ಕನ್ನಡವೇ ಸತ್ಯ ಕನ್ನಡವೇ ನಿತ್ಯ !
ಎಲ್ಲಾದರು ಇರು ಎಂತಾದರು ಇರು
ಎಂದೆಂದಿಗು ನೀ ಕನ್ನಡವಾಗಿರು
ಕನ್ನಡ ಗೋವಿನ ಓ ಮುದ್ದಿನ ಕರು
ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು!
ನೀ ಮೆಟ್ಟುವ ನೆಲ- ಅದೆ ಕರ್ನಾಟಕ!
ನೀನೇರುವ ಮಲೆ-ಸಹ್ಯಾದ್ರಿ
ನೀ ಮುಟ್ಟುವ ಮರ-ಶ್ರೀಗಂದದ ಮರ
ನೀ ಕುಡಿಯುವ ನೀರ್-ಕಾವೇರಿ!
ಪಂಪನನೋದುವ ನಿನ್ನಾ ನಾಲಿಗೆ
ಕನ್ನಡವೇ ಸತ್ಯ
ಕುಮಾರವ್ಯಾಸನನಾಲಿಪ ಕಿವಿಯದು
ಕನ್ನಡವೇ ನಿತ್ಯ
-ಕುವೆಂಪು
Rating