“ಪಂಚ ಕನ್ಯೆ” ಯರ ವಿದಾಯ
“ಪಂಚ ಕನ್ಯೆ” ಯರ ವಿದಾಯ ಪರಂಪರೆ ಮುಕ್ತಾಯ, ನೇಪಾಳದಲ್ಲಿ.
ಪಂಚ ಕನ್ಯೆಯರು ಎಂದ ಕೂಡಲೇ ಆರತಿ, ಭಾರತಿ, ಮಂಜುಳ, ಕಲ್ಪನ, ಚಂದ್ರಕಲಾ.... ಇವರೇ ನಮ್ಮ ಕನ್ನಡ ನಾಡಿನ ಪಂಚ ಕನ್ನೆಯರೂ......ಎನ್ನೋ ಹಾಡು ನೆನಪಿಗೆ ಬಂದಿರಬೇಕು ಆಲ್ವಾ? ಬಿಟ್ಹಾಕಿ, ಇದು ಆ ಗತಕಾಲದ ಮನ ರಂಜಿಸಿದ ಕನ್ನೆಯರ ಕಥೆಯಲ್ಲ, ನಮ್ಮ ದೇಶದ ಉತ್ತರದ ಗಡಿಯಾಚೆಗಿನ ನೇಪಾಳದ ಕನ್ನೆಯರ ವ್ಯಥೆಯ ಕಥೆಯಿದು.
ನೇಪಾಳದ ರಾಷ್ಟ್ರ ನಾಯಕ ಹೊರದೇಶದ ಪ್ರವಾಸ ಹೊರಟಾಗ ಅವರನ್ನು ಬೀಳ್ಕೊಡಲು ಐದು ಕನ್ಯೆಯರನ್ನು ಸಿದ್ಧ ಪಡಿಸಲಾಗುತ್ತಿತ್ತಂತೆ. ದುರ್ಗ, ಸರಸ್ವತಿ, ಲಕ್ಷ್ಮಿ, ರಾಧ, ಅನ್ನಪೂರ್ಣ ಎನ್ನುವ ಯಶಸ್ಸನ್ನು ತರುವ ಈ ದೇವತೆಗಳನ್ನು ಪ್ರತಿನಿಧಿಸುವ ಪಂಚ ಕನ್ಯೆಯರು ಪ್ರವಾಸ ಹೋಗುವ ನಾಯಕನಿಗೆ ಶುಭವಾಗಲು ಮತ್ತು ಸಂಪತ್ತು ಸಿಗಲೆಂದು ಹಾರೈಸಿ ಈ ವ್ಯವಸ್ಥೆ ಮಾಡುತ್ತಿದ್ದರಂತೆ. ಶಾಲೆಗೆ ಹೋಗುವ ಈ ಹೆಣ್ಣು ಮಕ್ಕಳು ಸುಡು ಬಿಸಿಲಿನಲ್ಲಿ ಬೆವರು ಸುರಿಸುತ್ತಾ ನಿಂತು ಅವರಿಗೆ ಶುಭ ಕೋರುವುದನ್ನು ಕಂಡು ಮರುಗಿದ ಅಧ್ಯಕ್ಷರು ಈ ಪರಂಪರೆಗೆ ಮಂಗಳ ಹಾಡಲು ತೀರ್ಮಾನಿಸಿದರಂತೆ.
ಶತಮಾನಗಳಿಂದ ನಡೆದು ಕೊಂಡು ಬರುತ್ತಿದ್ದ ಈ five virgin farewell ಸಮಾರೋಹದ ಪರಂಪರೆಗೆ ನೇಪಾಳದ ಅಧ್ಯಕ್ಷರು ಕೊನೆಗೂ good bye, good riddance ಹೇಳಿ ಸುಡು ಬಿಸಿಲಿನ ಬೇಗೆಯಿಂದ ಕನ್ನೆಯರ ಬಿಡುಗಡೆಗೆ ನಾಂದಿ ಹಾಡಿದರು.
Rating
Comments
ಉ: “ಪಂಚ ಕನ್ಯೆ” ಯರ ವಿದಾಯ