ಮಂಗಳೂರಿನ ನೀರಿನ ಬಿಲ್‍ಗಳ "ಸುದ್ದಿ"
ಮಂಗಳೂರು ಮಹಾನಗರಪಾಲಿಕೆಯ ೨೦೦೯-೧೦ರ ಬಜೆಟನ್ನು ೨೮ ಜೂನ್ ೨೦೦೯ರಂದು ಮಂಡಿಸಲಾಯಿತು. ಇದರಲ್ಲಿ ಮಂಗಳೂರಿನ ನೀರು ಬಳಕೆದಾರರಿಗೆ ವಿಧಿಸುವ ನೀರಿನ ಶುಲ್ಕದಿಂದ ಸಂಗ್ರಹವಾಗುವ ಆದಾಯ ರೂಪಾಯಿ ೨೮.೫ ಕೋಟಿ ಎಂದು ಅಂದಾಜಿಸಲಾಗಿದೆ. (ಈ ಸಾಲಿನ ಪಾಲಿಕೆಯ ಒಟ್ಟು ಆದಾಯ ರೂ.೧೭೫.೩೮ ಕೋಟಿ ಮತ್ತು ಒಟ್ಟು ವೆಚ್ಚ ರೂ. ೧೭೩.೯೦ ಕೋಟಿ)
ನೀರಿನ ಶುಲ್ಕದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾ ಹೋದಂತೆ ಅದರ ವಿವಿಧ ಮುಖಗಳು ತೆರೆದುಕೊಳ್ಳುತ್ತವೆ. ಮಂಗಳೂರು ಮಹಾನಗರಪಾಲಿಕೆ ಪ್ರದೇಶದಲ್ಲಿ ಸುಮಾರು ೫೪,೦೦೦ ನೀರಿನ ಮೀಟರ್‍ಗಳನ್ನು ಅಳವಡಿಸಲಾಗಿದೆ. ಈ ಎಲ್ಲ ನೀರಿನ ಬಳಕೆದಾರರಿಗೆ ಜೂನ್ ೨೦೦೮ರ ವರೆಗೆ ಅರ್ಧ ವಾರ್ಷಿಕ (ಆರು ತಿಂಗಳಿಗೊಮ್ಮೆ) ನೀರಿನ ಬಿಲ್ ನೀಡಲಾಗುತ್ತಿತ್ತು.
- Read more about ಮಂಗಳೂರಿನ ನೀರಿನ ಬಿಲ್‍ಗಳ "ಸುದ್ದಿ"
- Log in or register to post comments