ಇದು ನಿಜವೇನೇ? ಗೆಳತಿ, ಇದು ನಿಜವೇನೇ?

ಇದು ನಿಜವೇನೇ? ಗೆಳತಿ, ಇದು ನಿಜವೇನೇ?

ಬರಹ

ಪ್ರೇಮಿಗಳ ದಿನದ ಸಲುವಾಗಿ ಬರೆದಿದ್ದು..ನನ್ನ ಲೇಖನದೊಳಗೆ ಸೇರಿಸಿದ್ದರಿಂದ ಸಮಸ್ತ ಓದುಗ ವೃಂದಕ್ಕೆ ತಲುಪಿರಲ್ಲಿಲ್ಲ ಎನ್ನುವುದು ನನ್ನ ಭಾವನೆ. ಅದಕ್ಕೊಸ್ಕರ ಮತೊಮ್ಮೆ ಈ ಕವನವನ್ನು ನಿಮ್ಮ ಮುಂದೆ ಇರಿಸಿದ್ದೇನೆ.

ಇದು ನಿಜವೇನೇ? ಗೆಳತಿ, ಇದು ನಿಜವೇನೇ?
ಇದು ನಿಜವೇನೇ? ಗೆಳತಿ, ಇದು ನಿಜವೇನೇ?
ಆ ಹಾಲು ಬೆಳದಿಂಗಳ ಚಂದಿರ│ ಅವನಿದ್ದರೂ ಅಷ್ಟು ಸುಂದರ│
ಆಗಲು ನಿನ್ನಯ ಚಲುವಿನಲಿ ಪಾಲುಗಾರ│ ತೋರಿಹನಂತೆ ಬಲು ಕಾತರ?
ಇದು ನಿಜವೇನೇ? ಗೆಳತಿ, ಇದು ನಿಜವೇನೇ?

ಹೊನ್ನಕಾಂತಿ ತುಂಬಿಕೊಂಡ ಆ ನೇಸರ│
ಕಂಡು ನಿನ್ನ ಕಣ್ಣಕಾಂತಿ ತಾಳಿಹನಂತೆ ಬೇಸರ│
ನಿನ್ನ ಭೇಟಿಗೊಮ್ಮೆ ತೋರಿಹನಂತೆ ಬಲು ಆತುರ?
ಇದು ನಿಜವೇನೇ? ಗೆಳತಿ, ಇದು ನಿಜವೇನೇ?

ನಿನ್ನ ಮುದ್ದುನಗು│ ಕಂಡ ಮುಗ್ದ ಮಗು│
ಮಾಡಿವುದಂತೆ ಹಠ│ ನಿನ್ನ ಜೊತೆಯಲಿ ಆಡಬೇಕೆಂದು ಆಟ!
ಇದು ನಿಜವೇನೇ? ಗೆಳತಿ, ಇದು ನಿಜವೇನೇ?

ಇರಲಿ ಇರಲಿ ಗೆಳತಿ, ಹೀಗೆ ಇರಲಿ ಇರಲಿ
ನಿನ್ನ ಚಲುವಿನಲಿ ಕಾಂತಿ│ ನಿನ್ನ ನಯನದಲೂ ಕಾಂತಿ │
ನಿನ್ನ ನಗುವಿನಲಿ ಸ್ಫೂರ್ತಿ│ ನಿನ್ನ ಬದುಕಲಿ ಕೀರ್ತಿ│
ಆದರೆ ನಿನ್ನಲಿ ನಾ ಇಟ್ಟಿರುವ ಪ್ರೀತಿ│ ಎಂದೂ ಆಗದಿರಲಿ ಒಂದು ಭ್ರಾಂತಿ!
-ಸುನಿಲ್ ಮಲ್ಲೇನಹಳ್ಳಿ