"ಬೌದ್ಧಿಕ ಭಯೋತ್ಪಾದಕರು"

"ಬೌದ್ಧಿಕ ಭಯೋತ್ಪಾದಕರು"

A book must be the ax for the frozen sea within us.
  —
Franz Kafka


 "ನಮ್ಮ ಅಂತರಾಳದಲ್ಲಿ ಹೆಪ್ಪುಗಟ್ಟಿದ ಸಮುದ್ರವನ್ನು ಒಡೆಯಲು ಕೊಡಲಿಯಾಗಬೇಕು ಗ್ರಂಥಗಳು".  ಎಷ್ಟು ಅರ್ಥಗರ್ಭಿತ ಈ ಮಾತುಗಳು. ಆದರೆ ನಾವು ಇಂದು ಕಾಣುತ್ತಿರುವ ಸಾಹಿತ್ಯ ನೋಡಿದರೆ ಅಂತರಾಳವನ್ನು ನರಕವಾಗಿಸುವುದರಲ್ಲಿ ಪುಸ್ತಕಗಳು ನಾಮುಂದು ತಾಮುಂದು ಎಂದು ಬರುತ್ತಿವೆ. ಧ್ವೇಷ ಕಾರುವ, ಜನರಲ್ಲಿ ವೈಮನಸ್ಸನ್ನು ಹುಟ್ಟಿಸುವ ಕೃತಿಗಳನ್ನು ರಚಿಸಿ ಭೇಷ್ ಎಂದು ಪ್ರಶಂಸೆ ಗಳಿಸುತ್ತಿರುವ,  ನಾಡಿನ ಶ್ರೇಷ್ಠ ಬರಹಗಾರರೆಂದು ಬೀಗಿ ನಡೆಯುತ್ತಿರುವ ಸಾಹಿತಿಗಳು ತಾವು ರಚಿಸುತ್ತಿರುವ ಕೃತಿಗಳು, ಬರಹಗಳು ಭಯೋತ್ಪಾದಕನ ಗುಂಡು ಗಳಿಗಿಂತ ಅಪಾಯಕಾರಿ ಎಂದು ಕಾಣಲು ವಿಫಲರಾಗುತ್ತಿರುವುದು ನಮ್ಮ ದೌರ್ಭಾಗ್ಯ ಎಂದೇ ಹೇಳಬೇಕು. ಈ ರೀತಿ ಮನುಷ್ಯರ ಮಧ್ಯೆ, ಸಮುದಾಯಗಳ ನಡುವೆ ಒಡಕನ್ನು ತಂದು ನಿಲ್ಲಿಸುವವರು "ಬೌದ್ಧಿಕ ಭಯೋತ್ಪಾದಕರು" (intellectual terrorists) ಮತ್ತು ಈ ಸಾಹಿತಿಗಳ ಭಯೋತ್ಪಾದನೆ ದೇಶಕ್ಕೆ ಗಂಡಾಂತರಕಾರಿ ಎಂದು ನಾವು ಅರಿತುಕೊಳ್ಳುವುದು ಸಮಯ ಮೀರಿದಾಗಲೋ?       


 

Rating
No votes yet

Comments