ಕಲಾಕೃತಿಗಳ ಮಾಯಾಲೋಕಕ್ಕೆ ಜನಸಮುದಾಯದ ಸೇತು: ಉತ್ಸವ್ ರಾಕ್ ಗಾರ್ಡನ್
ಅಲ್ಲಿ ಎತ್ತಕಂಡರತ್ತ ಆಳೆತ್ತರದ ಮಣ್ಣಿನ ಶಿಲ್ಪಗಳು. ಹಳ್ಳಿ ಬದುಕಿನ ಕಾಯಕಗಳು, ಬೇಸಾಯದ ಕೆಲಸಗಳು, ವಿವಿಧ ಗುಡಿಕೈಗಾರಿಕೆಗಳು, ಹತ್ತಾರು ಜಾನಪದ ಕಲಾಭಂಗಿಗಳು - ಇವೆಲ್ಲದರಲ್ಲಿ ನಿರತರಾಗಿರುವ ವ್ಯಕ್ತಿಗಳ ಶಿಲ್ಪಗಳು. ಪ್ರತಿಯೊಂದು ಶಿಲ್ಪವೂ ಜೀವಂತ ಎನಿಸುವಂತಿದೆ!
ಅದುವೇ ಉತ್ಸವ್ ರಾಕ್ ಗಾರ್ಡನ್. ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಗೊಟಗೋಡಿ ಗ್ರಾಮದಲ್ಲಿ ಪುಣೆ - ಬೆಂಗಳೂರು ಹೆದ್ದಾರಿಯ ಪಕ್ಕದಲ್ಲಿರುವ ಶೈಕ್ಷಣಿಕ ಸಾಂಸ್ಕೃತಿಕ ಪ್ರವಾಸಿ ಕೇಂದ್ರ. ಆರು ವರುಷಗಳ ಮುನ್ನ, ೧೧ ಜನವರಿ ೨೦೧೪ರಂದು ಅಲ್ಲಿನ ಅದ್ಭುತ ಕಲಾಕೃತಿಗಳನ್ನು ನೋಡುತ್ತಾ ನೋಡುತ್ತಾ ಅರ್ಧ ದಿನವೇ ಕಳೆದಿತ್ತು.