ನನ್ನೊಳಗೆ

ನನ್ನೊಳಗೆ

ಬರಹ

ಏಕಾಂತದಲ್ಲೆಲ್ಲೋ.. ಕಾಡುವ ದನಿ..
ಯಾವುದೋ ಪಿಸುಮತು, ಮತ್ತಾವುದೋ ಸ್ವರ..
ಯಾರದೋ ಕೇಕೆ, ಮತ್ತಾರದೋ ಆಕ್ರಂದನ..

ಒಮ್ಮೆ, ಕಟ್ಟು ಬಿಚ್ಚಿದ ಅಶ್ವಗಳ ನಾಗಲೋಟದಂತೆ..
ಮತ್ತೊಮ್ಮೆ, ಯಾರೋ ಹಾಕಿದ ಲಯಬದ್ದ ತಾಳದಂತೆ..

ಎಷ್ಟೋ ಬಾರಿ.. ಮಲಗಿದ್ದಿದೆ, ಶಪಿಸಿ..
ಯಾವುದೀ ದರಿದ್ರ ದನಿಯೆಂದು..

ಬಹಳ ತಡವಾಯಿತೋ ಏನೋ.. ತಿಳಿದದ್ದು
ಈ ರೀತಿ ವರ್ತಿಸುವ ಹೃದಯ, ನನ್ನಲ್ಲೇ.. ಇದೆಯೆಂದು..