ಸುನಾಮಿಗೆ ೫ ವರ್ಷ

ಸುನಾಮಿಗೆ ೫ ವರ್ಷ

ಸುನಾಮಿ
ನೀ ಪ್ರಕೃತಿಯಲ್ಲಿರುವ ಮಾಯೆ
ಬಂದು, ಇಂದಿಗೂ ಉಳಿಸಿರುವೆ ನಿನ್ನ ಕರಾಳ ಛಾಯೆ |

ಬಂದೆ ನೀ ಡಿಸೆಂಬರ್ ಇಪ್ಪತ್ತಾರರಂದು
ರಜಾದಿನವಾದ್ದರಿಂದ ಇದ್ದರು ಬಹಳ ಜನ ಬಂದರಿನಲ್ಲಿ ಅಂದು |

ನೀ ಬಂದೆ ಕೊಡದೆ ಯಾವುದೇ ಮುನ್ಸೂಚನೆ
ಇರಲಿಲ್ಲ ಒಂದು ಕ್ಷಣವೂ ಜನರಿಗೆ ಮಾಡಲು ಯೋಚನೆ |

ಸುನಾಮಿ - ಹೆಸರೇ ಹೇಳುವಂತೆ ನೀ ಬಂದರಿನ ಅಲೆ
ಆದ್ದರಿಂದ ಬೀಸಿದೆಯೇನು ಬಂದರಿನಲ್ಲಿದ್ದವರಿಗೆಲ್ಲಾ ಮರಣದ ಬಲೆ?

ನೀ ಕೊಂದೆ ಹಲವರ ಪ್ರೀತಿಪಾತ್ರರನ್ನು
ಅವರು ಶಪಿಸುತ್ತಿದ್ದಾರೆ ಇಂದಿಗೂ ನಿನ್ನನ್ನು |

ದುರ್ಜನರು ಹೆಚ್ಚಾದಾಗ ಪ್ರಕೃತಿವಿಕೋಪ ಎನ್ನುತ್ತೆ ಸಿದ್ಧಾಂತ
ಆದರೆ ತುಸು ಹೆಚ್ಚೇ ಆಯಿತು ನೀನು ಸೃಷ್ಟಿಸಿದ ರಾದ್ಧಾಂತ |

ಪಾಪ! ಏನೂ ಮಾಡದ ಮುಗ್ಧ ಮಕ್ಕಳು ಸತ್ತರು
ಇನ್ನೂ ಕೆಲವು ಮಕ್ಕಳು ಅನಾಥರಾಗಿ ಅತ್ತರು

ಸುನಾಮಿ- ನಿನಗೆ ಸಿಕ್ಕ ಸಂತೋಷವಾದರೂ ಏನು?
ಜನರ ಸಾವು ನೋವು ದುಃಖಗಳೇನು?

ಹಿಂಸಿಸಬೇಡ ನಮ್ಮನ್ನು ಈ ರೀತಿ ತ್ರಾಸ ಕೊಟ್ಟು
ಪ್ರಾರ್ಥಿಸುವೆ ನಿನ್ನನ್ನು ಮತ್ತೆ ಬರಬೇಡ ದಯವಿಟ್ಟು

ಸುನಾಮಿ ಅಲೆ ಭಾರತದ ಸಮುದ್ರ ಕಿನಾರೆಗಳಿಗೆ ಬಡಿದು ಈ ಶನಿವಾರಕ್ಕೆ ೫ ವರ್ಷ.ಆಗ (೫ ವರ್ಷಗಳ ಹಿಂದೆ) ಒಂದು ಪುಸ್ತಕದಲ್ಲಿ ಸುನಾಮಿ ಬಗ್ಗೆ ನಾನು  ಬರೆದಿದ್ದ ಕೆಲವು ಸಾಲುಗಳು ಇತ್ತೀಚೆಗೆ ನನಗೆ ಮತ್ತೆ ಸಿಕ್ಕವು. ಆ ಪುಸ್ತಕದಲ್ಲಿ ನಾನು ನಮೂದಿಸಿರುವಂತೆ ನಾನಿದನ್ನು ಬರೆದಿದ್ದುದು ೧೮/೧/೦೫ ರಂದು. ಅಂದು ಅಪ್ಪನ ಸ್ನೇಹಿತರೊಬ್ಬರು ಮನೆಗೆ ಬಂದು ಸುನಾಮಿಯಲ್ಲಿ ಕಾಣೆಯಾದ ತಮ್ಮ ಮಗನ ವಿಚಾರ ಹೇಳುತ್ತಿದ್ದುದನ್ನು ಕೇಳಿ ಬರೆದಿದ್ದು ಇದು...ಈಗ ಓದಿದ್ರೆ ಕೆಲವು ಕಡೆ ಸ್ವಲ್ಪ ಬದಲಾವಣೆಯ ಅಗತ್ಯ ಇದೆ ಅನಿಸುತ್ತೆ. ಆದ್ರೆ ಇದು ನಾನು ನನ್ನ ಆಲೋಚನೆಗಳನ್ನು ಅಕ್ಷರ ರೂಪದಲ್ಲಿ ದಾಖಲಿಸಲು ಮಾಡಿದ ಮೊದಲ ಪ್ರಯತ್ನಗಳಲ್ಲೊಂದು. ಬದಲಾಯಿಸಲು ಮನಸ್ಸಾಗಲಿಲ್ಲ. ಆಗ ಬರೆದಿದ್ದಂತೆಯೇ ಇಲ್ಲಿ ಬರೆದಿದ್ದೇನೆ.

Rating
No votes yet

Comments