ಕನ್ನಡ ಗಾದೆಗಳು

ಕನ್ನಡ ಗಾದೆಗಳು

ಬರಹ

೧. ಹಟದಿಂದ ಹೆಣ್ಣು ಕೆಟ್ಟಳು ಚಟದಿಂದ ಗಂಡು ಕೆಟ್ಟ
೨. ಗಂಡಸರ ಕೈಯಲ್ಲಿ ಕೂಸು ನಿಲ್ಲದು ಹೆಂಗಸರ ಕೈಯಲ್ಲಿ ಮಾತು ನಿಲ್ಲದು
೩. ಎಳ್ಳಿನಲ್ಲಿ ಎಣ್ಣೆ ಅಡಕ ಹಾಲಿನಲ್ಲಿ ಬೆಣ್ಣೆ ಅಡಕ
೪. ಮೇಲೆ ಬಸಪ್ಪ ಒಳಗೆ ವಿಷಪ್ಪ
೫. ಹೊರಗೆ ಬೆಳಕು ಒಳಗೆ ಕೊಳಕು
೬. ಹಿಟ್ಟೂ ಹಳಸಿತ್ತು ನಾಯಿಯೂ ಹಸಿದಿತ್ತು
೭. ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ
೮. ಏಕಾದಶಿಯ ಮನೆಗೆ ಶಿವರಾತ್ರಿ ಬಂದ ಹಾಗೆ
೯. ಒಪ್ಪವಿಲ್ಲದ ಮಾತು ತುಪ್ಪವಿಲ್ಲದ ಊಟ
೧೦. ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
೧೧. ಇದ್ದಾಗ ಹಿರಿಯಣ್ಣ ಇಲ್ಲದಾಗ ತಿರಿಯಣ್ಣ
೧೨. ಒಕ್ಕುವುದು ರೈತನ ಗುಣ ನೆಕ್ಕುವುದು ನಾಯಿಯ ಗುಣ
೧೩. ಅರಮನೆಯ ಮುಂದಿರಬೇಡ ಕುದುರೆಯ ಹಿಂದಿರಬೇಡ
೧೪. ತಾಯಿಯಂತೆ ಮಗಳು ನೂಲಿನಂತೆ ಸೀರೆ
೧೫. ಕತ್ತೆಯಂಥ ಅತ್ತೆ ಬೇಕು ಮುತ್ತಿನಂಥ ಗಂಡ ಬೇಕು
೧೬. ಅರಿತರೆ ಮಾತನಾಡು ಮರೆತರೆ ಕೂತು ನೋಡು
೧೭. ತೋಳ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು
೧೮. ಹಾಲಿದ್ದ ಕಡೆ ಬೆಕ್ಕು ಕೂಳಿದ್ದ ಕಡೆ ನಾಯಿ
೧೯. ಆಪತ್ತಿಗಾದವನೇ ನೆಂಟ ಕೆಲಸಕ್ಕಾದವನೇ ಭಂಟ
೨೦. ಗಂಜಿಯ ಕುಡಿದರೂ ಗಂಡನ ಮನೆ ಲೇಸು
೨೧. ಒಲಿದರೆ ನಾರಿ ಮುನಿದರೆ ಮಾರಿ
೨೨. ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು
೨೩. ಕಚ್ಚೋ ನಾಯಿ ಬೊಗಳುವುದಿಲ್ಲ
೨೪. ತುಂಬಿದ ಕೊಡ ತುಳುಕುವುದಿಲ್ಲ
೨೫. ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ
೨೬. ತಾಳಿದವನು ಬಾಳಿಯಾನು
೨೭. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ?
೨೮. ಆರಕ್ಕೆ ಏರಲಿಲ್ಲ ಮೂರಕ್ಕೆ ಇಳಿಯಲಿಲ್ಲ
೨೯. ಮುದುಕರಿಗೆ ಮುದ್ದೆ ಕೇಡು ಹಳೇ ಬಟ್ಟೆಗೆ ನೂಲು ಕೇಡು
೩೦. ಲಾಲಿಸಿದರೆ ಮಕ್ಕಳು ಪೂಜಿಸಿದರೆ ದೇವರು
೩೧. ಉತ್ತರೆ ಹೊಲ ಚಂದ ಬಿತ್ತರೆ ಬೆಳೆ ಚಂದ
೩೨. ಅಂಗೈ ಹುಣ್ಣಿಗೆ ಕನ್ನಡಿ ಬೇಕೇ?
೩೩. ಹಂಗಿನರಮನೆಗಿಂತ ಕುಂದಣದ ಗುಡಿ ಲೇಸು
೩೪. ಹಸಿದು ಹಲಸು ಉಂಡು ಮಾವು