ನಿನ್ನೊಲುಮೆಯಿಂದಲೆ
ಬರಹ
ರಚನೆ: ಕೆ.ಎಸ್. ನರಸಿಂಹಸ್ವಾಮಿ
ಕವನ ಸಂಕಲನ: ಮೈಸೂರು ಮಲ್ಲಿಗೆ
ನಿನ್ನೊಲುಮೆಯಿಂದಲೆ ಬಾಳು ಬೆಳಕಾಗಿರಲು
ಚಂದ್ರಮುಖಿ ನೀನೆನಲು ತಪ್ಪೇನೆ |ಪ|
ನಿನ್ನ ಸೌಜನ್ಯವೆ ದಾರಿ ನೆರಳಾಗಿರಲು
ನಿತ್ಯ ಸುಖಿ ನೀನೆನಲು ಒಪ್ಪೇನೆ
ನಿನ್ನ ನಗೆ ಮಲ್ಲಿಗೆಯ ಪರಿಮಳದ ಪಾತ್ರೆಯಲಿ
ಚೆಲ್ಲಿ ಸೂಸುವ ಅಮೃತ ನೀನೇನೆ
ನನ್ನ ಕನಸುಗಳೆಲ್ಲ ಕೈಗೊಳುವ ಯಾತ್ರೆಯಲಿ
ಸಿದ್ಧಿಸುವ ಧನ್ಯತೆಯು ನೀನೇನೆ |೧|
ನಿನ್ನ ಕಿರುನಗೆಯಿಂದ, ನಗೆಯಿಂದ ನುಡಿಯಿಂದ
ಎತ್ತರದ ಮನೆ ನನ್ನ ಬದುಕೆನೆ
ಚಂದ್ರನಲಿ ಚಿತ್ರಿಸಿದ, ಚೆಲುವಿನೊಳಗುರಿಯಿಂದ
ಗಂಗೆ ಬಂದಳು ಇತ್ತ ಕಡೆಗೆನೆ |೨|