ಓರ್ವ ವಿಜ್ಞಾನಿ ಮತ್ತು ಉಸಿರಾಡುವ ಭೂಮಿ

ಓರ್ವ ವಿಜ್ಞಾನಿ ಮತ್ತು ಉಸಿರಾಡುವ ಭೂಮಿ

ಚಿತ್ರ ಕೃಪೆ: ನ್ಯೂಯಾರ್ಕ್ ಟೈಮ್ಸ್

ಭೂತಾಪದಲ್ಲಿ ಏರಿಕೆ ವಿಷಯ ಹಲವು ದೇಶಗಳ ರಾಜಕಾರಣಿಗಳ ತಾಪಮಾನವನ್ನು ಏರಿಸುವುದನ್ನು ಕಂಡಿದ್ದೇವೆ. ಪ್ರಗತಿಗಾಗಿ ಮಾನವ ತನ್ನೆಲ್ಲಾ ಬುದ್ಧಿ ಶಕ್ತಿಯನ್ನೂ ಹರಿಬಿಟ್ಟಂತೆಯೇ ವಾತಾವರಣ ಕೂಡ ತನ್ನ ಕೋಪ ತಾಪವನ್ನು ಮನುಜನ ಮೇಲೆ ಹರಿ ಬಿಡಲು ಆರಂಭಿಸಿತು. ಪರಿಣಾಮ? ಅಕಾಲಿಕ ಮಳೆ, ಪ್ರವಾಹ, ಸುನಾಮಿ, ಚಂಡಮಾರುತಗಳು ಭೂತಾಯಿಯ ಶಾಪಗಳಾಗಿ ನಮ್ಮನ್ನು ಕಾಡಲು ತೊಡಗಿದವು. ಆದರೆ ಈ ಗ್ಲೋಬಲ್ ವಾರ್ಮಿಂಗ್ ಎಂದು ಚಿರಪರಿಚಿತವಾಗಿರುವ ಭೂತಾಪದಲ್ಲಿನ ಏರಿಕೆಯ ಈ ವಿದ್ಯಮಾನ ಎಷ್ಟು ಜನರಿಗೆ ತಿಳಿದಿದೆ. ನಮ್ಮ ಮಾಧ್ಯಮಗಳು ಈ ಕುರಿತು ಜನರ ಗಮನ ಹರಿಸುವಲ್ಲಿ ಮತ್ತು ಅವರನ್ನು ಜಾಗೃತರಾಗಿಸುವಲ್ಲಿ ಎಷ್ಟು ಮಟ್ಟಿಗೆ ಯಶಸ್ವೀಗಳಾಗಿದ್ದಾರೆ ಎಂದು ನೋಡಿದಾಗ ನಮಗೆ ಸಿಗುವುದು ನಿರಾಶದಾಯಕ ಬೆಳವಣಿಗೆ. ಪತ್ರಿಕೋದ್ಯಮ ಅಂಥ ದೊಡ್ಡ ಗ್ಲಾಮರಸ್ ಕೆಲಸ ಅಲ್ಲ ಮಾತ್ರವಲ್ಲ ಅದರಲ್ಲಿ ಸಿಗುವ ಕಾಸು ಸಹ ಅಷ್ಟಕ್ಕಷ್ಟೇ ಎನ್ನುವ ಅಭಿಪ್ರಾಯದ ಕಾರಣ ಎಲ್ಲರೂ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪದವಿಗಳತ್ತ ಕಣ್ಣು ಹಾಕಿದರೆ ಪತ್ರಿಕೋದ್ಯಮ ಪ್ರತಿಭೆಯ ಕೊರತೆಯಿಂದ ಸೊರಗಿತು ನಮ್ಮ ದೇಶದಲ್ಲಿ. ವಿದೇಶೀ ಪತ್ರಿಕೆಗಳೊಂದಿಗೆ ನಮ್ಮ ಪತ್ರಿಕೆಗಳನ್ನು ಹೋಲಿಸಿ ನೋಡಿದಾಗ ಮನವರಿಕೆ ಆದೀತು ನಮ್ಮ ಪತ್ರಿಕೆಗಳ ಗುಣಮಟ್ಟ ಎಂಥದ್ದು ಎಂದು. ಅವಕ್ಕೆ ಕ್ಷುಲ್ಲಕ ವಿಷಯಗಳತ್ತ ಹೆಚ್ಚು ಗಮನ. liz hurley ಎಂಬ ಮಧ್ಯವಯಸ್ಕ ಬೆಡಗಿ ಭಾರತೀಯ ಸಂಜಾತ ಅರುಣ್ ನಾಯರ್ ನಿಗೆ ಕೊಕ್ ಕೊಟ್ಟು ಶೇನ್ ವಾರ್ನ್ ಜೊತೆಗಿನ ಆಕೆಯ ಚಕ್ಕಂದ ನಮ್ಮ ಮಾಧ್ಯಮಗಳಿಗೆ  ದೊಡ್ಡ ಸುದ್ದಿ.  

ನಿನ್ನೆ ಅಮೆರಿಕೆಯ newyork times ಪತ್ರಿಕೆಯಲ್ಲಿ “A Scientist, His Work and a Climate Reckoning”  ಎನ್ನುವ ತಲೆಬರಹವಿರುವ ಲೇಖನ ಪ್ರಕಟವಾಯಿತು. ಭೂತಾಪದ ಬಗ್ಗೆ ಅಮೆರಿಕೆಯ ವಿಜ್ಞಾನಿಯೋರ್ವನ ಸಂಶೋಧನೆ ಮತ್ತು ವಾತಾವರಣದ ಬಗ್ಗೆ ಐದು ಪುಟಗಳ ಲೇಖನವಿದೆ. ದಯಮಾಡಿ ಈ ಕೊಂಡಿಯನ್ನು ಕ್ಲಿಕ್ಕಿಸಿ ಓದಿ. ಕನ್ನಡದಲ್ಲಿ ತರ್ಜುಮೆ ಮಾಡಲು ಸಮಯದ ಅಭಾವದ ಕಾರಣ ಮಾಡಲಾಗಲಿಲ್ಲ.  http://www.nytimes.com/2010/12/22/science/earth/22carbon.html?pagewanted=1&_r=1

 

 

 

Rating
No votes yet

Comments