ಅಶೋಕಹೆಗಡೆ ಕಥಾಲೋಕ - ಒಳ್ಳೆಯವನು
"ಧಾರವಾಡದ ಬೀದಿಯಲ್ಲಿ, ಒಂದು ಕೈಯಲ್ಲಿ ಚೀಲ ಮತ್ತೊಂದು ಕೈಯಲ್ಲಿ ಮಗುವನ್ನು ಹಿಡಿದು, ಗಿರಾಕಿಗಾಗಿ ಕಾಯುತ್ತ ನಿಂತ ದೇವತೆ; ಬದಲಾದ ಆರ್ಥಿಕ ಸ್ಥಿತಿಯಲ್ಲಿ ಬದುಕಿನ ಹೋರಾಟ ನಡೆಸುವ ಕುಟುಂಬ; ದಟ್ಟ ಅಡವಿಯನ್ನು ಬರಿದಾಗಿಸುತ್ತಿರುವ ಲಾರಿಗಳು; ಬಾರ್‌ನಲ್ಲಿ, ಡ್ಯಾನ್ಸ್ ಮಾಡುತ್ತ ಸಹಜ ಬದುಕಿಗೆ ಹಂಬಲಿಸುವ ಹುಡುಗಿಯರು; ಇವರೆಲ್ಲರ ಮಧ್ಯವೇ ಒಂದು ಕೈಯಲ್ಲಿ ತಂಗಿಯನ್ನು, ಮತ್ತೊಂದು ಕೈಯಲ್ಲಿ ತಮ್ಮನನ್ನು ಹಿಡಿದುಕೊಂಡು, ಧೀರೋದಾತ್ತ ಹೆಜ್ಜೆ ಇಟ್ಟು ನಡೆದುಹೋದ ಬಾಲಕ; ಪಕ್ಕದಲ್ಲಿಯೆ ಹಾಲಿಲ್ಲದೆ ಮಲಗಿರುವ ಪುಟ್ಟ ಮಗು, ಅದನ್ನ ಕಂಡರೂ ಕಾಣದಂತೆ ಸರಿದು ಹೋದ ನನ್ನ ಸಣ್ಣತನ; ಪತ್ರಗಳಲ್ಲಿಯೂ ದೂರವಾಗಿಯೆ ಉಳಿಯುವ ಸಂಬಂಧದ ನಂಟು; ಪ್ರತಿಯೊಂದರಲ್ಲಿಯೂ ಸಾಕ್ಷಿಗಾಗಿ ಹುಡುಕುವ ವ್ಯವಸ್ಥೆ; ತಲೆತಲಾಂತರದಿಂದ ಬಂದ ಅಪ್ಪ ಮಗನ ನಡುವಿನ ಬಿರುಕು; ಎಲ್ಲರ ನೋವು, ನಲಿವು, ಸಡಗರ ಮತ್ತು ಇದೆಲ್ಲದರ ಮಧ್ಯವೂ ಅರಳುವ ಬದುಕಿನ ಮಳೆಯ ಹಾತೆಯ ಒಂದು ಕ್ಷಣವನ್ನ ಹಿಡಿದಿಡಲು ಮೀಸಲಿಟ್ಟ ಈ ಕ್ಷಣವೊಂದು ನಿನ್ನನ್ನು ತಲುಪುವಲ್ಲಿ ಮಾತ್ರ ಧನ್ಯವಾಗಬಲ್ಲದು"
-ತಮ್ಮ `ಒಳ್ಳೆಯವನು' ಕಥಾಸಂಕಲನದ ಮೊದಲಿಗೆ ಅಶೋಕ್ ಹೆಗಡೆ ಹೇಳುವ ಮಾತುಗಳಿವು.
ಅಕ್ಷರ ಪ್ರಕಾಶನ, ಹೆಗ್ಗೋಡು, ಸಾಗರ.
ಪುಟಗಳು ೧೦೪, ಬೆಲೆ ರೂಪಾಯಿ ಅರವತ್ತು.