಳಿ ಮುಟ್ಟಿ ಕಿಲುಬು ಕೆಟ್ಟಿತು

ಮಾತಿಗೆ ಮಾತನ್ನೇ ಅಣಿ ಮಾಡಿ ಹೋವಾತನೇ ಜಾಣ

ಹೆಣ್ಣು ಅತ್ತರೆ ಕಣ್ಣೀರು ಮೃತ್ಯು

ಬಟ್ಟಾಣಿ ಮೊಕದವಳ ನೋಟ ಚೆನ್ನ, ಕಟ್ಟಾಣಿ ಬೊಂಬೆಯ ಕೂಟ ಚೆನ್ನ

ಹೆಣ್ಣಿನ ನಗೆ ನುಡಿ ಲೇಸು

ಗರಗಸದ ಬಾಯಿಗೆ ಮರ ಬಿದ್ದ ಹಾಗೆ

ವಿಧಿಯಿಂದ ಬಲ್ಲಿದರಿಲ್ಲ

ಮನ್ನಣೆ ಕರಗಿದ ಠಾವಿಂದ ಹಿಂದಕ್ಕೆ ಜರುಗು

ಜಾವಕ್ಕೆ ಬದುಕಿದರು ಹೇವಕ್ಕೆ ಬದುಕಬೇಕು

ಬತ್ತಿದ ಕೆರೆಗೆ ಗಿಳಿ ಹೋಗಿ ನೀರಡಿಸಿ/ಬಾಯಾರಿ ಸತ್ತು ಹೋಯಿತು

ಹಮ್ಮಿಂದ ನುಡಿವ ಹೆಣ್ಣಿಗಿಂತ ಹೆಮ್ಮಾರಿ ಲೇಸು

ಮುಟ್ಟಿದಂತಿರಬೇಕು ಮುಟ್ಟದಿರಬೇಕು

ಬಾಳುಬಂದಲ್ಲಿ ಕೊಬ್ಬಿಹೋದ

ಮುರಿದ ಕೆಲಸದ ಬೆಸುಗೆಗೆ ನುರಿತವರು ಬೇಕು

ಮುರಿದ ಹೊನ್ನ ಬೆಸುಗೆಗೆ ಕಿರಿದೊಂದು ರಸ ಬೇಕು

ಸಮತೆ ತೊಟ್ಟು(=ಧರಿಸಿ) ಪದವಿ ಮುಟ್ಟು

ಇದ್ದೂ ಉಣ್ಣದವನ ಬಾಯಲ್ಲಿ ಕಡೆಗೆ ಮಣ್ಣು ಬಿತ್ತು

ಇದ್ದ ಕಾಲದಲ್ಲಿ ಅಟ್ಟುಣ್ಣ ಬೇಕು

ಸುಳ್ಳನ ಮಾತು ಕೆಸರೊಳಗೆ ಮುಳ್ಳು ತುಳಿದಂತೆ

ಭಂಗಿ ರಸ ನೆತ್ತಿಗೇರಿ ಬಿಂಗಿಯಂತೆ ಆಡಿದ

ಊಡದ ಆವಿಗೆ ಉಣ್ಣದ ಕರುವ ಬಿಟ್ಟಂತೆ

ದೈವದ ಸೊಲ್ಲು ಹರಟುವಾತ ಭವದೊಳಗೆ ತೇಲಾಡುತಿದ್ದ

ಉರವಣಿಸಿ ಬರೋ ದುಃಖಕ್ಕೆ ಪರಿಣಾಮ ವೈರಿ

ಮಾತಿಗೊಂದು ಮಾತು ಬಂತು ವಿಧಿ ಬಂದು ಆತುಕೊಣ್ತು

ಮಾತಿಂದಲೇ ನಗೆನುಡಿ ಮಾತಿಂದಲೇ ಹಗೆಕೊಲೆ

ಮಾತಿಂದಲೇ ಉಪಚಾರ ಮಾತಿಂದಲೇ ಅಪಚಾರ

