ಸತ್ಯ
ಸತ್ಯ
ಕಷ್ಟವೇನಲ್ಲ,
ಹುಡುಕಿದರೆ ಸಿಕ್ಕೀತು
ಬದುಕಲಗತ್ಯದ ಪ್ರೀತಿ!
ಕಠಿಣಾತಿ ಕಷ್ಟ,
ಹುಡುಕಿದರೂ ಸಿಕ್ಕದು
ಎಲ್ಲಿಹುದದು ಸತ್ಯ?
ಅಯ್ಯೋ ಮರುಳೆ,
ಪಂಡಿತೋತ್ತಮರೆಂದರು
ದೇವರೇ ಸತ್ಯ!
ದೇವರು? ಸತ್ಯ?
ಎಲ್ಲಿಹುದದು ಸತ್ಯ?
ಇನ್ನು ದೇವರು?
ಸಿಕ್ಕರೂ ಸತ್ಯ,
ಮುಖವಾಡದಡಗಿಹುದು ಸತ್ಯ,
ಅರ್ಥವಾಗದ ಸತ್ಯ!
ಅರ್ಥೈಸಿದರೆ ಸತ್ಯ,
ಪಥ್ಯವಾದರೆ ಸತ್ಯ,
ದೇವನೊಲಿವ, ಸತ್ಯ!
****
-ಕವಿನಾಗರಾಜ್.
ಎಲ್ಲಾ ಸಂಪದಿಗರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
Rating
Comments
ಉ: ಸತ್ಯ
In reply to ಉ: ಸತ್ಯ by ksraghavendranavada
ಉ: ಸತ್ಯ
ಉ: ಸತ್ಯ
In reply to ಉ: ಸತ್ಯ by asuhegde
ಉ: ಸತ್ಯ
ಉ: ಸತ್ಯ
In reply to ಉ: ಸತ್ಯ by gopinatha
ಉ: ಸತ್ಯ