ಮತ್ತಷ್ಟು ಗಾದೆಗಳು - ೩
ಬರಹ
೧. ಊರಿಗೆ ಬಂದವಳು ನೀರಿಗೆ ಬರದೆ ಇರುತ್ತಾಳೆಯೆ?
೨. ಮನೆಗೆ ಮಾರಿ ಊರಿಗೆ ಉಪಕಾರಿ.
೩. ಯಾರದೊ ದುಡ್ಡು ಎಲ್ಲಮ್ಮನ ಜಾತ್ರೆ.
೪. ಓಡ್ಹೋಗುವನ ಚಡ್ಡಿ ಹರಕಂಡಷ್ಟೆ ಲಾಭ.
೫. ಬರಗಾಲದಲ್ಲಿ ಅಧಿಕಮಾಸ ಬಂದ ಹಾಗೆ.
೬. ತಾನೂ ತಿನ್ನ, ಪರರಿಗೂ ಕೊಡ.
೭. ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು.
೮. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
೯. ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿದ.
೧೦. ಅಕ್ಕಿ ಮೇಲೆ ಆಸೆ, ನೆಂಟರ ಮೇಲೆ ಪ್ರೀತಿ.