ಬನ್ನ ಪಟ್ಟುಣ್ಣೋ ಬಿಸಿ ಅನ್ನಕ್ಕಿಂತ ತಂಗುಳೇ ಲೇಸು

ತನ್ನ ತಾ ತಿಳಿದು ತಾನು ತಾನಾದುದೆ ಉನ್ನತಿ

ಬಸುರಲ್ಲಿ ಬಂದ ಕೂಸು ಮುದ್ದು

ಕೊಂಡು ಕೊಟ್ಟದ್ದೂ ಇಲ್ಲ ಹಂಚಿ ಉಂಡದ್ದೂ ಇಲ್ಲ ಸ್ವರ್ಗ ಬೇಕು ಅಂದ

ಬಚ್ಚಿಟ್ಟ ಆಸ್ತಿ ಹೊಂಚುತ್ತಿದ್ದವರ ಪಾಲಾಯ್ತು

ನಿದ್ದೆ ಗೈಯೋನ ಹೊತ್ತು ನುಂಗ್ತು

ಬಡವರ ಮಾತು ನುಡಿನುಡಿಗೂ ಬೇಸರ

ಅಂಬಲಿಗೆ ಗತಿಇಲ್ಲದವ ಕಟ್ಟಾಣಿ ರಂಬೆಯ ಬಯಸಿದ

ಸೊಕ್ಕುವುದು ಕೆಕ್ಕರಿಸಿ ನೋಡುವುದು ಸೇರಕ್ಕಿಯ ಗುಣ

ರಸವಳ್ಳಿ ಹೆಣ್ಣಿಗೆ ರಸಪೂರಿ ಹಣ್ಣಿಗೆ ಮನ ಸೋಲದವರಿಲ್ಲ

ಕುಲಗೇಡಿ ಮಗ ಹುಟ್ಟಿ ಕುಲಕ್ಕೇ ಮಸಿ ಬಳಿದ

ಹೊತ್ತು ಮೀರಿದ ಮಾತು ತನಗೇ ಕುತ್ತು ತಂತು

ಇದ್ದುದ ಉಣ್ಣದವನ ಬಾಯಾಗೆ ಕಡೆಗೆ ಮಣ್ಣು ಬಿತ್ತು

ಪರರ ಹಂಗಿಸಿ ಮಂಗ ಅನಿಸಿಕೊಂಡ

ಹೆಣ್ಣಿಂದ ರಾವಣ ಕೆಟ್ಟ ಮಣ್ಣಿಂದ ಕೌರವ ಕೆಟ್ಟ

ಭೋಗಿ ಭೋಗದಲ್ಲಿ ನೆರೆದು ರೋಗಿಯಾದ, ಯೋಗಿ ಯೋಗದಲ್ಲಿ ನೆರೆದು ಯೋಗವಾದ

ರೀತಿಯಲ್ಲದ ಮಾತು ತಲೆ ಬೇನೆ

ಇಲ್ಲದ ಕಾಲಕ್ಕೆ ಕಲ್ಲೆದೆ ಬೇಕು

ಅಕ್ಕಸಾಲಿಗನ ಮಗ ಚಿಮ್ಮಟ ಹಿಡಿಯುತ್ತಲೇ ಹೊನ್ನ ಕದ್ದ

ಸಿದ್ದಿಗಿಂತ ಬಲವಿಲ್ಲ ಬುದ್ಧಿಗಿಂತ ಹಿರಿದಿಲ್ಲ

ಮೋಕ್ಷಕ್ಕೆ ಗ್ನಾನ ಬೇಕು ಯೋಗಕ್ಕೆ ಧ್ಯಾನ ಬೇಕು

ಅರುಗೆಟ್ಟ ನಿದ್ದೆ (=ಅರಿವಿಲ್ಲದೆ ಮಲಗಿರುವುದು) ಇರಗೆಟ್ಟು (=ಇರವು ಗೆಟ್ಟು) ಸತ್ತಂತೆ

ಮದ್ದು ಬುದ್ಧಿ ದೈವ ಒಲ್ಲದೆ ತಿದ್ದವು

