ನುಡಿಮುತ್ತುಗಳು

August 20, 2005
0
ಸತ್ತೆನೆಂದೆನಬೇಡ; ಸೋತೆನೆಂದೆನಬೇಡ । ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ।। ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು । ಮತ್ತೆ ತೋರ್ಪುದು ನಾಳೆ -- ಮಂಕುತಿಮ್ಮ ।।
August 20, 2005
0
ಕೆಟ್ಟ ಪ್ರಪಂಚವಿದು, ಸುಟ್ಟ ಕರಿ ನರಮನಸು । ಬಿಟ್ಟುಬಿಡಲರಿದದನು, ಕಟ್ಟಿಕೊಳೆ ಮಷ್ಟು ।। ಮುಷ್ಟಿ ಮುಟ್ಟದವೋಲುಪಾಯದಿಂ ನೋಡದನು । ಗಟ್ಟಿ ಪುರುಳೇನಿಲ್ಲ -- ಮಂಕುತಿಮ್ಮ ।।
August 20, 2005
0
ಋತುಚಕ್ರ ತಿರುಗುವುದು, ಕಾಲನೆದೆ ಮರುಗುವುದು । ಮೃತನ ಮಣ್ಣಿಂದ ಹೊಸ ಹುಲ್ಲು ಮೊಳೆಯುವುದು ।। ಕ್ಷಿತಿ ಗರ್ಭಧರಿಸುವಳು ಮತ್ತುದಿಸುವುದು ಜೀವ । ಸತತ ಕೃಷಿಯೋ ಪ್ರಕೃತಿ -- ಮಂಕುತಿಮ್ಮ ।
August 20, 2005
0
ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ । ಅಭಾಸವನು ಸತ್ಯವೆಂದು ಬೆಮಿಸುವುದುಮ್ ।। ಸೌಭಾಗ್ಯಗಳನರಸಿ ದೌರ್ಭಾಗ್ಯಕ್ಕೀಡಹುದುಮ್ । ಅಭಿಶಾಪ ನರಕುಲಕೆ -- ಮಂಕುತಿಮ್ಮ ।।
August 20, 2005
0
ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ
August 18, 2005
0
ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನ ಮಾಡಬಾರದು. ಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿ ಹೋಗುವ ಬದಲು ಆ ಮನುಷ್ಯನ ಬಳಿ ಸೇರುತ್ತೇವೆ.
July 31, 2005
1
ಆಡದೆಲೆ ಕೊಡುವವನು ರೂಢಿಯೊಳಗುತ್ತಮನು ಆಡಿ ಕೊಡುವವ ಮಧ್ಯಮನು ಅಧಮ ತಾನಾಡಿ ಕೊಡದವನು ಸರ್ವಜ್ಞ
July 26, 2005
0
ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ । ಚಿನ್ನದಾತುರಕಿಂತ ಹೆಣ್ಣುಗಂಡೊಲವು ।। ಮನ್ನಣೆಯ ದಾಹವೀಯೆಲ್ಲಕಂ ತೀಕ್ಷ್ಣತಮ । ತಿನ್ನುವುದದಾತ್ಮವನೆ -- ಮಂಕುತಿಮ್ಮ ।।
July 24, 2005
0
ಏನೇನೋ ನಡೆದಿಹವು ವಿಜ್ಞಾನ ಸಂಧಾನ । ಮಾನುಷ್ಯ ಬಾಂಧವ್ಯವೊಂದು ಮುರಿದಿಹುದು ।। ತಾನೊಡರ್ಚಿದ ಹೊನ್ನರಸವೆ ನರನ ಕೊರಳ್ಗೆ । ನೇಣಾಗಿಹುದು ನೋಡು - ಮರಳ ಮುನಿಯ ।।
July 24, 2005
0
ವನ್ಯಮೃಗಗಳ ನಡುವೆ ಗೋವು ಬಂದೇನಿಹುದು? । ಪಣ್ಯವೀಧಿಯಲಿ ತಾತ್ವಿಕನಿಗೇನಿಹದು? ।। ಅನ್ಯಾಯದುನ್ಮತ್ತ ಕೋಲಾಹಲದ ಲೋಕ । ಪುಣ್ಯವನು ಚಿಂತಿಪುದೆ? -- ಮಂಕುತಿಮ್ಮ ।।
July 24, 2005
0
ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ । ಜಗಕೆ ಕಾಣಿಪುದೊಂದು, ಮನೆಯ ಜನಕೊಂದು ।। ಸೊಗಸಿನೆಳಸಿಕೆಗೊಂದು, ತನ್ನಾತ್ಮಕ್ಕಿನ್ನೊಂದು । ಬಗೆಯೆಷ್ಟೊ ಮೊಗವಷ್ಟು -- ಮಂಕುತಿಮ್ಮ ।।
July 24, 2005
0
ಹತ್ಯೆಯೋ ಹನ್ಯತೆಯೋ ವಿಜಯವೋ ಪರಿಭವವೋ । ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ।। ಕೃತನಿರ್ಣಯ ಬಾಹ್ಯಲಾಭನಷ್ಟದಿನಲ್ಲ । ಆತ್ಮಋಣವದು ಜಗಕೆ -- ಮಂಕುತಿಮ್ಮ ।।
July 24, 2005
0
ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು । ಕಲ್ಲಾಗು ಕಷ್ಟಗಳ ವಿಧಿ ಮಳೆ ಸುರಿಯೆ ।। ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ । ಎಲ್ಲರೊಳಗೊಂದಾಗು -- ಮಂಕುತಿಮ್ಮ ।।
July 24, 2005
0

ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು ಕಲ್ಲಾಗು ಕಷ್ಟಗಳ ವಿಧಿ ಮಳೆ ಸುರಿಯೆ ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ ಎಲ್ಲರೊಳಗೊಂದಾಗು -- ಮಂಕುತಿಮ್ಮ