ನಮ್ಮ ಹೆಮ್ಮೆಯ ಭಾರತ (ಭಾಗ 37 - 38)
೩೭.ಅಮುಲ್: ಹಾಲು ಉತ್ಪಾದಕರ ಬೃಹತ್ ಒಕ್ಕೂಟ
ಅಮುಲ್ ಎಂದರೆ ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್. ಗುಜರಾತಿನ ಆನಂದ್ ಎಂಬ ಊರಿನಲ್ಲಿ ಶುರುವಾದ ಹಾಲು ಉತ್ಪಾದಕರ ಪುಟ್ಟ ಸಂಘಟನೆ ಜಗತ್ತಿನ ಮುಂಚೂಣಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಕೈಗಾರಿಕೆಯಾಗಿ ಬೆಳೆದ ಕಥೆ. ಈ ಸಹಕಾರಿ ಸಂಘಟನೆಯ ಯಶಸ್ಸಿಗೆ ಕಾರಣರು ಡಾ. ವರ್ಗೀಸ್ ಕುರಿಯನ್. ಅವರು ಇದನ್ನು ಮೂವತ್ತು ವರುಷಗಳ ಕಾಲ ಮುನ್ನಡೆಸಿದರು. ಅವರ ಪುಸ್ತಕ "ಐ ಹ್ಯಾಡ್ ಎ ಡ್ರೀಮ್” ಈ ವಿಸ್ಮಯದ ಯಶೋಗಾಥೆಯ ಕಥನ.
“ಅಮುಲ್" ಹಲವು ಜಾಗತಿಕ ದಾಖಲೆಗಳ ಸರದಾರ. ಇದು ಜಗತ್ತಿನ ಅತಿ ದೊಡ್ಡ ಪ್ಯಾಕೆಟ್ ಹಾಲಿನ ಬ್ರಾಂಡ್ ಮತ್ತು ಅತಿ ದೊಡ್ಡ ಸಸ್ಯಾಹಾರಿ ಚೀಸ್ ಬ್ರಾಂಡ್. ಜೊತೆಗೆ, ಭಾರತದ ಅತ್ಯಂತ ದೊಡ್ಡ ಆಹಾರ ವಸ್ತುಗಳ ಬ್ರಾಂಡ್ ಅಮುಲ್.
- Read more about ನಮ್ಮ ಹೆಮ್ಮೆಯ ಭಾರತ (ಭಾಗ 37 - 38)
- Log in or register to post comments