ಮಂತ್ರ ತಂತ್ರ ದೈವ ಒಲ್ಲದೆ ತನಗೆ ಸ್ವಂತವಲ್ಲ

ದೈವ ಒಲ್ಲದೆ ಆಗೋದಿಲ್ಲ ದೈವ ಒಲಿದರೆ ಹೋಗೋದಿಲ್ಲ

ಓದಿದ ಓದೆಲ್ಲ ಮೇದ ಕಬ್ಬಿನ ಹಿಪ್ಪೆ, ಓದಿದರ ಅರಿವು ಮೇದ ಕಬ್ಬಿನ ರಸ

ವಿದ್ಯೆ ಇಲ್ಲದವನ ಮೊರೆ ಹಾಳೂರ ಹದ್ದಿನಂತೆ

ವಿದ್ಯೆ ಬಲ್ಲವ ಇದ್ದಲ್ಲು ಸಲ್ಲುವ ಹೋಗಿದ್ದಲ್ಲು ಸಲ್ಲುವ

ವಿದ್ಯೆ ಬಲ್ಲವ ಎಲ್ಲಿದ್ದರು ಸಲ್ಲುವ

ಕುಚುಕು ಬುದ್ಧಿ ಹೊಕ್ಕವನು ಕೆಟ್ಟ

ಒಪ್ಪವಿಲ್ಲದವಳ ನಗೆ ನುಡಿ ನೋಟ ಎಂದೂ ಸಪ್ಪಗೆ

ಒಂದೊಂದು ಕಾಲಕ್ಕೆ ಒಂದೊಂದು ಪರಿ

ಸಿರಿತನ ಇರೂತನ ಹಿರಿತನ ಸಿರಿಹೋದ ಮರುದಿನ ಕಿರಿತನ

ಸಿರಿತನ ಇರೂತನ ಪಿರಿಪಿರಿ ಸಿರಿಹೋದ ಮರುದಿನ ಕಿರಿಕಿರಿ

ಸಿರಿತನ ಇರೂತನ ಹಿರಿತನ ಘನ

ಸಿರಿಯಣ್ಣ ಉಳ್ಳನಕ ಹಿರಿಯಣ್ಣ ಇಲ್ಲಾದಗ ನಡಿಯಣ್ಣ

ಎಂಟು ಹೊನ್ನು ಘನವಾದ ನಂಟು ತಂತು

ಕೂಟಸ್ಥ ಇಲ್ದೋನ ಓದು ಗಿಳಿ ಕಲ್ತ ಪಾಠದಂತೆ

ಒಳ್ಳೇ ರಸವಳ್ಳಿ ಕಳ್ಳೀಗಿಡವನ್ನ ಹಬ್ಬಿತು

ರಸವಳ್ಳಿ ಹೆಣ್ಣು ಒಲಿವಂತೆ ಮಾಡುವುದು ಎಳ್ಳ ತಿಂದ ಋಣ

ತೋಟದ ಕಬ್ಬಿಗಿಂತ, ಪೋಟೆಯ ಜೇನಿಗಿಂತ, ಬಲ್ಲವಳ ಕೂಟ ಲೇಸು

ಕಾಡಿಗೆ ಗಣ್ಣ ಚೆಲುವೆ ಮನೆಗೆ ಕೇಡು ತಂದಳು

ತೋಟದ ಬೇಲಿಯನ್ನು ದಾಟಿ ನೋಡದವರಾರು

ರಂಭೆಯಂಥ ಹೆಣ್ತೀನ ಬಿಟ್ಟು ದೊಂಬಿತಿಯ ಹಿಂದೆ ಹೋದ

ಕಣ್ಣಿಗೆ ಒಪ್ಪವಿಲ್ಲದ ಹೆಣ್ಣು ಸಪ್ಪಗೆ ಕಂಡಳು

ಮಲ್ಲಿಗೆ ವನದಲ್ಲಿ ತುರುಬಿಲ್ಲದಾಕೆ ಸುಳಿದಂತೆ

