ಸುಭಾಷಿತ
ಕಾದ ಕಾವಲಿಯ ಮೇಲೆ ಬಿದ್ದ ನೀರ ಹನಿಯೊಂದು ಆವಿಯಾಗಿ ತನ್ನ ಸ್ವರೂಪವನ್ನೇ ಕಳೆದುಕೊಳ್ಳುತ್ತದೆ.
ಕಮಲದೆಲೆಯ ಮೇಲೆ ಬಿದ್ದ ಅದೇ ನೀರ ಹನಿಯು ಸೂರ್ಯನ ಬೆಳಕಿನಲ್ಲಿ ಮುತ್ತಿನಂತೆ ಕಂಗೊಳಿಸುತ್ತದೆ.
ಸ್ವಾತಿ ನಕ್ಷತ್ರದಲ್ಲಿ ಕಪ್ಪೆಚಿಪ್ಪನ್ನು ಪ್ರವೇಶಿಸಿದ ಅದೇ ನೀರ ಹನಿಯು ಅನರ್ಘ್ಯವಾದ ಮುತ್ತೇ ಆಗುತ್ತದೆ.
ಹೀಗೆ ಉತ್ತಮ, ಮಧ್ಯಮ ಮತ್ತು ಅಧಮವೆಂಬ ಮೂರು ಗುಣಗಳೂ ಸಹವಾಸದಿಂದ ಉಂಟಾಗುತ್ತವೆ!
- ಭರ್ತೃಹರಿಯ ನೀತಿಶತಕ (ಕನ್ನಡ ಭಾವಾನುವಾದ)