ಛತ್ರಪತಿ ಶಿವಾಜಿಯ ತಂದೆಯ ಸಮಾಧಿಗೆ ಸ್ಥಳ ಒದಗಿಸಿದವರು ಕೆಳದಿಯರಸರು

ಛತ್ರಪತಿ ಶಿವಾಜಿಯ ತಂದೆಯ ಸಮಾಧಿಗೆ ಸ್ಥಳ ಒದಗಿಸಿದವರು ಕೆಳದಿಯರಸರು

 

     ಶಿವಾಜಿಯ ತಂದೆ ಶಹಾಜಿ ಭೋಸ್ಲೆ ಕರ್ನಾಟಕದ ಹೋದಿಗ್ಗೆರೆ (ಚನ್ನಗಿರಿ ತಾಲ್ಲೂಕು, ದಾವಣಗೆರೆ ಜಿಲ್ಲೆ) ಅರಣ್ಯದಲ್ಲಿ ಬೇಟೆಯಾಡುವ ಸಂದರ್ಭದಲ್ಲಿ ಕುದುರೆಯಿಂದ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡು ೧೬೬೫ರಲ್ಲಿ ಮೃತನಾದಾಗ ಆತನ ದೇಹವನ್ನು ಹೋದಿಗ್ಗೆರೆಯಲ್ಲೇ ಸಮಾಧಿ ಮಾಡಲಾಯಿತು. ಆಗ ಹೋದಿಗ್ಗೆರೆ ಕೆಳದಿಯ ರಾಜ್ಯದ ಸೀಮೆಯಲ್ಲೇ ಬರುತ್ತಿದ್ದು, ಶಹಾಜಿಯನ್ನು ಆ ಗ್ರಾಮದಲ್ಲೇ ಸಮಾಧಿ ಮಾಡಲು ಅವಕಾಶ ಕೊಟ್ಟದ್ದು ಕೆಳದಿಯ ಅರಸರೇ. ಈ ಸಮಾಧಿಯನ್ನು ಸರ್ಕಾರವು ಸಂರಕ್ಷಿತ ಸ್ಮಾರಕವೆಂದು ಘೋಷಿಸಿದೆ. ಶಿವಾಜಿಯ ಅನುಯಾಯಿಗಳಾಗಿ ಈಗ ಬೆಳಗಾವಿ ಮುಂದಿಟ್ಟುಕೊಂಡು ಶಾಂತಿ ಕದಡಲು ಪ್ರಯತ್ನಿಸುತ್ತಿರುವವರು ವಾಸ್ತವವಾಗಿ ಕರ್ನಾಟಕಕ್ಕೆ ಕೃತಜ್ಞರಾಗಿರಬೇಕಲ್ಲವೇ?
************
-ಕ.ವೆಂ.ನಾಗರಾಜ್.

Link: ಛತ್ರಪತಿ ಶಿವಾಜಿಯ ಮಗ ರಾಜಾರಾಮನನ್ನು ರಕ್ಷಿಸಿದ ಧೀರವನಿತೆ ಕೆಳದಿಯ ರಾಣಿ ಚೆನ್ನಮ್ಮ

 

Comments