ಬಂಡಾಟದ ನಡೆ ಚೆಂದ ಮಿಂಡಾಟದ ನುಡಿ ಚೆಂದ

ಆರಿದೋಗರಕ್ಕೆ ಮೊಸರಿಕ್ಕಿ ಕಾಗೆಗೆ ಸೂರೆಕೊಟ್ಟರು

ದೀಪಕ್ಕೆ ಎಣ್ಣೆಯ ಹುಯ್ಯ್ ಅಂತ ಸುರಿಯುತ್ತಾರೇ

ಹುಯ್ಯಂತ ಕೊಡ ಬೇಡ ಸುಮ್ಮನೆ ಕೂರಲು ಬೇಡ

ಬಂದರು ಬಾ ಅನ್ನದ ದರ್ಪಕುರುಡರ ಸಾವಸವೇ ಬೇಡ

ಮುತ್ತು ಚಿಪ್ಪಲ್ಲಿ ಹುಟ್ಟಿ ಮುಕುಟದ ಮಣಿಯಾಯ್ತು

ನೆರೆದ ಸಿರಿ ಜಾವಕ್ಕೆ ಹರಿದು ಹೋಯಿತು

ಹೊನ್ನಿನ ಶೃತಿ ಕೇಳಿ ಎಂಥೆಂಥಾವರೆಲ್ಲ ಭ್ರಮೆಗೆ ಬಿದ್ದರು

ಬರಿಗೆಟ್ಟ ಬದುಕಿಗಿಂತ ಕೊಂದು ತಿನ್ನೊ ಮಾರಿ ಲೇಸು

ಯೋಗಿಗೆ ರಾಗ ಇರಬಾರದು ಭೋಗಿಗೆ ರೋಗ ಇರಬಾರದು

ಮನಸ್ಸಿಲ್ಲದವಳ ಒಡನಾಟ ಮಾತುಮಾತಿಗು ಬೇಸರ

ಲಲನೆಯರ ಒಲುಮೆ ತೊಲಗಿದರೆ ಇಲ್ಲ

ಇಂಬರಿತು ಕೊಡುವಳೆ ರಂಭೆ

ಕಯ್ಯಾರೆ ಮಾಡುವ ಧರ್ಮ ಲೇಸು

ಹೃದಯಶೂನ್ಯರ ಒಲವಿಗಿಂತ ಬಲ್ಲವರ ಕದನವೇ ಲೇಸು

ಕುಚ ಹೇಮ ಶಸ್ತ್ರ ಸೋಂಕಿದಾಗ ಶುಚಿ ವೀರ ಧೀರರು ಅಚಲಿತರಾದರು

ಒಳ್ಳೇರ ಒಡನಿದ್ದು ಕಳ್ಳ ಒಳ್ಳೇನಾದ

ಅನುಭವಿಗೆ ಬೇರೆ ಮತವಿಲ್ಲ

ಸಿರಿ ಸೋಂಕಿದವರ ಪರಿ ಬೇರೆ

ಮಾಡಿದ ಕರ್ಮ ಬೆನ್ನಾಡಿ ಬಂತು

ಸೊಲ್ಲಿನ ಬೇದ ತಿಳಿದ ಕಿರಿಯ ಎಲ್ಲರಿಗೂ ಹಿರಿಯ

ಮೊಸರ ಕಡೆದರೆ ಬೆಣ್ಣೆ ಒಸೆದು ಬಂತು

ತನ್ನ ತಾನರಿತವಗೇ ತ್ರಿಭುವನ ತನ್ನೊಳಗೆ ಕಂಡಿತ್ತು

ದೈವ ಅನ್ನೋದ ಮತ್ತೆಲ್ಲೂ ನೊಡದೆ ತಾನಿದ್ದ ಒತ್ತಿಲೇ ನೋಡು

ಪೆದ್ದ ಮರದ ತುದಿಯೇರಿ ಅಣಿತಪ್ಪಿ ಬಿದ್ದು ಸತ್ತ

ಬಹುಮನದ ಹಾದಿ ಕೈಗೊಂಡರೆ ಸುಖವಿಲ್ಲ

ಪಾತ್ರವರಿತು ಜಗದ ಜಾತ್ರೆಗೆ ಸಲ್ಲಬೇಕು

ಪುಣ್ಯ ಉಂಡು (=ಸುಖ ಅನುಭೋಗಿಸಿ) ತೀರಿತು, ಪಾಪ ತಿಂದು (=ಕಷ್ಟ ಅನುಭವಿಸಿ) ತೀರಿತು

ಜಪ-ತಪ ಉಪವಾಸ ಇದ್ದರೆ ಅಂತಕನ ವಿಪರೀತ ತಪ್ಪೀತೆ

ಪ್ರಾರಬ್ಧ ಬಂದ ಕಾಲಕ್ಕೆ ಒಂದಲ್ಲ ಒಂದು ಕೇಡು

ಆಗ ಬಾ ಈಗ ಬಾ ಹೋಗಿ ಬಾ ಅನ್ನದೆ ಕೊಡುವ ತ್ಯಾಗವಾಗು

ಕೊಡದ ಲೋಭಿ ಮಾತು ಕೊಡಲಿ ಪೆಟ್ಟು

ಮಾಡುವವ ಉತ್ತಮ ಆಡಿ ಮಾಡದವ ಅಧಮ

ನೀಡುವವ ಉತ್ತಮ ಬೇಡಿದರೂ ನೀಡದವ ಅಧಮ

ಏನಾದರೇನು ತಾನು ತಾನಾಗದ ವರೆಗೆ

ಕೊಲ್ಲದಿರುವುದೇ ಧರ್ಮ ಬಲ್ಲವರಿಗೆ ಅದೇ ಸಮ್ಮತ

ಧರ್ಮದ ಹಾದಿ ತಿಳಿದವನಿಗೆ ಓದು ವಾದಗಳೇಕೆ

ನಿಷ್ಠೆ ಇಲ್ಲದವನಿಗೆ ದೈವ ಬಟ್ಟಬಯಲು

ಕಂಡವರ ಕಂಡು ಕೈಕೊಂಡ ಧರ್ಮ ದಂಗು ಬಡಿಸಿತು

ಕಂಡವರ ಕಂಡು ಕೈಕೊಂಡ ಕೆಲಸ ಕೆಂಡವಾಯ್ತು

ನಿಷ್ಠೆ ಇದ್ದಲ್ಲಿ ದೈವ ಕಲ್ಲುಗುಂಡೊಳಗೆ ಅಡಗಿತ್ತು

ಭಕ್ತಿ ಉಳ್ಳಾತಗೆ ಮುಕ್ತಿ ,ಶಕ್ತಿ ಉಳ್ಳಾತಗೆ ಭುಕ್ತಿ

ಅರಿತು ಮಾಡದ ದಾನ ತೆರೆದು ನೋಡದ ಕಣ್ಣಂತೆ

ಕಾಯ ಕಮಲವೇ ಸೆಜ್ಜೆ ಜೀವ ರತುನವೇ ಜ್ಯೋತಿ

ಜ್ಯೋತಿಯ ನೆಲೆ ಅರಿತವನೇ ಯೋಗಿ

ವಿಧಿ ಕಾಣದ ಎಡೆಗಳಿಲ್ಲ

ದಾರವಿದ್ದರೆ ಮುತ್ತು ಹಾರವೆಂದನಿಸಿತ್ತು

ಆಳಿದ ದೊರೆ ಹುಸಿದರೆ ಅಲ್ಲಿಂದ ಹೇಳದೆ ಹೋಗಬೇಕು

ಬಲ್ಲಿದರೊಡನೆ ಸೆಣಸಿ ಮಾತಾಡಿದರೆ ಅಲ್ಲೇ ಬಂತು ಕೇಡು

ಮಂತ್ರಿಇಲ್ಲದ ರಾಜ್ಯ ಕೀಲು ಮುರಿದ ಯಂತ್ರದಂತೆ